ಮೊದಲನೆಯ ವಾಚನ: ಮಲಾಕಿ 1: 14-2: 2, 8-10
ಇದು ಸರ್ವೇಶ್ವರನ ನುಡಿ: ತನ್ನ ಹಿಂಡಿನಲ್ಲಿರುವ ಗಂಡುಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನ ಮಾಡುವವನು ಮೋಸಗಾರ, ಅವನು ಶಾಪಗ್ರಸ್ತ, ನಾನೋ ರಾಜಾಧಿರಾಜ, ನನ್ನ ನಾಮಕ್ಕೆ ಅನ್ಯ ರಾಷ್ಟ್ರಗಳೂ ಭಯಪಡುತ್ತದೆ ಎನ್ನುತ್ತಾರೆ. ಸೇನಾಧೀಶ್ವರ ಸರ್ವೇಶ್ವರ, ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಅದನ್ನು ನೀವು ಮನದಟ್ಟುಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟುಮಾಡಿಕೊಂಡಿಲ್ಲ. ಈಗಲಾದರೂ, ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿ ಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ. ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತ ಮಾಡಿದ್ದೀರಿ. ಆದುದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವನು. ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು. ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?
ಕೀರ್ತನೆ 131: 1-3. v. 2
ಶ್ಲೋಕ: ಪ್ರಭೂ, ನನ್ನಾತ ಸಮಾಧಾನದಿಂದಿದೆ
ಹಮ್ಮಿಲ್ಲ ಪ್ರಭೂ, ನನ್ನೆದೆಯೊಳು
ನನಗಿಲ್ಲ ಸೊಕ್ಕಿನ ಕಣ್ಣುಗಳು
ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ
ಅಸಾಧ್ಯವಾದುದನ್ನು ಕೈಗೊಂಡಿಲ್ಲ. R
ಎಂದೇ ನನ್ನಾತ್ಮ ಸಮಾಧಾನದಿಂದಿದೆ
ಮೌನದಿಂದಿದೆ ತಾಯ್ಕಡಿಲಾ ಕೂಸಂತೆ
ನೆಮ್ಮದಿಯಿಂದಿಗೆ ತಾಯ್ಕಡಿಲಾ ಶಿಶುವಂತೆ.R
ಇಸ್ರಯೇಲೇ, ಪ್ರಭುವಿನಲಿ ನಂಬಿಕೆಯಿಂದಿರು
ಇಂದಿಗೂ ಎಂದೆಂದಿಗೂ ಭರವಸೆಯಿಂದಿರು.R
ಎರಡನೇ ವಾಚನ: 1 ಥೆಸಲೋನಿಯರಿಗೆ 2: 7-9, 13
ಸಹೋದರರೇ, ತಾಯಿ ತನ್ನ ಮಕ್ಕಳನ್ನು ಸಾಕಿ ಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು. ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು . ಸಹೋದರರೇ, ನಮ್ಮ ಶ್ರಮ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದವು. ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯ ಪೂರ್ಣವಾಗಿರುವ ಈ ವಾಕ್ಯವು ನಿಜವಾಗಿಯೂ ದೇವರ ಸಂದೇಶವೇ ಸರಿ.
ಯೊವಾನ್ನ 15:15
ಅಲ್ಲೆಲೂಯ, ಅಲ್ಲೆಲೂಯ!
ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ;
ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.
ಅಲ್ಲೆಲೂಯ!
ಶುಭಸಂದೇಶ: ಮತ್ತಾಯ 2 23: 1-12
ಆ ಕಾಲದಲ್ಲಿ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸು ಇಂತೆಂದರು: “ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿದ್ದಾರೆ. ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ, ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ. ಭಾರವಾದ ಹಾಗೂ ಹೊರಭಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ, ಅವನ್ನು ಕಿರು ಬೆರಳಿನಿಂದಲೂ ಮುಟ್ಟಲೊಲ್ಲರು, ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದಮಾಡಿಕೊಳ್ಳುತ್ತಾರೆ. ಜೌತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ. ಅದು ಮಾತ್ರವಲ್ಲ, 'ಗುರುವೇ' ಎಂದು ಕರೆಯಿಸಿಕೊಳ್ಳಲು ಇಚ್ಚಿಸುತ್ತಾರೆ. ಹಾಗೆ ಕರೆಯಿಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು. ಇಹದಲ್ಲಿ ನೀವು ಯಾರನ್ನೂ 'ಪಿತನೇ' ಎಂದು ಸಂಬೋಧಿಸಬೇಡಿ, ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ. 'ಒಡೆಯ'' ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, `ಆತನೇ ಕ್ರಿಸ್ತ.' ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು. ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನನ್ನೂ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ತಗ್ಗಿಸಿಕೊಳ್ಳುವವರನ್ನು ದೇವರು ಮೇಲಕ್ಕೇರಿಸುವರು."
Please upload 6th Monday bible readings. Thank you.
ReplyDelete