ಮೊದಲನೇ ವಾಚನ: ಆದಿಕಾಂಡ 18: 1-15
01.07.23
30.06.23 - "ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು"
ಮೊದಲನೇ ವಾಚನ: ಆದಿಕಾಂಡ 17: 1, 9-10, 15-22
ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು. ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು. ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು. ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು. ದೇವರು ಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು. ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.” ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ, ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲ ಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ. ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ. ಬರುವ ವರ್ಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು,” ಎಂದರು. ಇಷ್ಟನ್ನು ಮಾತಾಡಿ ಮುಗಿಸಿದ ಮೇಲೆ ದೇವರು ಅಬ್ರಹಾಮನಿಂದ ಅದೃಶ್ಯರಾದರು.
29.06.23 - "ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು"
28.06.23 - "ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ"
ಮೊದಲನೇ ವಾಚನ: ಆದಿಕಾಂಡ 15:1-12, 17-18
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು. ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ? ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ. ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು. ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು. ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ."
27.06.23 - "ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ; ಅದರ ಬಾಗಿಲು ಕಿರಿದು"
ಮೊದಲನೇ ವಾಚನ: ಆದಿಕಾಂಡ 13:2, 5-18
26.06.231 - "ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು"
ಮೊದಲನೇ ವಾಚನ: ಆದಿಕಾಂಡ 12:1-9
ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧು ಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟು ಹೋಗು. ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆ ಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ. “ನಿನ್ನನ್ನು ಹರಸುವವರನು ನಾ ಹರಸುವೆ. ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.” ಸರ್ವೇಶ್ವರ ಹೀಗೆಂದು ಹೇಳಿದಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು. ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿ ಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು. ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು. ಅಲ್ಲಿ ಸರ್ವೇಶ್ವರಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆ ಮಾಡಿ ಆರಾಧಿಸಿದನು. ತರುವಾಯ ಅಲ್ಲಿಂದ ಮುಂದೆ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
"ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು. ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, "ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದು ಬಿಡುತ್ತೇನೆ," ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು."
25.06.23 - "ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ."
24.06.23
ಅರಿತುಕೊಂಡಿರುವೆ ಅಂತರಂಗವನು II
ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I
ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II
ನನ್ನ ಅಂತರಂಗವನು ಉಂಟುಮಾಡಿದಾತ ನೀನು I
ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II
ನನ್ನ ಅಸ್ಥಿಪಂಜರವನು ರೂಪಿಸುವಾಗ I
ತಾಯಗರ್ಭದೊಳು ಅಚ್ಚರದಿ ರಚಿಸುವಾಗ I
ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I
ಮರೆಯಾಗಿರಲಿಲ್ಲ ನಾನು ನಿನಗಾಗ II
23.06.23 - "ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು"
ಮೊದಲನೇ ವಾಚನ: 2 ಕೊರಿಂಥಿಯರಿಗೆ 11:18, 21-30
ಅನೇಕರು ಕೇವಲ ಪ್ರಾಪಂಚಿಕ ವಿಷಯಗಳನ್ನು ಕುರಿತು ತಮ್ಮನ್ನೇ ಹೊಗಳಿಕೊಳ್ಳುತ್ತಾರೆ. ಹಾಗೆಯೇ ನಾನೂ ಹೊಗಳಿಕೊಳ್ಳುತ್ತೇನೆ. ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ. ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ. ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿವಿೂರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ. ಐದು ಸಾರಿ ಯೆಹೂದ್ಯರಿಂದ ನನಗೆ ನಲವತ್ತಕ್ಕೆ ಒಂದು ಕಡಿಮೆ ಚಾಟಿ ಏಟುಗಳು ಬಿದ್ದವು. ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ. ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ. ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ. ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. ಇಂಥ ಇನ್ನಿತರ ಕಷ್ಟ ಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ. ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ. ನಾನು ನನ್ನನ್ನೇ ಹೊಗಳಿಕೊಳ್ಳಬೇಕಾಗಿ ಬಂದರೆ, ನನ್ನ ದೌರ್ಬಲ್ಯವನ್ನು ಬಹಿರಂಗಪಡಿಸುವ ವಿಷಯಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು. ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು, ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು. ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ."ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು. ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!"
22.06.23 - "ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು"
ಮೊದಲನೇ ವಾಚನ: 2 ಕೊರಿಂಥಿಯರಿಗೆ 11:1-11
ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನಿಮ್ಮ ಬಗ್ಗೆ ದೇವರಿಗಿರುವ ಪೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ. ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು. ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ. “ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ. ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ. ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಿಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ? ನಿಮಗೆ ಸೇವೆ ಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿ ಮಾಡುತ್ತಿದ್ದೆ. ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ. ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ. ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.
21.06.23 - "ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು."
ಮೊದಲನೇ ವಾಚನ: 2 ಕೊರಿಂಥಿಯರಿಗೆ 9:6-11
ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯತ್ತಾನೆ. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ. ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ. “ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು. ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.
20.06.23 - "ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ"
ಮೊದಲನೇ ವಾಚನ: 2 ಕೊರಿಂಥಿಯರಿಗೆ 8: 1-9
19.06.23 - "ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು"
ಮೊದಲನೇ ವಾಚನ: 2 ಕೊರಿಂಥಿಯರಿಗೆ 6: 1-10
ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು" ಎಂಬುದನ್ನು ನೀವು ಕೇಳಿದ್ದೀರಿ. ಆದರೆ ನನ್ನ ಬೋಧೆ ಇದು: ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು. ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು. ಯಾರಾದರೂ ಒಂದು ಕಿಲೊವಿೂಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊವಿೂಟರ್ ಹೋಗು; ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ."
18.06.23
ಮೊದಲನೇ ವಾಚನ: ವಿಮೋಚನಕಾಂಡ 19:2-6
17.06.23 - ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?”
ಮೊದಲನೇ ವಾಚನ: ಯೆಶಾಯ: 61:9-11

16.06.23 - ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು. ಪ್ರವೇಶಿಸಲಾರಿರಿ
ಮೊದಲನೆಯ ವಾಚನ : ಪೌಲನು ಕೊರಿಂಥಿಯರಿಗೆ ಬರೆದ ಎರಡನೆಯ ಪತ್ರದಿಂದ ವಾಚನ 3:15-4:1, 3-6
ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ. ನಾವು ಪ್ರಚಾರಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ. ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತ ಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣುವಂತೆ ಇವರನ್ನು ಕುರುಡಾಗಿಸಿದೆ. ನಾವು ನಮ್ಮನ್ನೇ ಕುರಿತು ಪ್ರಚಾರ ಮಾಡುತ್ತಿಲ್ಲ. ಆದರೆ ಕ್ರಿಸ್ತ ಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ. " ಕತ್ತಲೆಯಿಂದ ಬೆಳಕು ಹೊಳೆಯಲಿ, " ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತ ಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.
- ಪ್ರಭುವಿನ ವಾಕ್ಯ
ಕೀರ್ತನೆ 85:8-9,10-11,12-13,V.9
ಶ್ಲೋಕ:
ಪ್ರಭುವಿನ
ಮಹಿಮೆ
ನಾಡಿನಲ್ಲಿರುವುದು ನಿರುತ|
1. ನಾ
ಕೇಳುತ್ತಿರುವೆನು, ಪ್ರಭು ಹೇಳುವುದನು|
ತನ್ನ ಜನರಿಗಾತ ನುಡಿವುದು ಶಾಂತಿಯನು||
ಭಯಭತ್ತಿಯುಳ್ಳವರಿಗಾತನ ರಕ್ಕಣೆ ಸನ್ನಿಹಿತ|
ಇದರಿಂದಾತನ ಮಹಿಮೆ ನಾಡಿನಲ್ಲಿರುವುದು ನಿರುತ||
2. ಪ್ರೀತಿಯೂ ಸತ್ಯವೂ ಒಂದಾನೊಂದು ಕೂಡಿರುವುವು|
ನೀತಿಯೂ ಶಾಂತಿಯೂ ಒಂದಾನೊಂದು ಚುಂಬಿಸುವುವು||
ಸತ್ಯತೆಯು ಹುಟ್ಟುವುದು ಭೂಮಿಯಿಂದ|
ನೀತಿಯು ದೃಷ್ಟಿಸುವುದು ಗಗನದಿಂದ ||
3. ಪ್ರಭು
ಕೊಟ್ಟೇತೀರುವನು ಒಳಿತನು|
ನಮ್ಮ ನಾಡು ನೀಡುವುದು ಬೆಳೆಯನು||
ನಡೆವುದು ಪ್ರಭುವಿನ ಮುಂದೆ ನೀತಿ|
ಮಾಡುವುದು ಆತನ ಹೆಜ್ಜೆಗೆ ಹಾದಿ||
ಘೋಷಣೆ ಮತ್ತಾಯ 11:25
ಪಿತನೇ, ಪರಲೋಕ ಭೂಲೋಕಗಳ ಒಡೆಯನೆ, ಜ್ಜಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಂತವರಿಗೆ ನೀವು ಶ್ರುತಪಡಿಸಿದ್ದೀರಿ ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ,
ಅಲ್ಲೆಲೂಯ!
ಶುಭಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 5:20-26
ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದೇನೆಂದರೆ : " ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು. ಪ್ರವೇಶಿಸಲಾರಿರಿ ಎಂಬುದು ನಿಶ್ಚಯ. ' ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು' ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ:
ತನ್ನ ಸೋದರನ ಮೇಲೆ ನಿಷ್ಠಾರಣವಾಗಿ ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು ; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು ; 'ಮೂರ್ಖ' ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು. ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಂಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು ! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು."
ಪ್ರಭುಕ್ರಿಸ್ತರ ಶುಭಸಂದೇಶ