ಮೊದಲನೆಯ ವಾಚನ : ಎಫೆಸಿಯರಿಗೆ 2:19-22
ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.
ಕೀರ್ತನೆ : 117 :1bc, 2
ಶ್ಲೋಕ : ಆತನನ್ನು ಹೋಗಳಿ ಹಾಡಿ ಸಾರ್ವಜನಾಂಗಗಳೇ
ಶುಭಸಂದೇಶ: ಯೊವಾನ್ನ20:24-29
ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.
No comments:
Post a Comment