ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮ ಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:
02.02.22 - “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು"
ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು. ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು. ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು. ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು. ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು. ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮ ಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ, ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:
01.02.22
ಕಿವಿಗೊಡು, ದೀನನು, ದಲಿತನು ನಾನು||
ಕಾಪಾಡು ಪ್ರಭೂ, ನಾ ನಿನ್ನ ಭಕ್ತನು|
ಉದ್ಧರಿಸು ನಿನ್ನ ನಂಬಿದ ದಾಸನನು||
ನೀನೆನಗೆ ದೇವನು, ಕರುಣಿಸೆನ್ನನು|
ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು||
ನಿನ್ನ ದಾಸನಿಗೆ ನೀಡು ಮನದಾನಂದವನು|
ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು||
ಪ್ರಭೂ, ನೀನು ದಯಾವಂತನು, ಕ್ಷಮಿಸುವವನೂ|
ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು||
ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ|
ನನ್ನ ವಿಜ್ಞಾಪನೆಗಳ ಕೋರಿಕೆಗೆ||
ಅಲ್ಲೆಲೂಯ, ಅಲ್ಲೆಲೂಯ!
ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು |
ಶತ್ರು ರಹಿತ ಹಾದಿಯಲಿ ನಡೆಸು ಎನ್ನನು ||
ಅಲ್ಲೆಲೂಯ!
31.01.22 - “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,”
ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿ ಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟು ಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು. ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇ ಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು. ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮಿ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು. ಅವನು ದಾವೀದನ, ಅವನ ಎಲ್ಲ ಸೇವಕರ, ಎಡಬಲದಲ್ಲಿದ್ದ ಸೈನಿಕರ ಹಾಗು ಶೂರರ ಕಡೆಗೆ ಕಲ್ಲೆಸೆಯತೊಡಗಿದನು. ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ. ಅವರು, ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು. ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು. ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು. ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾವಿೂನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ. ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು. ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿ ಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವರಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟು ಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರ ಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ, ಎಂದು ಅವರಿಗೆ ವಿವರಿಸು,” ಎಂದರು. ಅಂತೆಯೇ ಅವನು ಹೊರಟು ಹೋಗಿ, ಯೇಸು ತನಗೆ ಮಾಡಿದ ಮಹಾದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯ ಚಕಿತರಾದರು.
30.01.22 - "ಯಾವ ಪ್ರವಾದಿಯು ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ"
ಮೊದಲನೇ ವಾಚನ: ಯೆರೆಮೀಯ 1: 4-5, 17-19
29.01.21 - "ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?”
28.01.22 - “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ?"
ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗೂ ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳು ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಸುಂದರಿಯಾದ ಒಬ್ಬ ಸ್ತ್ರೀ ಸ್ನಾನ ಮಾಡುವುದನ್ನು ಕಂಡನು. ಕೂಡಲೇ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು ಆಕೆ “ ಎಲೀಯಾಮನ ಮಗಳೂ ಹಿತ್ತಿಯನಾದ ಉರೀಯನ ಹೆಂಡತಿಯು ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು. ಆಕೆ ಆಗತಾನೆ ಋತು ಸ್ನಾನ ಮಾಡಿ ಕೊಂಡಿದ್ದಳು. ಆಕೆಯನ್ನು ಕರೆದು ತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಆನಂತರ ಆಕೆ ತನ್ನ ಮನೆಗೆ ಹೋದಳು. ಮುಂದೆ ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು. ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ “ ಹಿತ್ತೀಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು. ಊರೀಯನು ಬಂದಾಗ ’ಯೋವಾಬನು, ಸೈನ್ಯದವರು ಹೇಗಿರುತ್ತಾರೆ? ಯುದ್ಧವು ಹೇಗೆ ನಡೆಯುತ್ತಿದೆ” ಎಂದು ವಿಚಾರಿಸಿದನು. ಅನಂತರ ಅವನಿಗೆ “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೇ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು. ಆದರೆ ಊರೀಯನು ಮನೆಗೆ ಹೋಗದೆ ಅರಸರ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು. ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ದಾವೀದನು ಊರೀಯನಿಗೆ, “ನೀನು ದೀರ್ಘ ಪ್ರಯಾಣ ಮಾಡಿ ಬಂದಿರುವೆಯಲ್ಲ , ಏಕೆ ಮನೆಗೆ ಹೋಗಲಿಲ್ಲ”? ಎಂದನು. ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೆ ಹೊರತು ತನ್ನ ಮನೆಗೆ ಹೋಗಲಿಲ್ಲ. ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರ ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟೂ ಕಳುಹಿಸಿದನು. ಅದರಲ್ಲಿ ಹೀಗೆ ಬರೆಯಲಾಗಿತ್ತು “ ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿ.” ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರು ಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತು ಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು. ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಮಡಿದನು.27.01.22 - "ಬೆಳಕಿಗೆ ಬಾರದ ಮುಚ್ಚು ಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ"
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಬೆಳಕಿಗೆ ಬಾರದ ಮುಚ್ಚು ಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ. “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು; ಇನ್ನೂ ಅಧಿಕವಾಗಿ ಕೊಡುವರು. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.
26.01.22 - “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ"
ಮೊದಲನೇ ವಾಚನ: 2 ತಿಮೊಥೇಯನಿಗೆ 1:1-8
ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದ ಪಡಬೇಕೆಂದು ಹಂಬಲಿಸುತ್ತಿದ್ದೇನೆ. ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ. ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಫಿಸುತ್ತೇನೆ. ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ. ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.
ಆ ಕಾಲದಲ್ಲಿ ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.
25.01.22 - "ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ"
ಆತನನು ಹೊಗಲಿ ಹಾಡಿ ಸರ್ವಜನಾಂಗಗಳೇ||
ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ|
ಆತನ ಸತ್ಯಪರತೆ ಇರುವುದು ಅನಂತ ಕಾಲ||
ಅಲ್ಲೆಲೂಯ, ಅಲ್ಲೆಲೂಯ!
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ | ನೀವು ಲೋಕಕ್ಕೆ ಹೋಗಬೇಕು ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ ||
ಅಲ್ಲೆಲೂಯ!
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: ‘ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ. ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು. ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು; ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷ ಪದಾರ್ಥಗಳನ್ನೇನಾದರೂ ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣ ಹೊಂದುವರು.”
24.01.22 - "ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು"
23.01.22 - "ಗೌಣವೆಂದೆಣಿಸಲಾಗುವ ಅಂಗಗಳಿಗೂ ವಿಶೇಷ ಘನತೆಯನ್ನು ಇತ್ತಿದ್ದಾರೆ"
ಮೊದಲನೇ ವಾಚನ: ನೆಹೆಮೀಯ 8:2-4, 5-6, 8-10
22.01.22
21.01.22 - "ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು."
ಮೊದಲನೇ ವಾಚನ: 1 ಸಮುವೇಲ 24:2-21





















