ಮೊದಲನೆಯ ವಾಚನ : ಯೊವಾನ್ನನು ಬರೆದ ಮೊದಲನೆಯ ಪತ್ರದಿಂದ ಇಂದಿನ ವಾಚನ 1:5-2:2
ಪ್ರಭುವಿನ ವಾಕ್ಯ
ಕೀರ್ತನೆ 124: 2-3,4-5,7-8
ಶ್ಲೋಕ: ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು | ಹರಿದುಹೋಯಿತಿದೋ ಬಲೆಯು, ಹಾರಿಹೋದೆವು ನಾವು ||
1. ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು?|
ಜನರೆಮಗೆ ವಿರುದ್ಧ ಎದ್ದಾಗ ಏನಾಗುತ್ತಿತ್ತು?||
ಉರಿಗೊಳ್ಳುತ್ತಿದ್ದರು ಕಡುಗೋಪದಿಂದ ಖಂಡಿತ|
ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ||
ಶ್ಲೋಕ
2. ಕೊಚ್ಚುಬಿಡುತ್ತಿತ್ತು ನಮ್ಮನ್ನು ಹುಚ್ಚುಪ್ರವಾಹ|
ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ||
ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ||
ಶ್ಲೋಕ
3. ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು|
ಹರಿದುಹೋಯಿತಿದೋ ಬಲೆಯು, ಹಾರಿಹೋದೆವು ನಾವು||
ನಮಗುದ್ಧಾರ ಪ್ರಭುವಿನ ನಾಮದಲಿ|
ಭೂಮ್ಯಾಕಾಶವನು ಸೃಜಿಸಿದಾತನಲಿ||
ಶ್ಲೋಕ
ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ಓ ದೇವಾ ನಿಮ್ಮನ್ನು ಸ್ತುತಿಸುತ್ತೇವೆ, ನೀವೇ ನಮ್ಮ ಪ್ರಭುವೆಂದು ನಿಮ್ಮನ್ನು ಅಂಗೀಕರಿಸುತ್ತೇವೆ | ರಕ್ತ ಸಾಕ್ಷಿಗಳ ಮಹಿಮಾವೃಂದವು ನಿಮ್ಮನ್ನು ಸ್ತುತಿಸುತ್ತದೆ, ಓ ಪ್ರಭೂ ||
ಅಲ್ಲೆಲೂಯ!
ಶುಭಸಂದೇಶ : ಮತ್ತಾಯನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 2:13-18
ಆ ಕಾಲದಲ್ಲಿ ಜ್ಯೋತಿಷಿಗಳು ಹೊರಟು ಹೋದಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವತನಕ ಅಲ್ಲೇ ಇರು " ಎಂದನು. ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು. ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, "ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು "ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು. ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರಿದ, ಎಲ್ಲಾ ಗಂಡುಮಕ್ಕಳನ್ನು ಕೊಂದು ಹಾಕಿಸಿದನು. ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು. ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು, "ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.
ಪ್ರಭುಕ್ರಿಸ್ತರ ಶುಭಸಂದೇಶ
Please send today Bible readings
ReplyDelete