ಮೊದಲನೇ ವಾಚನ: ಎಜ್ರನು 6:7-8, 12, 14-20
ಅರಸ ದಾರ್ಯಾವೇಷನು ಜೆರುಸಲೇಮಿನ ದೇವಾಲಯದ ಬಗ್ಗೆ ಬರೆದು ಕಳುಹಿಸಿದ ಅಪ್ಪಣೆ ಇದು: ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೇಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ. ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದದೆ ಎಲ್ಲ ವೆಚ್ಚವನ್ನು ಕೊಡಬೇಕು. ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಗಳನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಪಡಿಸುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು." ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಂದ ಪ್ರೇರಿತನಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದನು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಆರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು. ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು. ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು. ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು. ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು, ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು. ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕವನ್ನು ಆಚರಿಸಿದರು. ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.
ಕೀರ್ತನೆ: 122:1-2, 3-4, 4-5
ಶ್ಲೋಕ: ಪ್ರಭುವಿನಾಲಕ್ಕೆ ಹೋಗೋಣ ಬಾ ಎಂದು, ಜನರೆನ್ನ ಕರೆದಾಗ ಆಯಿತೆನಗೆ ಆನಂದ
ಶುಭಸಂದೇಶ: ಲೂಕ 8:19-21
No comments:
Post a Comment