ಮೊದಲನೇ ವಾಚನ: ಯೆಶಾಯ 26:1-6
ಕಾಲ ಬರುವುದು; ಆಗ ಹಾಡುವರು ಜುದೇಯನಾಡಿನಲ್ಲಿ ಈ ಗೀತೆಯನ್ನು: ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ, ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆ, ಸ್ಥಿರ ಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ, ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನು; ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು. ಈಡಾಗುವುದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.
ಕೀರ್ತನೆ: 118:1, 8-9, 19-21, 25-27
ಶ್ಲೋಕ: ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯ ಮಂಗಳ
ಶುಭಸಂದೇಶ: ಮತ್ತಾಯ 7:21, 24-27
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನನ್ನನ್ನು "ಸ್ವಾಮಿಾ, ಸ್ವಾಮಿಾ," ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನು ಹೋಲುತ್ತಾನೆ ಮಳೆ ಬಿತ್ತು, ನೆರೆ ಬಂತು ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ದಿಹೀನನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು: ಅದು ಕುಸಿದು ಬಿತ್ತು ಅದಕ್ಕಾದ ಪತನವೋ ಆಗಾಧ!"
No comments:
Post a Comment