10.12.22 - "ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,"
09.12.22 - "ದೈವಜ್ಞಾನವೇ ನಿಜವಾದ ಜ್ಞಾನ"
ಮೊದಲನೇ ವಾಚನ ಯೆಶಾಯ 48:17-19
ಶ್ಲೋಕ: ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ, ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ
08.12.22 - "ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ,"
ಮೊದಲನೇ ವಾಚನ: ಆದಿಕಾಂಡ 3:9-15, 20
ಸರ್ವೇಶ್ವರನಾದ ದೇವರು, "ಎಲ್ಲಿರುತ್ತೀಯಾ?" ಎಂದು ಆದಾಮನನ್ನು ಕೂಗಿ ಕೇಳಿದರು. ಅದಕ್ಕೆ ಅವನು, "ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ," ಎಂದನು. "ನೀನು ಬೆತ್ತಲೆಯಾಗಿರುವಿಯೆಂದು ನಿನಗೆ ತಿಳಿಸಿದವರು ಯಾರು?" ಎಂದು ಕೇಳಿದರು. ಅದಕ್ಕೆ ಆದಾಮನು, "ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ, ಆ ಮರದ ಹಣ್ಣನ್ನು ನನಗೆ ಕೊಟ್ಟಳು: ನಾನು ತಿಂದೆ," ಎಂದನು. ಸರ್ವೇಶ್ವರನಾದ ದೇವರು ಈ ಮಹಿಳೆಯನ್ನು, "ಇದೇನು ನೀನು ಮಾಡಿದ್ದು?" ಎಂದು ಕೇಳಲು ಆಕೆ, "ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು," ಎಂದು ಉತ್ತರಕೊಟ್ಟಳು. ಆಗ ಸರ್ವೇಶ್ವರನಾದ ದೇವರು, ಇಂತೆಂದರು ಸರ್ಪಕ್ಕೆ: "ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶುಪ್ರಾಣಿಗಳಿಗಿಂತ: ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನ್ನೇ ಜೀವಮಾನ ಪರಿಯಂತ. ಹಗೆತನವಿರುಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ. ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನು." ಆದಾಮನು ತನ್ನ ಹೆಂಡತಿಗೆ "ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ.
ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು "ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!" ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. "ಇದೆಂಥ ಶುಭಾಶಯ" ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, "ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ; ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ ಆತನಿಗೆ "ಯೇಸು" ಎಂಬ ಹೆಸರಿಡಬೇಕು; ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು, ಯಕೋಬನ ವಂಶವನ್ನು ಅವನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು," ಎಂದನು. ಅದಕ್ಕೆ ಮರಿಯಳು, "ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?" ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, "ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು "ದೇವರ ಪುತ್ರ ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು; ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ. ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ," ಎಂದನು. ಆಗ ಮರಿಯಳು, "ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ," ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.
07.12.22 - "ನನ್ನ ನೊಗ ಹಗುರ, ನನ್ನ ಹೊರೆ ಸುಗಮ,"
ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನಸ್ವಾಮಿ. ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆಗ! ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯ ಬೀಳದಿದೆ’ ಎನ್ನುತ್ತಿರುವಿರಿ ಏಕೆ? ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮಥ್ರ್ಯ ಅಗಮ್ಯ ಪರಿಶೋಧನೆಗೆ. ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ. ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು. ಸರ್ವೇಶ್ವರನನ್ನು ಎದುರು ನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿದರು, ನಡೆದರೂ ಬಳಲರು.
ಕೀರ್ತನೆ: 103: 1-2, 3-4, 8, 10
ಶ್ಲೋಕ: "ನನ್ನ ಅಂತರಂಗವೇ, ಭಜಿಸು ಪ್ರಭುವನು."
ಶುಭಸಂದೇಶ: ಮತ್ತಾಯ 11: 28-30
06.12.22 - "ಸಿಕ್ಕಿದ ಈ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ"
ವಿಶ್ವವೆಲ್ಲವು ಹಾಡಲಿ ಆತನಿಗೆ||
ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ|
ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ||
ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ||
ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ|
ನ್ಯಾಯತೀರ್ಪು ಕೊಡುವನು ಜನಾಂಗಕೆ||
ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು|
ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು||
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು|
ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು||
ಪ್ರಭು ಧರೆಗೆ ನ್ಯಾಯತೀರಿಸಲು|
ಬಂದೇ ಬರುವನು ಖರೆಯಾಗಿ||
ಜಗಕು ಜನತೆಗು ತೀರ್ಪಿಡುವನು|
ನೀತಿ ನಿಯಮಾನುಸಾರವಾಗಿ||
ಘೋಷಣೆ:
ಅಲ್ಲೆಲೂಯ, ಅಲ್ಲೆಲೂಯ!
ಸ್ವಾಮಿ ಸರ್ವೇಶ್ವರಾ, ತಡಮಾಡಬೇಡಿ | ನಿಮ್ಮ ಜನರ ಪಾಪಗಳನ್ನು ಕ್ಷಮಿಸಿರಿ ||
ಅಲ್ಲೆಲೂಯ!
"ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ, ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ, ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಈ ತೊಂಭತ್ತೊಂಭತ್ತು ಕುರಿಗಳಿಗಿಂತ ಸಿಕ್ಕಿದ ಈ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ," ಎಂದರು ಯೇಸುಸ್ವಾಮಿ.
05.12.22 - 'ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ," ಎನ್ನುವುದು ಸುಲಭವೋ ಅಥವಾ 'ಎದ್ದು ನಡೆ' ಎನ್ನುವುದು ಸುಲಭವೋ?
04.12.22 - "ಸರ್ವೇಶ್ವರನಿಗೆ ಮಾರ್ಗವನ್ನು ಸಿದ್ಧಪಡಿಸಿರಿ"
ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಆತನಿಗೆ ಪರಿಮಳದಂತೆ ತೀರ್ಪಿಡನಾತ ಕಣ್ಣಿಗೆ ತೋಚಿದಂತೆ, ನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯ ನೀತಿಯಿಂದ; ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ; ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ; ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ. ಆತನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟ-ಪಟ್ಟಿ. ಬಾಳುವುವು ತೋಳ ಕುರಿಮರಿಗಳು ಒಂದಿಗೆ, ಮಲಗುವುವು ಮೇಕೆ ಚಿರತೆಗಳು ಜೊತೆಗೆ; ಮೊಲೆಯುಣ್ಣುವುವು ಕರು ಕೇಸರಿಗಳು ಒಟ್ಟಿಗೆ, ನಡೆಸುವುದವುಗಳನು ಚಿಕ್ಕ ಮಗು ಮೇಯಿಸುವುದಕೆ ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ, ಮಲಗುವುವು ಅವುಗಳ ಮರಿಗಳು ಜೊತೆಗೆ; ಎತ್ತಿನ ಹುಲ್ಲು ಮೇವಾಗುವುದು ಸಿಂಹಕ್ಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ, ಕೈ ಹಾಕುವುದು ಮೊಲೆ ಬಿಟ್ಟ ಮಗು ಹಾವಿನ ಬಿಲದ ಒಳಗೆ, ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ ಧರೆಯ ಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವ ಜನಾಂಗಗಳಿಗೆ ಧ್ಯಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.
ಶ್ಲೋಕ: ಬೆಳೆಯಲಿ ಆತನ ಪಾಲನೆಯಲಿ ನ್ಯಾಯ ನೀತಿ ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ
1. ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ |
ಕಲಿಸು ನಿನ್ನ ನೀತಿಯನು ರಾಜಕುವರನಿಗೆ ||
ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ |
ಪರಿಪಾಲಿಸಲಿ ದೀನ ದಲಿತರನು ನ್ಯಾಯದಿಂದ ||
2. ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ |
ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ ||
ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ |
ಮಹಾನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ ||
3. ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು |
ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು ||
ದೀನದರಿದ್ರರಿಗೆ ದಯೆಯ ತೋರುವನು |
ದಲಿತರ ಪ್ರಾಣವನು ಕಾಪಾಡುವನು ||
4. ಶಾಶ್ವತವಾಗಲಿ ಶ್ರೀನಾಮ ಆತನಿಗೆ |
ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ ||
ಆತನಾಶೀರ್ವಾದ ಕೋರಲಿ ಸರ್ವರು ತಮಗೆ |
ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ ||

02.12.22 - "ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,"
ಮೊದಲನೇ ವಾಚನ: ಯೆಶಾಯ 29: 17-24
ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು. ಆ ದಿನದಂದು ಕಿವುಡರು ಗ್ರಂಥ ವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು. ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮ ಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು. ಏಕೆಂದರೆ ಭಯೋತ್ಪಾದಕರು ನಿಶ್ಯೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು. ಸುಳ್ಳು ಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯ ಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು. ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ: “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ. ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು. ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನ ಮಗ್ನರಾಗುವರು.
03.12.22 - "ಬೆಳೆಯೇನೋ ಹೇರಳ; ಕೊಯಿಲಿಗಾರರೋ ವಿರಳ;"
ಮೊದಲನೇ ವಾಚನ: ಯೆಶಾಯ 30: 19-21, 23-26
ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು. ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ. ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು. ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲು ಗಾವಲುಗಳಲ್ಲಿ ಮೇಯುವುವು. ಹೊಲಗೇಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು. ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.
ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗರುಜಿನಗಳನ್ನು ಗುಣಪಡಿಸಿದರು. ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು. ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು. ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, "ಬೆಳೆಯೇನೋ ಹೇರಳ; ಕೊಯಿಲಿಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ," ಎಂದರು. ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆ ಮಾಡಿರಿ. ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ. ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.
01.12.22 - "ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ"
ಮೊದಲನೇ ವಾಚನ: ಯೆಶಾಯ 26: 1-6
30.11.22
ಮೊದಲನೇ ವಾಚನ: ರೋಮನ್ನರಿಗೆ 10: 9-18
ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು|
ತಾರಮಂಡಲ ತೋರುತಿದೆ ದೇವರ ಕೈಕೃತಿಗಳನು||
ದಿನವು ಮರುದಿನಕೆ ಈ ಪ್ರಕಟನೆಯನು|
ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು||
ಅವುಗಳಿಗೆ ಮಾತಿಲ್ಲ, ಅವುಗಳಿಗೆ ಶಬ್ದವಿಲ್ಲ|
ಅವುಗಳ ಸ್ವರವಂತೂ ಕೇಳಿ ಬರುವುದಿಲ್ಲ||
ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ|
ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ||
ಘೋಷಣೆ: ಮತ್ತಾಯ 4:19
ಅಲ್ಲೆಲೂಯ, ಅಲ್ಲೆಲೂಯ!
ನನ್ನನ್ನು ಹಿಂಬಾಲಿಸಿ ಬನ್ನಿ; ನಿಮ್ಮನ್ನು ಮನುಷ್ಯರನೇ ಹಿಡಿಯುವವರನ್ನಾಗಿ ಮಾಡುವೆನು.
ಅಲ್ಲೆಲೂಯ!
29.11.22 - “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು"
ಮೊದಲನೇ ವಾಚನ: ಯೆಶಾಯ 11: 1-10
ಜೆಸ್ಸೆಯನ ಬುಡದಿಂದ ಒಡೆಯುವು ದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕ ದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ. ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ. ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈ ಹಾಕುವುದು ಮೊಲೆಬಿಟ್ಟ ಮಗು ಹಾವಿನಬಿಲದ ಒಳಗೆ. ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.
28.11.22 - "ತಾವು ಒಂದೇ ಒಂದು ಮಾತು ಹೇಳಿದರೆ ಸಾಕು"
ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆಯುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು. ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು. ಆಗ ಒಡೆಯರಾದ ಸ್ವಾಮಿ ನ್ಯಾಯ ನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿ ಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದು ಹಾಕುವರು. ಸಿಯೋನ್ ಪರ್ವತದ ಮೇಲೆಲ್ಲಾ, ಅಲ್ಲಿನ ಸಭಾ ಕೂಟಗಳ ಮೇಲೆಲ್ಲಾ ಹಗಲಲ್ಲಿ ಧೂಮ ಮೇಘವನ್ನು, ರಾತ್ರಿಯಲ್ಲಿ ಪ್ರಜ್ವಲಿಸುವ ಅಗ್ನಿ ಪ್ರಕಾಶವನ್ನು ಉಂಟು ಮಾಡುವರು. ದೇವರ ಮಹಿಮೆ ಛತ್ರಿಯಂತೆಯೂ ಚಪ್ಪರದಂತೆಯೂ ಎಲ್ಲರನ್ನು ಆವರಿಸುವುದು. ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆ ಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು.
ಶ್ಲೋಕ: ಪ್ರಭುವಿನಾಲಯಕ್ಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ
27.11.22 - "ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು."
2. ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ |
ಮಾಡುವರಿಲ್ಲಿಯೆ ಪ್ರಭುವಿನ ನಾಮಕೀರ್ತನೆ |
ಪಾಲಿಪರಿಂತು ಇಸ್ರಯೇಲರಿಗೆ ವಿಧಿಸಿದಾಜ್ಞೆ ||
ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು |
ದಾವೀದನ ಮನೆತನದವರ ಸಿಂಹಾಸನಗಳು ||
3. ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ |
"ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ ||
ಶುಭವಿರಲಿ ನಿನ್ನೀ - ಪೌಳಿಗೋಡೆಗಳೊಳಗೆ |
ಸಂರಕ್ಷಣೇ ಇರಲಿ ನಿನ್ನ ಅರಮನೆಯೊಳಗೆ" ||
4. ನನ್ನ ಬಂಧುಬಳಗದವರ ನಿಮಿತ್ತ |
"ನಿನಗೆ ಶುಭವಿರಲಿ" ಎಂಬುದು ನನ್ನ ಮತ ||
ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ |
ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ ||
26.11.22 - “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ"
ಮೊದಲನೇ ವಾಚನ: ಪ್ರಕಟಣಾ ಗ್ರಂಥ 22:1-7
ಕೀರ್ತನೆ: 95:1-2, 3-5, 6-7
ಶ್ಲೋಕ: ಪ್ರಭು ಯೇಸುವೇ, ಬನ್ನಿ
ಶುಭಸಂದೇಶ: ಲೂಕ 21:34-36
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.