ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

27.10.21

 ಮೊದಲನೇ ವಾಚನ: ರೋಮನರಿಗೆ 8:26-30

ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಅತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ. ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ. ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು. ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ. ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋ ಅವರನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ. ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

ಕೀರ್ತನೆ: 13:4-5, 6
ಶ್ಲೋಕ: ಪ್ರಭೂ, ನಿನ್ನಚಲ ಪ್ರೀತಿಯಲ್ಲಿದೆ ನನಗೆ ವಿಶ್ವಾಸ

ಶುಭಸಂದೇಶ: ಲೂಕ 13:22-30

ಯೇಸುಸ್ವಾಮಿ ಊರುರೂಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು. ಆಗ ಒಬ್ಬನು, "ಸ್ವಾಮಿಾ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೋ?", ಎಂದು ವಿಚಾರಿಸಿದನು. ಆಗ ಯೇಸು ಜನರಿಗೆ, "ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ  ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, "ಸ್ವಾಮಿಾ , ನಮಗೆ ಬಾಗಿಲು ತೆರೆಯಿರಿ," ಎಂದು ನೀವು ಕೇಳುವಿರಿ. ಅದಕ್ಕೆ ಅವನು, "ನೀವು ಎಲ್ಲಿಯವರೋ ನಾನು ಅರಿಯೆ" ಎನ್ನುವನು. ಆಗ ನೀವು, "ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ," ಎಂದು ಹೇಳಲಾರಂಭಿಸುವಿರಿ. ಆದರೆ ಅವನು ಪುನಃ, ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೆ, ಎಲ್ಲರೂ ನನ್ನಿಂದ ತೊಲಗಿರಿ," ಎಂದು ಸ್ವಷ್ಟವಾಗಿ ನುಡಿಯುವನು. ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲುಕಡಿತವೇನು!! 29 ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟಗಳಲ್ಲಿ ಭಾಗಿಗಳಾಗುವರು. "ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು," ಎಂದರು.

No comments:

Post a Comment