ಮೊದಲನೇ ವಾಚನ: ಆದಿಕಾಂಡ 9:1-13

ಕೀರ್ತನೆ: 102:16-18, 19-21, 29, 23-24
ಶ್ಲೋಕ: ಭೂಲೋಕವನ್ನು ವೀಕ್ಷಿಸಿದನು ಪ್ರಭು ಪರಲೋಕದಿಂದ
ಶುಭಸಂದೇಶ: ಮಾರ್ಕ 8:27-33
ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ಫಿಲಿಪ್ಪನ ಸೆಜರೇಯ ಎಃಬ ಪಟ್ಟಣದ ಪಕ್ಕದಲ್ಲಿರುವ ಹಳ್ಳಿಗಳಿಗೆ ಪ್ರಯಾಣ ಬೆಳೆಸಿದರು. ದಾರಿಯಲ್ಲಿ, "ಜನರು ನನ್ನನ್ನು ಯಾರೆಂದು ಹೇಳುತ್ತಾರೆ?" ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಶಿಷ್ಯರು, "ಕೆಲವರು ತಮ್ಮನ್ನು 'ಸ್ನಾನಿಕ ಯೊವಾನ್ನ' ಎನ್ನುತ್ತಾರೆ. ಇನ್ನು ಕೆಲವರು 'ಎಲೀಯನು,' ಮತ್ತೆ ಕೆಲವರು ಪ್ರವಾದಿಗಳಲ್ಲಿ ತಾವೂ ಒಬ್ಬರು ಎನ್ನುತ್ತಾರೆ," ಎಂದರು ಆಗ ಯೇಸು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, "ಅಭಿಷಿಕ್ತರಾದ ಲೋಕೋದ್ಧಾರಕ ತಾವೇ" ಎಂದು ಉತ್ತರವಿತ್ತನು. ಆಗ ಯೇಸು, "ಈ ವಿಷಯವನ್ನು ಯಾರಿಗೂ ತಿಳಿಸಬೇಡಿ," ಎಂದು ತಮ್ಮ ಶಿಷ್ಯರಿಗೆ ಕಟ್ಟಪ್ಪಣೆ ಮಾಡಿದರು. ಈ ಘಟಣೆಯ ಬಳಿಕ ಯೇಸುಸ್ವಾಮಿ, "ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ದಾನ ಹೊಂದುವನು." ಎಂದು ತಮ್ಮ ಶಿಷ್ಯರಿಗೆ ಮುಚ್ಚು ಮರೆ ಇಲ್ಲದೆ ಬೋಧಿಸಲಾರಂಭಿಸಿದರು.ಇದನ್ನು ಕೇಳಲಾಗದೆ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು, "ತಾವು ಹೀಗೆಲ್ಲಾ ಹೇಳಬಾರದು," ಎಂದು ಪ್ರತಿಭಟಿಸಿದನು. ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ ಪೇತ್ರನನ್ನು ಎದರಿಸುತ್ತಾ, "ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ," ಎಂದರು.
ಮನಸಿಗೊಂದಿಷ್ಟು : ’ಅಭಿಷಿಕ್ತರಾದ ಲೋಕೋದ್ಧಾರಕ ತಾವೇ’ ಎಂದ ಪೇತ್ರ, ಯೇಸು ಕಠಿಣ ಯಾತನೆಯನ್ನು ಅನುಭವಿಸಬೇಕು ಎಂಬುದನ್ನು ಜೀರ್ಣಿಸಿಕೊಳ್ಳದಾದ. ಯೇಸುವಿನ ಮೇಲಿನ ಆತನ ಪ್ರೀತಿಯಿಂದ ಅದು ಸಹಜವೇ ಆಗಿತ್ತು. ಆದರೆ ದೇವರ ಆಲೋಚನೆ ಅದೆಷ್ಟೇ ಕಠಿಣ ಎನಿಸಿದರೂ ಅದು ಕೊನೆಗೆ ಒಳಿತಿಗಾಗಿಯೇ ಎಂಬ ಸಂದೇಶವನ್ನು ಯೇಸು ಕಟುವಾಗಿಯೇ ನೀಡುತ್ತಾರೆ. ನಮ್ಮ ಬದುಕಿನಲ್ಲಿ ಎಂತಹ ಪ್ರಳಯ ಬಂದರೂ ಒಂದು ದಿನ ಭರವಸೆಯ ಮಳೆ ಬಿಲ್ಲು ನಮಗಾಗಿ ಕಾದಿದೆ
ಪ್ರಶ್ನೆ: ನೀವು ಯೇಸುವನ್ನು ಯಾರೆನುತ್ತೀರಿ?

No comments:
Post a Comment