Sunday, July 17, 2022
07.08.22 - "ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು"
05.08.22 - ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು?
ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 1:15, 2:-2; 3:1-3, 6-7
ಇಗೋ, ಉತ್ತರದ ರಾಜ್ಯಗಳನ್ನೆಲ್ಲಾ ನಾನು ಕರೆಯುವೆನು; ಅವರು ಬಂದು ಜೆರುಸಲೇಮಿನ ಊರಬಾಗಿಲುಗಳ ಎದುರಿನಲ್ಲೂ ಅದರ ಎಲ್ಲ ಪೌಳಿಗೋಡೆಗಳ ಸುತ್ತಲೂ ಜುದೇಯದ ಎಲ್ಲ ನಗರಗಳಲ್ಲೂ ತಮ್ಮ ತಮ್ಮ ಸಿಂಹಾಸನಗಳನ್ನು ಹಾಕಿಕೊಳ್ಳುವರು. “ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು: ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ. ಇಸ್ರಯೇಲಿನ ವಿಶ್ವಾಸಘಾತ ಸರ್ವೇಶ್ವರಸ್ವಾಮಿ ಹೀಗೆನ್ನುತ್ತಾರೆ: “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹು ಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ? ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚು ಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರ ಮಾಡಿರುವೆ. ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು! ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ. ಅವಳು ಇಂಥವುಗಳನ್ನೆಲ್ಲ ಮಾಡಿದ ಮೇಲೆ ನನ್ನ ಬಳಿಗೆ ಮರಳಿ ಬಂದೇ ಬರುವಳು ಎಂದುಕೊಂಡಿದ್ದೆ. ಆದರೆ ಬರಲಿಲ್ಲ. ಆಗ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ಇದನ್ನು ನೋಡಿದಳು.
06.08.22 - "ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು"
04.08.22 - "ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತ ಪಡಿಸಿದ್ದು ನರಮಾನವ ಶಕ್ತಿ ಅಲ್ಲ, ಸ್ವರ್ಗದಲ್ಲಿರುವ ನನ್ನ ಪಿತನೇ"
ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 31:31-34
ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು. ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು. ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು. ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣ ತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”
03.08.22 - “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,”
ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪ್ರಾಂತ್ಯಕ್ಕೆ ಹೋದರು. ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು. ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು. ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು. ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು. ಅದಕ್ಕೆ ಯೇಸು, “ಮಕ್ಕಳ ಆಹಾರವನ್ನು ತೆಗೆದು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು. ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣ ಹೊಂದಿದಳು.
02.08.22 - "ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,"
01.08.22 - “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?”
31.07.22 - - "ಒಬ್ಬನಿಗೆ ಎಷ್ಟೇ ಸಿರಿ ಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ"
ಜನಸಮೂಹದಿಂದ ಒಬ್ಬನು, "ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗ ಮಾಡಿ ಕೊಡುವಂತೆ ನನ್ನ ಸೋದರನಿಗೆ ಹೇಳಿ," ಎಂದು ಯೇಸುಸ್ವಾಮಿಯನ್ನು ಕೇಳಿಕೊಂಡನು. ಅದಕ್ಕೆ ಯೇಸು, "ಏನಯ್ಯಾ, ನಿಮ್ಮಿಬ್ಬರ ನ್ಯಾಯ ತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗ ಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?" ಎಂದು ಮರುಪ್ರಶ್ನೆ ಹಾಕಿದರು. ಆನಂತರ ಜನರನ್ನುದ್ದೇಶಿಸಿ, "ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿ ಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ," ಎಂದು ಹೇಳಿದರು. ಆನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: "ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು. ಆಗ ಅವನು , "ಆಗ ಅವನು, "ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?" ಎಂದು ತನ್ನಲ್ಲೇ ಆಲೋಚಿಸುತ್ತಾ, "ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತು ಹಾಕಿಸಿ ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸ ಧಾನ್ಯಗಳನ್ನೂ ಸರಕು ಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ. ಅಲ್ಲದೆ, ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ; ಅರಾಮವಾಗಿರು, ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ ಎಂದುಕೊಂಡ. ಆಗ ದೇವರು, "ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧ ಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?" ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು," ಎಂದರು ಯೇಸು.30.07.22 - “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,”
29.07.22 - "ನೀವೇ ಅಭಿಷಿಕ್ತರಾದ ಲೋಕೋದ್ಧಾರಕ"
ಶ್ಲೋಕ: ಪ್ರಭುವನ್ನು ನಾ ಕೊಂಡಾಡುವೆ ಎಲ್ಲ ಕಾಲದೊಳು
28.07.22 - “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು"
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ. ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ. ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.” “ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು. ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು. ಈ ಸಾಮತಿಗಳನ್ನು ಹೇಳಿಯಾದ ಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.
27.07.22 - "ಪುನರುತ್ಥಾನವೂ ಜೀವವೂ ನಾನೇ"
26.07.22 - "ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು"
25.07.22 - “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?”
ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು. “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು. ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು. ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.
24.07.22 - "ನಿಮ್ಮಲ್ಲಿ ಯಾವ ತಂದೆ ತಾನೇ ತನ್ನ ಮಗ ಮೀನನ್ನು ಕೇಳಿದರೆ ಹಾವನ್ನು ಕೊಡುತ್ತಾನೆ?"
"ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪ ಕೃತ್ಯವೂ ಘೋರವಾದುದು. ನನಗೆ ಮುಟ್ಟಿರುವ ದೂರುಗಳಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ," ಎಂದುಕೊಂಡರು ಸರ್ವೇಶ್ವರ. ಆಗ ಆ ಇಬ್ಬರು ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಸರ್ವೇಶ್ವರ ಸ್ವಾಮಿಯ ಸಂಗಡವೇ ಉಳಿದುಕೊಂಡನು. ಅವನು ಅವರ ಹತ್ತಿರಕ್ಕೆ ಬಂದು, "ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶ ಮಾಡುವಿರೋ? ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯ ತೀರಿಸಬೇಕಲ್ಲವೆ?" ಎಂದನು. ಅದಕ್ಕೆ ಸರ್ವೇಶ್ವರ, "ಸೊದೋಮಿನಲ್ಲಿ ಐವತ್ತು ಮಂದಿ ಸಜ್ಜನರು ನನಗೆ ಸಿಕ್ಕಿದರೆ ಅವರ ನಿಮಿತ್ತ ಊರನ್ನೆಲ್ಲಾ ಉಳಿಸುತ್ತೇನೆ," ಎಂದರು. ಆಗ ಅಬ್ರಹಾಮನು "ನಾನಂತು ಮಣ್ಣು ಬೂದಿ. ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ. ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶ ಮಾಡುವಿರೋ?" ಎಂದು ಕೇಳಲು ಸರ್ವೇಶ್ವರ, "ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ" ಎಂದರು. ಅಬ್ರಹಾಮನು ಇನ್ನೂ ಮುಂದುವರೆದು, "ಒಂದು ವೇಳೆ ಅಲ್ಲಿ ನಲವತ್ತು ಮಂದಿ ಸಿಕ್ಕಾರು" ಎನ್ನಲು "ನಲವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ" ಎಂದರು. ಅಬ್ರಹಾಮನು, "ಸ್ವಾಮೀ, ಕೋಪ ಮಾಡಬೇಡಿ; ಇನ್ನೂ ಮಾತಾಡುತ್ತೇನೆ. ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು" ಎನ್ನಲು ಸರ್ವೇಶ್ವರ, "ಅಲ್ಲಿ ಮೂವತ್ತು ಮಂದಿ ಸಿಕ್ಕರೂ ಅದನ್ನು ನಾಶ ಮಾಡುವುದಿಲ್ಲ," ಎಂದರು. ಅವನು ಸ್ವಾಮಿಯ ಸಂಗಡ ಮಾತನಾಡಲು ನಾನು ಇನ್ನೂ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತೇ ಮಂದಿ ಅಲ್ಲಿ ಸಿಕ್ಕಾರು," ಎನ್ನಲು, ಸರ್ವೇಶ್ವರ, "ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಅದನ್ನು ಉಳಿಸುತ್ತೇನೆ, ನಾಶ ಮಾಡುವುದಿಲ್ಲ," ಎಂದರು. ಅಬ್ರಹಾಮನು, "ಸ್ವಾಮೀ ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು" ಎನ್ನಲು, ಸರ್ವೇಶ್ವರ, "ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶ ಮಾಡುವುದಿಲ್ಲ," ಎಂದರು.
ಶ್ಲೋಕ: ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು
23.07.22 - "ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟು ಹಾಕಲು ಕಟ್ಟಿಡಿ;"
ಇಂದಿನ ಕನ್ನಡ ಬಲಿಪೂಜೆ
22.07.22 - “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’
ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು. ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು.ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು. ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು. ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ). ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, “ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲಾ ಹೇಳಿದರು,” ಎಂದು ತಿಳಿಸಿದಳು.



































