ಮೊದಲನೇ ವಾಚನ: ಆದಿಕಾಂಡ 17:3-9
ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ದೇವರು ಅವನಿಗೆ, "ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಪ್ರಗಳಿಗೆ ಮೂಲಪುರುಷನಾಗುವೆ. ಇನ್ನ ಮುಂದೆ ನಿನಗೆ "ಅಬ್ರಾಮ" ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಪ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ "ಅಬ್ರಹಾಮ" ಎಂಬ ಹೆಸರಿರುವುದು. ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಪ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು. ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ರೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರ ಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ. ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ." ಇದಲ್ಲದೆ ದೇವರು ಅಬ್ರಾಹಾಮನಿಗೆ ಹೀಗೆಂದು ಹೇಳಿದರು: "ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು. ನೀನು ಮಾತ್ರವಲ್ಲ, ನಿನ್ನ ಸಂತತಿಯವರೂ ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು."
ಕೀರ್ತನೆ: 105:4-5, 6-7, 8-9
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು
ಶುಭಸಂದೇಶ: 8:51-59
ಯೇಸುಸ್ವಾಮಿ ಯೆಹೂದ್ಯರಿಗೆ: "ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯ ಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ," ಎಂದರು. "ನೀನು ದೆವ್ವ ಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, "ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು," ಎಂದು ಹೇಳುತ್ತಿರುವೆ; ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಟನೋ? ಆತನೂ ಸಾವಿಗೀಡಾದನು, ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?" ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು. ಯೇಸು ಪ್ರತ್ಯುತ್ತರವಾಗಿ, "ನನ್ನ ಘನತೆ ಗೌರವವನ್ನು ನಾನೇ ಸಾರ ಹೋರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆ ಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ "ಅವರು ನಮ್ಮ ದೇವರು ಎಂದು ನೀವು ಹೇಳಿಕೊಳ್ಳುತ್ತೀರಿ. ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ" ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ. ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವೆನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು," ಎಂದು ಉತ್ತರಕೊಟ್ಟರು. ಯೆಹೂದ್ಯರು, "ನಿನಗಿನ್ನೂ ಐವತ್ತು ವರ್ಷವಾಗಿಲ್ಲ;. ನೀನು ಅಬ್ರಹಾಮನನ್ನು ನೋಡಿದ್ದೀಯಾ?" ಎಂದರು. ಯೇಸು ಅವರಿಗೆ, ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ," ಎಂದು ಮರುನುಡಿದರು. ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟು ಹೋದರು.
ಮನಸಿಗೊಂದಿಷ್ಟು : ಯಹೂದ್ಯರು ಇಲ್ಲಿ ಯೇಸುವಿನ ಅಸ್ತಿತ್ವವನ್ನೇ ಪ್ರಶ್ನಿಸುತ್ತಾರೆ. ದೇವರೇ ಅವರೊಡನಿದ್ದರೂ , ಪ್ರವಾದಿಗಳ, ಧರ್ಮಶಾಸ್ತ್ರಗಳ ಬಗ್ಗೆ ಆಳವಾದ ಜ್ಞಾನವಿದ್ದರೂ ಅವರ ಮನಸುಗಳು ಕಲ್ಲಾಗಿದ್ದವು, ಮುಚ್ಚಿಹೋಗಿದ್ದವು. ನಾವೂ ಸಹಾ ಅದೇ ಅಪಾಯವನ್ನು ಎದುರಿಸುತ್ತಿದ್ದೇವೆ . ಕ್ರಿಸ್ತ ಸದಾ ನಮ್ಮ ಜೊತೆ ಇರಲು ಬಯಸಿದರೂ ನಾವು ದೂರ ದೂರ ಸಾಗುತ್ತೇವೆ. "ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು" ಎಂದು ದೇವರು ಅಬ್ರಹಾಮನಿಗೆ ಹೇಳಿದ ಮಾತು ನಮ್ಮನ್ನು ಸದಾ ಎಚ್ಚರಿಸುತ್ತಿರಲಿ
ಪ್ರಶ್ನೆ : ಕ್ರಿಸ್ತನೇ ದೇವರು ಎಂಬ ಅನುಮಾನವಿಲ್ಲದ ವಿಶ್ವಾಸ ನಮ್ಮಲ್ಲಿದೆಯೇ?
ಮನಸಿಗೊಂದಿಷ್ಟು : ಯಹೂದ್ಯರು ಇಲ್ಲಿ ಯೇಸುವಿನ ಅಸ್ತಿತ್ವವನ್ನೇ ಪ್ರಶ್ನಿಸುತ್ತಾರೆ. ದೇವರೇ ಅವರೊಡನಿದ್ದರೂ , ಪ್ರವಾದಿಗಳ, ಧರ್ಮಶಾಸ್ತ್ರಗಳ ಬಗ್ಗೆ ಆಳವಾದ ಜ್ಞಾನವಿದ್ದರೂ ಅವರ ಮನಸುಗಳು ಕಲ್ಲಾಗಿದ್ದವು, ಮುಚ್ಚಿಹೋಗಿದ್ದವು. ನಾವೂ ಸಹಾ ಅದೇ ಅಪಾಯವನ್ನು ಎದುರಿಸುತ್ತಿದ್ದೇವೆ . ಕ್ರಿಸ್ತ ಸದಾ ನಮ್ಮ ಜೊತೆ ಇರಲು ಬಯಸಿದರೂ ನಾವು ದೂರ ದೂರ ಸಾಗುತ್ತೇವೆ. "ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು" ಎಂದು ದೇವರು ಅಬ್ರಹಾಮನಿಗೆ ಹೇಳಿದ ಮಾತು ನಮ್ಮನ್ನು ಸದಾ ಎಚ್ಚರಿಸುತ್ತಿರಲಿ
ಪ್ರಶ್ನೆ : ಕ್ರಿಸ್ತನೇ ದೇವರು ಎಂಬ ಅನುಮಾನವಿಲ್ಲದ ವಿಶ್ವಾಸ ನಮ್ಮಲ್ಲಿದೆಯೇ?
No comments:
Post a Comment