
30.09.22

29.09.22 - " ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,”
ಮೊದಲನೇ ವಾಚನ: ದಾನಿಯೇಲನು 7:9-10, 13-14
ಕೀರ್ತನೆ: 138:1-2, 2-3, 4-5
ಶ್ಲೋಕ: ಹೃದಯಪೂರ್ವಕ ವಂದನೆ ಪ್ರಭೂ ನಿನಗೆ, ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ.
ಶುಭಸಂದೇಶ: ಯೋವಾನ್ನ 1:47-51
28.09.22
ಮೊದಲನೇ ವಾಚನ: ಯೋಬ 9:1-12, 14-16
ಯೋಬನು ಉತ್ತರಿಸುತ್ತಾ ಹೀಗೆಂದನು: “ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು? ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು. ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ. ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ. ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ. ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು. ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ. ದಕ್ಷಿಣದ ನಕ್ಷತ್ರಗ್ರಹಗಳನೂ ಸಪ್ತರ್ಷಿಮಂಡಲವನೂ ಮೃಗಶಿರವನೂ ಕೃತ್ತಿಕೆಯನೂ ನಿರ್ಮಿಸಿದವನು ಆತನೇ. ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು. ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು. ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು? ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು! ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು. ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.
ಕೀರ್ತನೆ: 88:10-11, 12-13, 14-15
ಶ್ಲೋಕ: ಓ ಪ್ರಭೂ, ನನ್ನ ಕೂಗು ನಿನ್ನ ಕಿವಿಗೆ ಬೀಳಲಿ.
ಶುಭಸಂದೇಶ: ಲೂಕ 9:57-62
ಯೇಸುಸ್ವಾಮಿ ತಮ್ಮ ಶಿಷ್ಯರೊಂದಿಗೆ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು. ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು. ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು. ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು. ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು. 62ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.
27.09.22
26.09.22 - "ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ;"
ಮೊದಲನೇ ವಾಚನ: ಯೋಬ 1:6-22
ಕೀರ್ತನೆ: 17:1, 2-3, 6-7
ಶ್ಲೋಕ: ಪುನರುದ್ಧರಿಸುವನು ಪ್ರಭು ಸಿಯೋನನು
ಶುಭಸಂದೇಶ: ಲೂಕ 9:46-50
25.09.22 - ಮನವೇ, ವಂದಿಸು ಪ್ರಭುವನು
24.09.22 - “ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ"
ಮೊದಲನೇ ವಾಚನ: ಉಪದೇಶ 11:9--12:8
ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯ ವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು. ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು. ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು. ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು; ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು. ಕಿವಿಗಳು ಮಂದವಾಗಿ ಹಾದಿಬೀದಿಗಳ ಶಬ್ದವು ಕೇಳಿಸವು. ಬೀಸುವ ಶಬ್ದವು ತಗ್ಗಿ ಹಕ್ಕಿಯ ಶಬ್ದಗಳಷ್ಟು ಕಿರಿಯದಾಗುವುದು; ಬೀಸುವವರ ಹಾಡೆಲ್ಲಾ ಕುಗ್ಗಿ ಹೋಗುವುದು; ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂ ಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು, ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿ ಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು. ಮಣ್ಣಿನ ದೇಹ ತನ್ನ ಭೂಮಿಗೆ ಸೇರಿ ಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು, (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ). “ವ್ಯರ್ಥವೇ ವ್ಯರ್ಥ ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.
ಕೀರ್ತನೆ: 90:3-4, 5-6, 12-13, 14, 17
ಶ್ಲೋಕ: ಪ್ರಭೂ, ತಲತಲಾಂತರಕ್ಕೂ ಶ್ರೀನಿವಾಸ ನಿನೆಮಗೆ
ಶುಭಸಂದೇಶ: ಲುಕ 9:43-45
23.09.22 - “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ"
ಮೊದಲನೇ ವಾಚನ: ಉಪದೇಶ 3:1-11
ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ: ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ. ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ. ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ. ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ. ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ. ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ. ಪ್ರೀತಿಸುವ ಸಮಯ, ದ್ವೇಷಿಸುವ ಸಮಯ ಯುದ್ಧಮಾಡುವ ಸಮಯ, ಸಮಾಧಾನಮಾಡುವ ಸಮಯ. ಹೀಗೆ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. ಕಷ್ಟಪಟ್ಟು ಮಾಡುವ ದುಡಿಮೆಯಿಂದ ಒಬ್ಬನಿಗೆ ಸಿಗುವ ಲಾಭವಾದರೂ ಏನು? ನರಮಾನವರ ಕರ್ತವ್ಯವೆಂದು ದೇವರು ವಿಧಿಸಿರುವ ದುಡಿಮೆಯನ್ನು ನಾನು ಗಮನಿಸಿದ್ದೇನೆ. ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.
ಕೀರ್ತನೆ: 144:1-2, 3-4
ಶ್ಲೋಕ: ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯ ದುರ್ಗಕೆ
ಶುಭಸಂದೇಶ: ಲೂಕ 9:18-22
22.09.22 - ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’
ಮೊದಲನೇ ವಾಚನ: ಉಪದೇಶಕ 1:2-11
ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ! ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ದೊರಕುವ ಲಾಭವಾದರೂ ಏನು? ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ. ಸೂರ್ಯನು ಮೂಡುತ್ತಾನೆ, ಸೂರ್ಯನು ಮುಳುಗುತ್ತಾನೆ, ತಾನು ಹೊರಟ ಸ್ಥಳಕ್ಕೆ ಮರಳಿ ಓಡುತ್ತಾನೆ. ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ. ನದಿಗಳು ಹರಿದು ಸಮುದ್ರವನ್ನು ಸೇರುತ್ತವೆ, ಆದರೂ ಸಮುದ್ರವು ತುಂಬುವುದಿಲ್ಲ. ಅವು ಎಲ್ಲಿಂದ ಹರಿದು ಬರುತ್ತವೋ ಅಲ್ಲಿಗೆ ಹಿಂತಿರುಗಿ ಹೋಗುತ್ತವೆ. ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ. ಇದ್ದದ್ದೇ ಇರುತ್ತದೆ, ನಡೆದದ್ದೇ ನಡೆಯುತ್ತದೆ. ಲೋಕದಲ್ಲಿ ಹೊಸದೇನೂ ಇಲ್ಲ. ಇಗೋ, ಹೊಸದು ಎನಿಸುಕೊಳ್ಳುವ ವಸ್ತು ಇದ್ದರೂ ಅದು ನಮಗಿಂತ ಮುಂಚೆಯೇ ಪುರಾತನ ಕಾಲದಲ್ಲೇ ಇದ್ದುದು. ಹಿಂದಿನ ಕಾಲದವರ ಜ್ಞಾಪಕವು ಇಂದಿನವರಿಗಿಲ್ಲ. ಮುಂದಿನ ಕಾಲದವರ ಜ್ಞಾಪಕವು ಅವರಿಗಿಂತ ಮುಂದೆ ಬರುವವರಿಗೆ ಇರುವುದಿಲ್ಲ.
ಕೀರ್ತನೆ: 90:3-4, 5-6, 12-13, 14, 17
ಶ್ಲೋಕ: ಪ್ರಭೂ, ತಲತಲಾಂತರಕೂ ಶ್ರೀನಿವಾಸ ನೀನೆಮಗೆ
ಶುಭಸಂದೇಶ: ಲೂಕ 9:7-9
ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ ‘ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ’, ಎಂದು ಇನ್ನು ಕೆಲವರೂ ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ,’ ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು. ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.
21.09.22 - "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ"
ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲು ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭೂ ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ, ದೇವರೂ ಒಬ್ಬರೇ, ಸರ್ವರ ತಂದೆಯೂ ಇವರೇ; ಸರ್ವಶ್ರೇಷ್ಟರೂ ಅವರೇ; ಸರ್ವರ ಮುಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ. ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತ ಯೇಸು ಅನುಗ್ರಹಿಸಿರುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: ಈ ವೆಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರದೇಹವಾದ ಧರ್ಮಸಭೆ ಅಭಿವೃದ್ಧಿ ಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು. ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕ್ಯಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತ ಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ
20.09.22 - “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,”
ಮೊದಲನೇ ವಾಚನ: ಜ್ಞಾನೋಕ್ತಿಗಳು 21:1-6, 10-13
ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ. ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ. ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ. ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು. ಶ್ರಮಜೀವಿಗಳ ಯೋಜನೆಯಿಂದ ಸಮೃದ್ಧಿ; ತಾಳ್ಮೆಯಿಲ್ಲದ ತ್ವರೆಯಿಂದ ಅಧೋಗತಿ. ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು. ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ. ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ. ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ. ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?
ಕೀರ್ತನೆ: 119:1, 27, 30, 34, 35, 44
ಶ್ಲೋಕ: ಎನ್ನ ನಡೆಸು ಪ್ರಭೂ, ನಿನ್ನ ಆಜ್ಞಮಾರ್ಗದಲಿ
ಶುಭಸಂದೇಶ: ಲೂಕ 8:19-21
ಯೇಸುಸ್ವಾಮಿಯ ತಾಯಿ ಹಾಗೂ ಸಹೋದರರು ಯೇಸು ಇದ್ದೆಡೆಗೆ ಬಂದರು. ಆದರೆ ಜನಸಂದಣಿಯ ನಿಮಿತ್ತ ಹತ್ತಿರಕ್ಕೆ ಬರಲಾಗಲಿಲ್ಲ. ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು. ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.
19.09.22
18.09.22 - "ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,"
ಶ್ಲೋಕ: ಪ್ರಭುವಿನ ದಾಸರೇ, ಪ್ರಭುವಿನ ನಾಮಸ್ತುತಿಯನು ಮಾಡಿರಿ
17.09.22
ಮೊದಲನೇ ವಾಚನ: 1 ಕೊರಿಂಥಿಯರಿಗೆ 15:35-37, 42-49
ಸಹೋದರರೇ, ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು. ಮತಿಹೀನನೇ, ನೀನು ಬಿತ್ತಿದ ಬೀಜ ಸಾಯದಿದ್ದರೆ ಅದು ಜೀವ ತಾಳುವುದುಂಟೆ? ಇಲ್ಲ. ನೀನು ಬಿತ್ತುವುದು ಗೋದಿಯನ್ನು ಅಥವಾ ಇನ್ನಾವುದೋ ಕಾಳನ್ನು; ಮುಂದಕ್ಕೆ ಬೆಳೆಯಲಿರುವ ಇಡೀ ಗಿಡವನ್ನಲ್ಲ. ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು. ಬಿತ್ತಿದ್ದು ಕುರೂಪಿಯಾದುದು; ಪುನರುತ್ಥಾನಹೊಂದುವುದು ಕೋಮಲವಾದುದು. ಬಿತ್ತಿದ್ದು ಭೌತಿಕ ದೇಹ; ಪುನರುತ್ಥಾನ ಹೊಂದುವಂಥದ್ದು ಆಧ್ಯಾತ್ಮಿಕ ದೇಹ. ಭೌತಿಕ ದೇಹ ಇರುವುದು ಸತ್ಯವಾದರೆ ಆಧ್ಯಾತ್ಮಿಕ ದೇಹ ಇರುವುದೂ ಸತ್ಯ. ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ. ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು. ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು. ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ. ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.
ಕೀರ್ತನೆ 56:10-12, 13-14ಶ್ಲೋಕ: ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯ ಮಾಡಿರುವೆ
ಶುಭಸಂದೇಶ: ಲುಕ 8:4-15
ಜನರು ಊರೂರುಗಳಿಂದ ಹೊರಟು ಯೇಸುಸ್ವಾಮಿಯ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು: “ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲ್ತುಳಿತಕ್ಕೆ ಸಿಕ್ಕಿಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟವು. ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿಹೋದವು. ಇನ್ನೂ ಕೆಲವು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು. ಶಿಷ್ಯರು, ‘ಈ ಸಾಮತಿಯ ಅರ್ಥವೇನು?’ ಎಂದು ಕೇಳಿದಾಗ, ಯೇಸು ಇಂತೆಂದರು: ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.” “ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ. ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು. ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ. ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ. ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ. ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.” ಎಂದರು.
16.09.22 - ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರ ಮಾಡಿದರು.
ಮೊದಲನೇ ವಾಚನ: 1 ಕೊರಿಂಥಿಯರಿಗೆ 15:12-20
ಕೀರ್ತನೆ: 17:1, 6-7, 8, 15
ಶ್ಲೋಕ: ಪ್ರಭೂ, ನಿನ್ನ ಮಖದರ್ಶನದಿಂದ ನಾನು ಎಚ್ಚತ್ತು ತೃಪ್ತನಾಗುವೇನು.
ಶುಭಸಂದೇಶ: ಲೂಕ 8:1-3
15.09.22 - "ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ"
ಮೊದಲನೇ ವಾಚನ: 1 ಕೊರಿಂಥಿಯರಿಗೆ 15:1-11
ಕೀರ್ತನೆ: 118:1-2, 16-17, 28
ಶ್ಲೋಕ: ಸಲ್ಲಿಸಿ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ
ಶುಭಸಂದೇಶ: ಲೂಕ 7:36-50
14.09.22 - "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು"
ಮೊದಲನೇ ವಾಚನ: ಸಂಖ್ಯಾಕಾಂಡ - 21:4-9
ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,", ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ|
ಗಮನಕೊಡಿ ನಾ ಹೇಳುವ ಮಾತುಗಳಿಗೆ||
ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು|
ಹೊರಪಡಿಸುವೆನು ಪೂರ್ವಕಾಲದ ಗೂಢಾರ್ಥಗಳನು||
ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ||
ನೆನೆದರಾಗ ದೇವರೇ ತಮಗಾಶ್ರಯದುರ್ಗವೆಂದು|
ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು||
ಆದರೆ ಅವರ ನಾಲಿಗೆಯಾಡಿತು ಅಸತ್ಯ|
ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ||
ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ|
ಬದ್ದರಾಗಿರಲಿಲ್ಲ ಆತನ ನಿಬಂಧನೆಗಳಲಿ||
ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ|
ಕೋಪವ ತಾಳಿಕೊಂಡನು, ಹಲವು ವೇಳೆ ಉದ್ರೇಕಗೊಳ್ಳದೆ||

ಯೇಸು ನಿಕೊದೇಮನಿಗೆ ಇಂತೆಂದರು: "ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.
13.09.22 - “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,”
ಮೊದಲನೇ ವಾಚನ: 1 ಕೊರಿಂಥಿಯರಿಗೆ 12:12-14, 27-31
ಕೀರ್ತನೆ: 100:1-2, 3, 4, 5
ಶ್ಲೋಕ: ಪ್ರಭುವಿನ ಜನ, ಆತನೇ ಮೇಯಿಸುವ ಕುರಿಗಳು ನಾವು
ಭೊನಿವಾಸಿಗಳೇ, ಜಯಘೋಷಮಾಡಿ ಪ್ರಭುವಿಗೆ|ಅತಿಸಂತೋಷದಿಂದ ಸೇವೆಮಾಡಿ ಆತನಿಗೆ||
ಹಾಡುತಾ, ಪಾಡುತಾ, ಬನ್ನಿ ಆತನ ಸನ್ನಿಧಿಗೆ||
ಪಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು|
ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು|
ಆತನ ಜನ, ಆತನೇ ಮೇಯಿಸುವ ಕುರಿಗಳು ನಾವು||
ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದಗಳೊಂದಿಗೆ|
ಆತನ ನಾಮವನು ಕೊಂಡಾಡಿ ಉಪಕಾರ ಸ್ಮರಣೆಯೊಂದಿಗೆ||
ಹೌದು, ಪ್ರಭುವೆನಿತೋ ಒಳ್ಳೆಯವನು|
ಇರುವುದಾತನ ಪ್ರೀತಿ ಯುಗಯುಗಕು|
ಆತನ ಸತ್ಯತೆ ತಲತಲಾಂತರಕು||
ಅಲ್ಲೆಲೂಯ, ಅಲ್ಲೆಲೂಯ!
ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು, ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ,,
ಅಲ್ಲೆಲೂಯ!
ಶುಭಸಂದೇಶ: ಲೂಕ 7:11-17
12.09.22
ಜನರಿಗೆ ಮನ ಮುಟ್ಟುವಂತೆ ಭೋಧನೆ ಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು. ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು. ಶತಾಧಿಪತಿ ಯೇಸುವಿನ ವಿಷಯವನ್ನು ಕೇಳಿ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕನನ್ನು ಗುಣಪಡಿಸಲು ಬರಬೇಕೆಂದು ಮನವಿ ಮಾಡಿಕೊಂಡನು. ಅವರು ಯೇಸುವಿನ ಬಳಿಗೆ ಬಂದು, "ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಅರ್ಹನು; ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ," ಎಂದು ಬಹಳವಾಗಿ ವಿನಂತಿಸಿದರು. ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು 'ಬಾ', ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ "ಹೋಗು,' ಎಂದರೆ ಹೋಗುತ್ತಾನೆ. ಸೇವಕನಿಗೆ 'ಇಂಥದ್ದನ್ನು ಮಾಡು,' ಎಂದರೆ ಮಾಡುತ್ತಾನೆ. ಎಂದು ಹೇಳಿ ಕಳುಹಿಸಿದನು. ಅವನ ಈ ಮಾತನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿ ನೋಡಿ, "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ," ಎಂದರು.ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆ ಬಿದ್ದಿದ್ದ ಆ ಸೇವಕನು ಸ್ವಸ್ಥನಾಗಿದ್ದುದನ್ನು ಕಂಡರು.
11.09.22
ಜನರಿಗೆ ಮನ ಮುಟ್ಟುವಂತೆ ಭೋಧನೆ ಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು. ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು. ಶತಾಧಿಪತಿ ಯೇಸುವಿನ ವಿಷಯವನ್ನು ಕೇಳಿ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕನನ್ನು ಗುಣಪಡಿಸಲು ಬರಬೇಕೆಂದು ಮನವಿ ಮಾಡಿಕೊಂಡನು. ಅವರು ಯೇಸುವಿನ ಬಳಿಗೆ ಬಂದು, "ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಅರ್ಹನು; ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ," ಎಂದು ಬಹಳವಾಗಿ ವಿನಂತಿಸಿದರು. ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು 'ಬಾ', ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ "ಹೋಗು,' ಎಂದರೆ ಹೋಗುತ್ತಾನೆ. ಸೇವಕನಿಗೆ 'ಇಂಥದ್ದನ್ನು ಮಾಡು,' ಎಂದರೆ ಮಾಡುತ್ತಾನೆ. ಎಂದು ಹೇಳಿ ಕಳುಹಿಸಿದನು. ಅವನ ಈ ಮಾತನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿ ನೋಡಿ, "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ," ಎಂದರು.ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆ ಬಿದ್ದಿದ್ದ ಆ ಸೇವಕನು ಸ್ವಸ್ಥನಾಗಿದ್ದುದನ್ನು ಕಂಡರು.
10.09.22 - “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ"
ಮೊದಲನೇ ವಾಚನ: 1 ಕೊರಿಂಥಿಯರಿಗೆ 10:14-22
ಕೀರ್ತನೆ: 116:12-13, 17-18
ಶ್ಲೋಕ: ಅರ್ಪಿಸುವೆ ಪ್ರಭೂ ನಾ ನಿನಗೆ ಕೃತಜ್ಞತಾಬಲಿಗಳನು
ಶುಭಸಂದೇಶ: 6:43-49
11.09.22 - "ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ"

ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,"ಎಂದು ಗೊಣಗಿದರು. ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು; "ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆ ಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಭತ್ತೊಂಭತ್ತು ಕುರಿಗಳನ್ನು ಹುಲ್ಲುಗವಲಿನಲ್ಲೇ ಬಿಟ್ಟು ಕಾಣದೆ ಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ? ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ; ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ "ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ," ಎನ್ನುತ್ತಾನೆ, ಅಲ್ಲವೆ? ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಭತ್ತೊಂಭತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೆ? ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು "ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು. ನನ್ನೊಡನೆ ಸೇರರಿ ಸಂತೋಷಪಡಿ," ಎನ್ನುತ್ತಾಳಲ್ಲವೆ? ಅದೇ ಮೇರೆಗೆ ಪಶ್ಚಾತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ," ಎಂದರು. ಯೇಸುಸ್ವಾಮಿ ಮುಂದುವರಿಸುತ್ತಾ ಈ ಸಾಮತಿಯನ್ನು ಹೇಳಿದರು: ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಅವರಲ್ಲಿ ಕಿರಿಯವನು "ಅಪ್ಪಾ, ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು," ಎಂದು ಕೇಳಿದ. ತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚಿಕೊಟ್ಟ. ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲು ಮಾಡಿಬಿಟ್ಟ. ಹೀಗೆ ಅವನು ಎಲ್ಲವನ್ನು ಹಾಳುಮಾಡಿಕೊಂಡಮೇಲೆ ಆ ದೇಶಾದಾದ್ಯಂತ ಘೋರವಾದ ಕ್ಷಾಮ ತಲೆದೋರಿತು. ನಿರ್ಗತಿಕನಾದ ಅವನು ಹೋಗಿ, ಆ ದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ. ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ. ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ. ನಾನು ಇದೀಗಲೇ ಹೊರಟು, ತಂದೆಯ ಬಳಿಗೆ ಹೋಗಿ, "ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ; ನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ" ಎಂದು ಬೇಡಿಕೊಳ್ಳುತ್ತೇನೆ, ಎಂದುಕೊಂಡ. ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. ಮಗನು ಇನ್ನೂ ಅಷ್ಟುದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ. ಆದರೂ ಮಗನು, "ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ" ಎಂದ. ತಂದೆಯಾದರೋ ಆಳುಗಳನ್ನು ಕರೆದು, ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ ಬೆರಳಿಗೆ ಉಂಗುರವನ್ನು ತೊಡಿಸಿರಿ. ಕಾಲಿಗೆ ಪಾದರಕ್ಷೆಗಳನ್ನು ಮೆಟ್ಟಿಸಿರಿ; ಕೊಬ್ಬಿಸಿದ ಕರುವನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣ. ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ," ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು. ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ನಾನ, ನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು. "ಮನೆಯಲ್ಲೇನು ವಿಶೇಷ?" ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ. "ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಕರುವನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ," ಎಂದು ಆಳು ತಿಳಿಸಿದ. ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ ಅವನು, "ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆ ಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ. ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಕರುವನ್ನು ಕೊಯ್ಯಿಸಿದ್ದೀರಿ!" ಎಂದು ವಾದಿಸಿದ. ಆಗ ತಂದೆ ಅವನಿಗೆ, ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ. ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ, ಈಗ ಬದುಕಿಬಂದಿದ್ದಾನೆ. ತಪ್ಪಿ ಹೋಗಿದ್ದ, ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೇ?" ಎಂದನು."