ಮೊದಲನೇ ವಾಚನ: ಧರ್ಮೋಪದೇಶಕಾಂಡ 30:10-14
ಮೋಶೆಯು ಇಸ್ರಯೇಲರನ್ನು ಕುರಿತು ಹೀಗೆಂದನು. "ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟು ಮಾಡುವರು. ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶ ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದುದಲ್ಲ. ಸಾಧಿಸುವುದಕ್ಕೆ ಅಸಾಧ್ಯವಾದುದ್ದೂ ಅಲ್ಲ. ಇದು ಮೇಲಣ ಲೋಕದಲ್ಲಿರುವ ಮಾತಲ್ಲ. "ನಿಮಗಾಗಿ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ಧಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು" ಎಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ. ಇದು ಸಮೂದ್ರದ ಆಚೆ ಇರುವ ಮಾತಲ್ಲ; "ನಿಮಗಾಗಿ ಸಮೂದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳೂತ್ತಿದ್ದೆವು" ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ. ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ.
ಕೀರ್ತನೆ: 69: 14, 17, 30-31, 33-34, 36, 37
ಶ್ಲೋಕ: ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು.
ಎರಡನೇ ವಾಚನ: ಕೊಲೊಸ್ಸೆಯರಿಗೆ 1:15-20
ಅದೃಶ್ಯ ದೇವನ ಅದೃಶ್ಯ ರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ. ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ ಅಧಿಪತ್ಯವಾಗಿರಲಿ, ಅದುದೆಲ್ಲವೂ ಅತನಲಿ. ಆತನಿಂದ ಆತನಿಗಾಗಿ. ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ. ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲ್ಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ. ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವ ಸಂಪೂರ್ಣತೆಯನು. ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿ ಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.
ಶುಭಸಂದೇಶ: ಲೂಕ
ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ "ಬೋಧಕರೇ, ಅಮರ ಜೀವ ನನಗೆ ಪ್ರಾಪ್ತಿಯಾಗಬೇಕಾದರೆ ನಾನು ಮಾಡಬೇಕಾದುದು ಏನು?" ಎಂದು ಕೇಳಿದನು. ಅದಕ್ಕೆ ಯೇಸು, "ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?" ಎಂದು ಮರು ಪ್ರಶ್ನೆ ಹಾಕಿದರು. ಅವನು, "ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು" ಎಂದಿದೆ," ಎಂದು ಉತ್ತರ ಕೊಟ್ಟನು. ಯೇಸು, "ಸರಿಯಾಗಿ ಉತ್ತರ ಕೊಟ್ಟೆ. ಅದರಂತೆ ಮಾಡು. ನಿನಗೆ ಅಮರ ಜೀವ ಲಭಿಸುವುದು," ಎಂದರು. ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, "ನನ್ನ ನೆರೆಯವರು ಯಾರು?" ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು. ಯೇಸು ಅವನಿಗೆ ಹೀಗೆಂದು ವಿವರಿಸಿದರು. "ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ, ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆ ಜೀವ ಮಾಡಿ, ಅಲ್ಲೇ ಬಿಟ್ಟುಹೋದರು.
ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದು ಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಿಸಿಕೊಂಡು ಹೋದ . ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ ಹಾಗೆಯೇ ಬಳಸಿಕೊಂಡು ಹೋದ. ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟ. ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ, ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕ ಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ. ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, "ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚವಾದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ," ಎಂದ. ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?" ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅದಕ್ಕೆ ಅವನು, "ದಯೆ ತೋರಿದವನೇ ನೆರೆಯವನು," ಎಂದನು. ಆಗ ಯೇಸು, "ಹೋಗು, ನೀನು ಹಾಗೆಯೇ ಮಾಡು," ಎಂದು ಹೇಳಿದರು.

![]() |
No comments:
Post a Comment