ಮೊದಲನೇ ವಾಚನ: ೧ ಕೊರಿಂಥಿಯರಿಗೆ 3:1-9
ಕೀರ್ತನೆ: 33:12-13, 14-15, 20-21
ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
ಶುಭಸಂದೇಶ: ಲೂಕ 4:38-44
ಮೊದಲನೇ ವಾಚನ: ೧ ಕೊರಿಂಥಿಯರಿಗೆ 3:1-9
ಕೀರ್ತನೆ: 33:12-13, 14-15, 20-21
ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
ಶುಭಸಂದೇಶ: ಲೂಕ 4:38-44
ಮೊದಲನೇ ವಾಚನ: ಪ್ರವಾದಿ ಯೆಜೆಕಿಯೇಲನ ಗ್ರಂಥ 43:1-7
ಕೀರ್ತನೆ: 85:9-10, 11-12, 13-14
ಶ್ಲೋಕ: ಪ್ರಭುವಿನ ಮಹಿಮೆ ನಾಡಿನಲ್ಲಿರುವುದು ನಿರುತ
ಶುಭಸಂದೇಶ: ಮತ್ತಾಯ 23:1-12
ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸುಸ್ವಾಮಿ ಇಂತೆಂದರು: “ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ. ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ. ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು. ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ. ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ. ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ. 8ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.
ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು. ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು. ಆಕೆ ತುಂಬು ಗರ್ಭಿಣಿ, ಪ್ರಸವವೇದನೆಯಿಂದ ನರಳುತ್ತಿದ್ದಳು. ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು. ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿ ಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತು. ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು. ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು. ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು: “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ. ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.
ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ. ಒಬ್ಬ ಮನುಷ್ಯನಿಂದ ಸಾವು ಸಂಭವಿಸಿದಂತೆಯೇ ಒಬ್ಬ ಮನುಷ್ಯನಿಂದಲೇ ಸತ್ತವರಿಗೆ ಪುನರುತ್ಥಾನವು ಪರಿಣಮಿಸಿತು. ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ. ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ. ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು. ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ. ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ. “ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅದರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.ಶುಭಸಂದೇಶ: ಮತ್ತಾಯ: 19:13-15