03.10.23
02.10.23 - " ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ,"
ಸೇನಾಧೀಶ್ವರ ಸರ್ವೇಶ್ವರ ಜೆಕರ್ಯನಿಗೆ ಪುನಃ ಕೊಟ್ಟ ಸಂದೇಶವಿದು : " ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ ವಿಷಯದಲ್ಲಿ ಅಧಿಕ ರೋಷವಿದೆ. " ಸರ್ವೇಶ್ವರ ಇಂತೆನ್ನುತ್ತಾರೆ : " ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ' ನಿಷ್ಠಾವಂತ ನಗರ ' ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು. ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ : " ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು. ಪಟ್ಟಣದ ಹಾದಿಬೀದಿಗಳಲ್ಲಿ ಮಕ್ಕಳು ತುಂಬಿಕೊಂಡಿರುವರು. " ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ : ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ. " ಇದು ಸರ್ವೇಶ್ವರನ ನುಡಿ. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. " ಇಗೋ, ನಾನು ನನ್ನ ಜನರನ್ನು ಪೂರ್ವ ಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು. ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಸತ್ಸಂಬಂಧವುಳ್ಳ, ಸದ್ಧರ್ಮದ ಪ್ರಜೆಗಳಾಗಿರುವರು."
01.10.23 - ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು
ಮೊದಲನೇ ವಾಚನ: ಯೆಜೆಕಿಯೇಲ 18:25-28
ಕರ್ತರು ಇಂತೆನ್ನುತ್ತಾರೆ: ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ. ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು. ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು."
ಕೀರ್ತನೆ: 25:4-5, 6-7, 8-9
ಶ್ಲೋಕ: ನೆನಸಿಕೋ ಪ್ರಭೂ, ನಿನ್ನ ನಿರಂತರ ಕರುಣೆಯನು
ಎರಡನೇ ವಾಚನ: ಫಿಲಿಪ್ಪಿಯರಿಗೆ 2:1-11
ಸಹೋದರರೇ, ಕ್ರಿಸ್ತ ಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ. ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು. ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ. ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ. ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ: ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ. ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು. ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು. ‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.
ಶುಭಸಂದೇಶ: ಮತ್ತಾಯ 21:28-32
ಯೇಸುಸ್ವಾಮಿ ಮುಖ್ಯಯಾಜಕರಿಗೂ ಪ್ರಜಾಪ್ರಮುಖರಿಗೂ “ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ. ಅದಕ್ಕೆ ಅವನು, ‘ನಾನು ಹೋಗುವುದಿಲ್ಲ’ ಎಂದು ಉತ್ತರವಿತ್ತ. ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ. ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, ‘ಇಗೋ, ಹೋಗುತ್ತೇನಪ್ಪಾ’, ಎಂದು ಹೇಳಿದ. ಆದರೆ ಹೋಗಲೇ ಇಲ್ಲ. ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.
30.09.23
29.09.23 - " ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,”
ಮೊದಲನೇ ವಾಚನ: ದಾನಿಯೇಲನು 7:9-10, 13-14
ಕೀರ್ತನೆ: 138:1-2, 2-3, 4-5
ಶ್ಲೋಕ: ಹೃದಯಪೂರ್ವಕ ವಂದನೆ ಪ್ರಭೂ ನಿನಗೆ, ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ.
ಶುಭಸಂದೇಶ: ಯೋವಾನ್ನ 1:47-51
28.09.23
ಮೊದಲನೆಯ ವಾಚನ: ಹಗ್ಗಾಯ 1:1-8
27.09.23 - "ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ, ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ"
ನಾನು ಎಜ್ರನು ಸಂಧ್ಯಾನೈವೇದ್ಯ ಸಮರ್ಪಣೆಯ ನಂತರ ದೇಹದಂಡನೆ ಮಾಡುವುದನ್ನು ಬಿಟ್ಟು ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ: " ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ, ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ! ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ, ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು. ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ,. ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧ ಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪ ಮಟ್ಟಿಗೆ ನವಜೀವನವನ್ನು ಅನುಗ್ರಹಿಸಿದಿರಿ. ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ, ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಗುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.
26.09.23 - "ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣ ತಮ್ಮಂದಿರು,"
ಅರಸ ದಾರ್ಯಾವೇಷನು ಜೆರುಸಲೇಮಿನ ದೇವಾಲಯದ ಬಗ್ಗೆ ಬರೆದು ಕಳುಹಿಸಿದ ಅಪ್ಪಣೆ ಇದು: ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೇಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ. ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದದೆ ಎಲ್ಲ ವೆಚ್ಚವನ್ನು ಕೊಡಬೇಕು. ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಗಳನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಪಡಿಸುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು." ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಂದ ಪ್ರೇರಿತನಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದನು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಆರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು. ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು. ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು, ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು. ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕವನ್ನು ಆಚರಿಸಿದರು. ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.
ಶ್ಲೋಕ: ಪ್ರಭುವಿನಾಲಕ್ಕೆ ಹೋಗೋಣ ಬಾ ಎಂದು, ಜನರೆನ್ನ ಕರೆದಾಗ ಆಯಿತೆನಗೆ ಆನಂದ
25.09.23
24.09.23 - "ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು"
ಮೊದಲನೇ ವಾಚನ: ಯೆಶಾಯ 55:6-9

ಕೀರ್ತನೆ:145:2-3, 8-9, 17-18
ಶ್ಲೋಕ: ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ
ಎರಡನೇ ವಾಚನ: ಫಿಲಿಪ್ಪಿಯರಿಗೆ 1:20-24, 27
ಸಹೋದರರೇ, ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ. ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ. ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು. ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು. ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ. ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.
ಶುಭಸಂದೇಶ: ಮತ್ತಾಯ 20:1-16
23.09.23 - "ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ, "ಎಂದು ಒತ್ತಿ ಹೇಳಿದರು"
ಅತಿ ಪ್ರಿಯನೇ, ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ, ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸಿಸುವುದೇನೆಂದರೆ: ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು: ಸೂಕ್ತಕಾಲದಲ್ಲಿ ಕ್ರಿಸ್ತ ಯೇಸುವಿನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವನು ಪರಮಾನಂದನು, ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ, ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.
ಜನರು ಊರುರುಗಳಿಂದ ಹೊರಟು ಯೇಸುವಿನ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು: " ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲುತುಳಿತಕ್ಕೆ ಸಿಕ್ಕಿ ಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟನು. ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿ ಹೋದವು. ಇನ್ನೂ ಕೆಲವು ಮುಳ್ಳು ಪೂದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು, " ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, " ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ, "ಎಂದು ಒತ್ತಿ ಹೇಳಿದರು. ಶಿಷ್ಯರು, 'ಈ ಸಾಮತಿಯ ಅರ್ಥವೇನು?' ಎಂದು ಕೇಳಿದಾಗ, ಯೇಸು ಇಂತೆಂದರು: " ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು. ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ. ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು, ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ. ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು, ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪ ಕಾಲ ವಿಶ್ವಾಸಿಸುತ್ತಾರೆ, ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ. ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲ ಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿ ಬಿಡುತ್ತವೆ, ಇವರ ಫಲ ಪಕ್ವವಾಗುವುದಿಲ್ಲ. ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲತರುವವರು, " ಎಂದರು.
22.09.23 - "ಸತ್ಸಂಬಂದ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು"

ಅವರ ಭರವಸೆ ಸಿರಿಸಂಪತ್ತಿನಲಿ I
ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II
ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I
ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II
ಪ್ರಾಣಕೆ ತೆರಬೇಕಾದ ಈಡು ಅಮೂಲ್ಯ I
ಅದಕೆ ಸಾಕಷ್ಟು ತೆರಲು ಯಾರಿಗೂ ಅಸಾಧ್ಯ II
ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I
ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II
ಬುದ್ಧಿಜೀವಿಗಳೂ ಸಾಯುವುದು ಖಂಡಿತ I
ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I
ಅವರ ಸೊತ್ತು ಪರರ ಪಾಲು, ಇದೂ ಖಚಿತ II
ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I
ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II
ಸಿರಿಬಂದಾಗ ಕೊರತೆಯಿರದು ಹೊಗಳಿಕೆಗೆ I
ಆತ್ಮಸ್ತುತಿ, ಮುಖಸ್ತುತಿ, ಇವುಗಳ ಮೆರೆತಕೆ II
ಸೇರದಿರನಾತ ಪಿತೃಗಳಧೋಗತಿಯನು I
ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II
ನೆಲೆಯಾಗಿರನು ಪಟ್ಟಪದವಿಯಲಿ I
ನಾಶವಾಗುವನು ಪಶುಪ್ರಾಣಿಗಳ ಪರಿ II
ಶುಭಸಂದೇಶ: ಲೂಕ 8:1-3
21.09.23 - "ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ"
ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ. ಯಾವಾಗಲು ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ. ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು. ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು. ನಮ್ಮೆಲ್ಲರಿಗೂ ಪ್ರಭೂ ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ, ದೇವರೂ ಒಬ್ಬರೇ, ಸರ್ವರ ತಂದೆಯೂ ಇವರೇ; ಸರ್ವಶ್ರೇಷ್ಟರೂ ಅವರೇ; ಸರ್ವರ ಮುಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ. ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತ ಯೇಸು ಅನುಗ್ರಹಿಸಿರುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: ಈ ವೆಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರದೇಹವಾದ ಧರ್ಮಸಭೆ ಅಭಿವೃದ್ಧಿ ಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು. ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕ್ಯಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತ ಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ
20.09.23 - "ದೈವಜ್ಞಾನವೇ ನಿಜವಾದ ಜ್ಞಾನ"
ಮೊದಲನೇ ವಾಚನ: 1ತಿಮೊಥೇಯನಿಗೆ 3:14-16
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ? ಪೇಟೆಬೀದಿಗಳಲ್ಲಿ ಕುಳಿತು, "ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ" ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ. ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, "ಅವನಿಗೆ ದೆವ್ವ ಹಿಡಿದಿದೆ," ಎಂದು ಹೇಳಿದಿರಿ; ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, "ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ," ಎನ್ನುತ್ತೀರಿ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ," ಎಂದರು.
19.09.23 - "ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,"
ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು ಊರ ಬಾಗಿಲನ್ನು ಸಮೀಪಿಸುದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು. ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು "ಅಳಬೇಡ" ಎಂದು ಹೇಳಿ, ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, "ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು," ಎಂದರು. ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು. ಎಲ್ಲರೂ ಭಯಭ್ರಾಂತರಾದರು. "ಮಹಾ ಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ," ಎಂದು ದೇವರನ್ನು ಕೊಂಡಾಡಿದರು. ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.
18.09.23 - "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ"
ಮೊದಲನೇ ವಾಚನ: 1 ತಿಮೊಥೇಯನಿಗೆ 2:1-8
ಮೊತ್ತ ಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ. ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತವಾಗಿ ಶಾಂತಿ ಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು. ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು. ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ, ದೇವರು ಒಬ್ಬರೇ, ಅವರೇ ಮಾನವರಾಗಿರುವ ಕ್ರಿಸ್ತಯೇಸು. ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು. ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ. ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.
ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I
ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II
ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I
ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II
ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I
ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II
ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I
ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II
ಜನರಿಗೆ ಮನಮುಟ್ಟುವಂತೆ ಬೋಧನೆ ಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು. ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು. ಶತಾಧಿಪತಿ ಯೇಸುವಿನ ವಿಷಯವನ್ನು ಕೇಳೆ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕರನ್ನು ಗುಣಪಡಿಸಲು ಬರಬೇಕೆಂದು ಮನವಿ ಮಾಡಿಕೊಂಡನು. ಅವರು ಯೇಸುವಿನ ಬಳಿಗೆ ಬಂದು, "ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಆರ್ಹನು. ನಮ್ಮ ಜನರ ಮೆಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾ ಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ," ಎಂದು ಬಹಳವಾಗಿ ವಿನಂತಿಸಿದರು. ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ ಶತಾಧಿಪತಿ ತನ್ನ ಗೆಳೆಯರ ಮುಖಾಂತರ, "ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈ ಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು "ಬಾ, ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ "ಹೋಗು," ಎಂದರೆ ಹೋಗುತ್ತಾನೆ. ಸೇವಕನಿಗೆ "ಇಂಥದ್ದನ್ನು ಮಾಡು," ಎಂದರೆ ಮಾಡುತ್ತಾನೆ," ಎಂದು ಹೇಳಿ ಕಳುಹಿಸಿದನು. ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿ ನೋಡಿ, "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ," ಎಂದರು. ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆ ಬಿದ್ದಿದ್ದ ಆ ಸೇವಕನು ಸ್ವಸ್ಥವಾಗಿದ್ದುದನ್ನು ಕಂಡರು.
17.09.23
16.09.23 - "ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?"
ಮೊದಲನೇ ವಾಚನ : 1 ತಿಮೋಥಿ 1:15-17
ಪ್ರಭುವಿನ ನಾಮ ಸ್ತುತಿಯನು ಮಾಡಿ II
ಪ್ರಭುವಿನ ಸಿರಿನಾಮವು ಪೂಜ್ಯ I
ಇಂದಿಗೂ ಎಂದೆಂದಿಗೂ ಪೂಜ್ಯ II
ಪ್ರಭುವಿನಾ ಸಿರಿನಾಮವು ಸ್ತುತ್ಯ I
ಪೂರ್ವ ಪಶ್ಚಿಮದವರೆಗೂ ಸ್ತುತ್ಯ II
ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I
ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II
ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I
ಉನ್ನತದಲಿ ಆಸನಾರೂಢನು ಆತ I
ಇಹಪರಗಳನು ವೀಕ್ಷಿಸಲಾತ ಶಕ್ತ II
ದೀನರನು ಎಬ್ಬಿಸುವನು ಧೂಳಿನಿಂದ I
ಬಡವರನು ಎತ್ತುವನು ತಿಪ್ಪೆಯಿಂದ II
15.09.23 - "ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದು ಹಾಕು"
ಮೊದಲನೇ ವಾಚನ: 1 ತಿಮೊಥೇಯನಿಗೆ 1:1-2, 12-14
ನೀಡು ದೇವಾ ರಕ್ಷಣೆಯನು I
ನಾ ನಿನಗೆ ಶರಣಾಗತನು II
“ನೀನೇ ನನ್ನೊಡೆಯ"ನೆಂದು ನಾ ನುಡಿದೆ I
ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II
ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I
ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II
ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I
ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II
ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I
ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II
14.09.23 - "ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು"
ಮೊದಲನೇ ವಾಚನ: ಸಂಖ್ಯಾಕಾಂಡ - 21:4-9
ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,", ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ|
ಗಮನಕೊಡಿ ನಾ ಹೇಳುವ ಮಾತುಗಳಿಗೆ||
ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು|
ಹೊರಪಡಿಸುವೆನು ಪೂರ್ವಕಾಲದ ಗೂಢಾರ್ಥಗಳನು||
ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ||
ನೆನೆದರಾಗ ದೇವರೇ ತಮಗಾಶ್ರಯದುರ್ಗವೆಂದು|
ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು||
ಆದರೆ ಅವರ ನಾಲಿಗೆಯಾಡಿತು ಅಸತ್ಯ|
ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ||
ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ|
ಬದ್ದರಾಗಿರಲಿಲ್ಲ ಆತನ ನಿಬಂಧನೆಗಳಲಿ||
ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ|
ಕೋಪವ ತಾಳಿಕೊಂಡನು, ಹಲವು ವೇಳೆ ಉದ್ರೇಕಗೊಳ್ಳದೆ||

ಯೇಸು ನಿಕೊದೇಮನಿಗೆ ಇಂತೆಂದರು: "ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.
13.09.23 - "ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! "
12.09.23 - "ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು."
ಮೊದಲನೇ ವಾಚನ: ಕೊಲೊಸ್ಸೆಯರಿಗೆ 2:6-15
ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I
ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II
ಹೊಗಳುವೆನು ನಾ ದಿನದಿನವೂ ನಿನ್ನನು I
ಭಜಿಸುವೆನೆಂದೆಂದಿಗೂ ನಿನ್ನ ಹೆಸರನು II
ಪ್ರಭು ದಯಾನಿಧಿ, ಕೃಪಾಸಾಗರನು I
ಸಹನಶೀಲನು, ಪ್ರೀತಿಪೂರ್ಣನು II
ಪ್ರಭುವಿನ ಕರುಣೆ ಎಲ್ಲರ ಮೇಲೆ I
ಆತನ ಕೃಪೆಯು ಸೃಷ್ಟಿಯ ಮೇಲೆ II
ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I
ಕೊಂಡಾಡುವುದು ನಿನ್ನನು ಭಕ್ತ ಸಮೂಹವು II
ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II
ಘೋಷಣೆ ಯೊವಾನ್ನ 6:63,68
ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡರು, ಅವರಿಗೆ "ಪ್ರೇಷಿತರು" ಎಂದು ಹೆಸರಿಟ್ಟರು. ಹೀಗೆ ಆಯ್ಕೆ ಆದವರು; ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಆಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೋಲೊಮಾಯ, ಮತ್ತಾಯ ಮತ್ತು ತೋಮ, ಆಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. ಆನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.