ಮೊದಲನೇ ವಾಚನ: 1 ಥೆಸಲೋನಿಯರಿಗೆ 4:9-11
ಸೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ. ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ. ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.
ಕೀರ್ತನೆ: 98:1, 7-8, 9
ಶ್ಲೋಕ: ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು.
ಎಸಗಿಹನಾತನು ಪವಾಡ ಕಾರ್ಯಗಳನು
ಗಳಿಸಿತಾತನ ಕೈ ಪೂತಭುಜ ಗೆಲುವನು
ಗರ್ಜಿಸಲಿ ಸಮುದ್ರವು ಅವರಲ್ಲಿರುವುದೆಲ್ಲವು
ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು
ಚಪ್ಪಾಳೆ ಹೊಡೆಯಲಿ ನದಿಗಳು
ತಟ್ಟಾಡಲಿ ಬೆಟ್ಟಗುಡ್ಡಗಳು

ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು
ಜಗಕು, ಜನೆತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು
"ಅದು ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ. ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ. ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ. ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ. ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ. ಬಹಳ ಕಾಲವಾದ ಬಳಿಕ ಆ ದಣಿ ಹಿಂದಿರುಗಿ ಬಂದ. ಸೇವಕರಿಂದ ಲೆಕ್ಕಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, "ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾಸಿದ್ದೇನೆ." ಎಂದ. ಅದಕ್ಕೆ ಆ ಧಣಿ, "ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು," ಎಂದ. ಎರಡು ತಲೆಂತು ಪಡೆದಿದ್ದವನೂ ಮಂದೆ ಬಂದು, "ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ," ಎಂದ. ಧಣಿ ಅವನಿಗೂ, "ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು," ಎಂದ. ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ: 'ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು; ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ," ಎಂದ. "ಆಗ ಧಣಿ ಅವನಿಗೆ, "ಎಲವೋ ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲು ಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿ ಮಾಡುವವನು ಎಂದು ನಿನಗೆ ಗೊತ್ತಿಲ್ಲವೆ? ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿ ಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ", ಎಂದ. ಆನಂತರ ಪರಿಚಾರಕರಿಗೆ, "ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ. ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ. ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಿಡಬೇಕಾಗುವುದು," ಎಂದು ಹೇಳಿದ.

ಶುಭಸಂದೇಶ: ಮತ್ತಾಯ 25:14-30

No comments:
Post a Comment