ಮೊದಲನೇ ವಾಚನ: ದಾನಿಯೇಲ 7:9-10, 13-14
ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು. ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು. ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು. ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!
ಕೀರ್ತನೆ: 97:1-2, 5-6, 9
ಶ್ಲೋಕ: ಪ್ರಭುವೇ, ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ
ಉಲ್ಲಾಷಿಸಲಿ ಧರಣಿಮಂಡಲದಾದ್ಯಂತ
ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ
ಇವೆ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲೂ
ನ್ಯಾಯನೀತಿ ಆತನ ಗದ್ದುಗೆಯಸ್ತಿವಾರಗಳು
ಸಾರ್ವಭೌಮನಾದ ಪ್ರಭುವಿನ ಮುಂದೆ
ಕರಗುತ್ತಿವೆ ಬೆಟ್ಟಗುಡ್ಡಗಳು ಮೇಣದಂತೆ
ಘೋಷಿಸುತ್ತಿದೆ ಗಗನಮಂಡಲ ಆತನ ನೀತಿಯನು
ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು
ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ
ಮಹೋನ್ನತನು ನೀನು ದೇವರುಗಳಿಗೆಲ್ಲಾ
ಎರಡನೇ ವಾಚನ: ಪೇತ್ರ 1:16-19
ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ. ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು. ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು. ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು. ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.
ಶುಭಸಂದೇಶ: ಮತ್ತಾಯ 17:1-9
No comments:
Post a Comment