ಮೊದಲನೇ ವಾಚನ: ಸಂಖ್ಯಾಕಾಂಡದಿಂದ ವಾಚನ 6:22-27
ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು: ‘ನೀವು ಇಸ್ರಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳುಬೇಕು - ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ, ಕಾಪಾಡಲಿ! ಸರ್ವೇಶ್ವರ ಪ್ರಸನ್ನ ಮುಖದಿಂದ ನಿಮ್ಮನ್ನು ನೋಡಿ, ನಿಮಗೆ ದಯೆತೋರಲಿ! ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು, ಶಾಂತಿಯನ್ನು ಅನುಗ್ರಹಿಸಲಿ!’ ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”
ಕೀರ್ತನೆ: 67:2-3, 5, 6, 8
ಶ್ಲೋಕ: ಹರಸು ದೇವಾ, ನಮ್ಮನ್ನಾಶಿರ್ವದಿಸು
ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ /
ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ //
ನಿನ್ನ ಕೀರ್ತಿಸಲಿ ದೇವಾ, ಜನರು /
ಸಂಕೀರ್ತಿಸಲಿ ಅವರೆಲ್ಲರೂ //
ನಿನ್ನ ಕೀರ್ತಿಸಲಿ ದೇವಾ, ಜನರು /
ಸಂಕೀರ್ತಿಸಲಿ ಅವರೆಲ್ಲರೂ //
ಇತ್ತನೆಮ್ಮ ದೇವನು ಆಶೀರ್ವಾದವನು /
ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು //
ಎರಡನೇ ವಾಚನ: ಗಲಾತ್ಯರಿಗೆ: 4:4-7
ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು. ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು. ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ. ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ. ಮಗನೆಂದಮೇಲೆ ನೀನು ವಾರಸುದಾರನೂ ಹೌದು.
ಶುಭಸ೦ದೇಶ: ಲೂಕ 2:16-21
ಆ ಕಾಲದಲ್ಲಿ, ಕುರುಬರು ತ್ವರೆಯಾಗಿ ಹೋಗಿ, ಮರಿಯಳನ್ನೂ ಜೋಸೆಫನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡರು. ಕಂಡಮೇಲೆ ಆ ಮಗುವಿನ ವಿಷಯವಾಗಿ ದೂತನು ತಮಗೆ ಹೇಳಿದ್ದನ್ನೆಲ್ಲ ಅವರಿಗೆ ತಿಳಿಯಪಡಿಸಿದರು. ಕುರುಬರು ಹೇಳಿದ ವಿಷಯವನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು. ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು. ಶಿಶು ಯೇಸುವಿನ ನಾಮಕರಣ ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ ‘ಯೇಸು’ ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು.
No comments:
Post a Comment