ಆ ಕಾಲದಲ್ಲಿ ಯೇಸು ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು. ಜನರು ತಂಡೋಪತಂಡವಾಗಿ ಕೂಡಿ ಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು: " ಒಬ್ಬ ರೈತ ಬಿತ್ತುವುದಕ್ಕೆ ಹೋದ, ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜಗಳನ್ನು ತಿಂದುಬಿಟ್ಟವು. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು. ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು. ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು. ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ, " ಎಂದು ಒತ್ತಿ ಹೇಳಿದರು.Monday, July 3, 2023
26.07.23
ಆ ಕಾಲದಲ್ಲಿ ಯೇಸು ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು. ಜನರು ತಂಡೋಪತಂಡವಾಗಿ ಕೂಡಿ ಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು: " ಒಬ್ಬ ರೈತ ಬಿತ್ತುವುದಕ್ಕೆ ಹೋದ, ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜಗಳನ್ನು ತಿಂದುಬಿಟ್ಟವು. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು. ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು. ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು. ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ, " ಎಂದು ಒತ್ತಿ ಹೇಳಿದರು.25.07.23 - "ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?”
ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು. “ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು. ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು," ಎಂದು ನುಡಿದರು. ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.
24.07.23 - "ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ"
23.07.23 - “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು”
ಶುಭಸಂದೇಶ: ಮತ್ತಾಯ13:24-43
ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ. ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ. ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು. ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು. ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು. ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ. 30ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.” ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.” ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.” ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು. ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು. ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು; ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು. ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು. ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು. ಸದ್ದರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!" ಎಂದರು.
22.07.23 - "ರಬ್ಬೂನಿ"
ಮೊದಲನೇ ವಾಚನ: ಪರಮಗೀತೆ 3:1-4
ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ
ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ.
ನಿನ್ನ ಮಂದಿರದಲಿ ನನಗಾದ ದರ್ಶನದಲಿ
ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ
ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ
ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ.
ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ
ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ
ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ
ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ.
ನನಗೆ ನೀನು ನಿರಂತರದ ಸಹಾಯಕ
ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ
ನನ್ನಾತ್ಮ ನಿನಗಾತುಕೊಂಡಿದೆ
ನಿನ್ನ ಬಲಗೈ ನನಗಿಂಬಾಗಿದೆ.
ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದು ಹಾಕಿರುವುದನ್ನು ಕಂಡಳು. ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿ ಬಂದು, "ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿ ಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದಾರೋ ಗೊತ್ತಿಲ್ಲ," ಎಂದು ಹೇಳಿದಳು. ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ ಶ್ವೇತ ವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ, ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತ್ತಿದ್ದರು. ಅವರು ಆಕೆಯನ್ನು, "ಏಕಮ್ಮಾ ಅಳುತ್ತಿರುವೆ?" ಎಂದು ಕೇಳಿದರು. "ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿ ಬಿಟ್ಟಿದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು," ಎಂದಳು. ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ. ಯೇಸು, "ಏಕಮ್ಮಾ ಅಳುತ್ತಿರುವೆ? ಏನನ್ನು ಹುಡುಕುತ್ತಿರುವೆ?" ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, "ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ," ಎಂದು ಹೇಳಿದಳು. ಆಗ ಯೇಸು, "ಮರಿಯಾ" ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, "ರಬ್ಬೂನಿ" ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ "ಗುರುದೇವಾ" ಎಂದರ್ಥ) ಯೇಸು ಆಕೆಗೆ, "ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿ ಹೋಗುತ್ತೇನೆಂದು ತಿಳಿಸು," ಎಂದು ಹೇಳಿದರು. ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, "ನಾನು ಪ್ರಭುವನ್ನು ಕಂಡೆ: ಅವರು ಹೀಗೆಲ್ಲಾ ಹೇಳಿದರು," ಎಂದು ತಿಳಿಸಿದಳು.
21.07.23 - "ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ"
ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕ ಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆ ಕೊಡದೆಹೋದನು. ಈಜಿಪ್ಟ್ ದೇಶದಲ್ಲಿ ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೀಗೆಂದರು: "ಎಲ್ಲ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರಬೇಕು. ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆ ಇಡಬೇಕು. "ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡು ಮರಿಯನ್ನಾಗಲಿ ಆರಿಸಿಕೊಳ್ಳಬೇಕು. ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ. ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು. ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆ ವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮತಮ್ಮ ಕೂಟಗಳಲ್ಲಿ ಕೊಯ್ಯಬೇಕು. ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು. ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟ ಮಾಡಬೇಕು. ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು. ಮರುದಿನ ಬೆಳಗಿನ ತನಕ ಅದರಲ್ಲಿ ಸ್ವಲ್ಪವನ್ನಾದರು ಮಿಗಿಸಕೂಡದು. ಬೆಳಗಿನವರೆಗೆ ಮಿಕ್ಕಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಆ ಬೋಜನವನ್ನು ಮಾಡಬೇಕಾದ ಕ್ರಮ ಇದು; ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು, ಬೇಗಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ. ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದು ಹೋಗುವೆನು. ಮನುಷ್ಯರಾಗಿರಲಿ, ಪ್ರಾಣಿಗಳಾಗಿರಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ! ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು. ಆದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.
ಮಾಡಿದರಾಗ ಆತನ ಗುಣಗಾನವನು II
ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I
ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II
ಪೂರೈಸಿದನಾತ ಅವರ ಕೋರಿಕೆಯನು I
ಕಳುಹಿಸಿದನಾದರೆ ಭೀಕರ ರೋಗವನು II
ಅಸೂಯೆಗೊಂಡರು ಪಾಳೆಯದೊಳು ಮೋಶೆಯ ಮೇಲೆ I
ಪ್ರಭುವಿಗೆ ಪ್ರತಿಷ್ಠಿತನಾದ ಆ ಆರೋನನ ಮೇಲೆ II
ಭೂಮಿ ಬಾಯ್ದೆರೆದು ನುಂಗಿತು ದಾತಾನನನು I
ಮುಚ್ಚಿಬಿಟ್ಟಿತು ಅಭಿರಾಮನ ಕಡೆಯವರನು II
ಆ ಜನರ ಮಧ್ಯದಲಿ ಬೆಂಕಿ ಹಬ್ಬಿತು I
ಅಗ್ನಿಜ್ವಾಲೆ ದಹಿಸಿಬಿಟ್ಟಿತು ಆ ದುಷ್ಟರನು II
20.07.23 - "ನನ್ನ ನೊಗ ಹಗುರ, ನನ್ನ ಹೊರೆ ಸುಗಮ,"
ಮೋಶೆ ದೇವರಿಗೆ, "ನಾನು ಇಸ್ರಯೇಲರ ಬಳಿಗೆ ಹೋಗಿ, "ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ," ಎಂದು ಹೇಳಿದಾಗ ಅವರು ಒಂದು ವೇಳೆ, "ಆತನ ಹೆಸರೇನು?" ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?" ಎಂದು ಕೇಳಿದನು. ಆಗ ದೇವರು ಹೀಗೆಂದರು: "ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ "ತಾನಾಗಿ ಇರುವವನು, ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ" ಎಂದು ಹೇಳು." ದೇವರು ಮೋಶೆಗೆ ಮತ್ತೆ ಇಂತೆದರು: "ನೀನು ಇಸ್ರಯೇಲರಿಗೆ, ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂದು ಹೇಳು. ಇದು ಸದಾ ಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೇ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು. ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, ನಿಮ್ಮ ಪೂರ್ವಜರ ದೇವರು ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ. ಈಜಿಪ್ಟಿನಲ್ಲಿ ನಿಮಗುಂಟಾಗಿರುವ ಕಷ್ಟಸಂಕಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನು ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ" ಎಂದು ತಿಳಿಸು. ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ. ಅಪ್ಪಣೆಯಾಗಬೇಕು" ಎಂದು ಕೇಳಿಕೊಳ್ಳಿ ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ. ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೇ ನಾನಾ ವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆ ಮಾಡುವನು.
ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I
ಮಾಡಿರಿ ಆತನ ನಾಮಸ್ಮರಣೆಯನು I
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II
ಆತನ ದಾಸ ಅಬ್ರಹಾಮನ ಸಂತತಿಯವರೇ I
ಆತನಾರಿಸಿಕೊಂಡ ಯಕೋಬನ ವಂಶದವರೇ II
ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I
ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II
ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II
ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I
ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II
ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I
ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II
ಕಳಿಸಿದ ತನ್ನ ದಾಸ ಮೋಶೆಯನು I
ತಾನು ಆರಿಸಿಕೊಂಡ ಆರೋನನನು II
ನೋಡಿದರಿವರು ಆತನ ಸೂಚಕಕಾರ್ಯಗಳನು I
ಹಾಮ ನಾಡಿನಲಿ ನಾನಾ ಅದ್ಭುತಕಾರ್ಯಗಳನು II
ಆ ಸಮಯದಲ್ಲಿ ಯೇಸುಸ್ವಾಮಿ, ಜನಸಮೂಹವನ್ನುದ್ದೇಶಿಸಿ: "ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ: ನಾನು ನಿಮಗೆ ವಿಶ್ರಾಂತಿ ಕೊಡುತ್ತೇನೆ. ನಾನು ವಿನಯಶೀಲನು, ದೀನಹೃದಯನು: ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು. ನನ್ನ ನೊಗ ಹಗುರ, ನನ್ನ ಹೊರೆ ಸುಗಮ," ಎಂದರು.
19.07.23 - "ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆ ಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ"
ಮೊದಲನೇ ವಾಚನ: ವಿಮೋಚನಾಕಾಂಡ 3:1-6, 9-12
ನನ್ನ ಕೂಗು ಸೇರಲಿ ನಿನ್ನ ಬಳಿಗೆ II
ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I
ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II
ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I
ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II
ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I
ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II
ಅಡವಿಯ ರಣಹದ್ದಿಗೆ ಸಮನಾದೆ I
ಹಾಳುರಿನ ಗೂಗೆಯ ಹಾಗಾದೆ II
ಮನೆಮೇಲಿನ ಒಂಟಿ ಪಕ್ಷಿಯಾದೆ I
ಬಳಲುತ್ತಿರುವೆನು ನಿದ್ರೆಯಿಲ್ಲದೆ II
ಶುಭಸಂದೇಶ: ಮತ್ತಾಯ 11:25-27
18.07.23 - "ಕೋರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ!"
ಮೊದಲನೇ ವಾಚನ: ವಿಮೋಚನಾಕಾಂಡ 2:1-15
ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II
ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I
ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II
ಸಂಕೀರ್ತಿಸುವೆನು ದೇವರ ಶ್ರೀನಾಮವನು I
ಕೃತಜ್ಞತೆಯಿಂದಾತನನು ಕೊಂಡಾಡುವೆನು II
ಸ್ವಾಮಿ ದೇವನಿಗಿದುವೇ ಸುಪ್ರೀತಿ I
ಕೊಂಬುಗೊರಸುಳ್ಳ ಗೂಳಿಬಲಿಗಿಂತ II
ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I
ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II
ಭೂಮ್ಯಾಕಾಶಗಳು ಆತನನು ಕೊಂಡಾಡಲಿ I
ಸಾಗರಗಳು, ಜಲಚರಗಳು ಆತನನು ಭಜಿಸಲಿ II
17.07.23 - "ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ"
ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ. ಅವನು ತನ್ನ ಜನರಿಗೆ, "ಇಸ್ರಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಬಲಾಢ್ಯರಾಗಿದ್ದಾರೆ, ಅಧೀನದಲ್ಲಿರಿಸಲು ಕಷ್ಟ ಸಾಧ್ಯ. ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನಗೈಯಬಹುದು. ಆದುದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು," ಎಂದು ಎಚ್ಚರಿಸಿದನು. ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸ ಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ "ಪಿತೋಮ್" ಮತ್ತು "ರಾಮ್ಸೇಸ್" ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. ಈಜಿಪ್ಟನರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚು ಹರಡಿಕೊಳ್ಳುತ್ತಿದ್ದರು. ಆದ್ದರಿಂದ ಇಸ್ರಯೇಲರ ಬಗ್ಗೆ ಈಜಿಪ್ಟರು ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. ಇಸ್ರಯೇಲರಿಂದ ಕ್ರೂರತನದಿಂದ ಸೇವೆ ಮಾಡಿಸಿಕೊಂಡರು. ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು. ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು," ಎಂದು ಆಜ್ಞೆ ಮಾಡಿದನು.
ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I
ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II
ಕೊಚ್ಚಿಬಿಡುತ್ತಿತ್ತು ನಮ್ಮನ್ನು ಹುಚ್ಚು ಪ್ರವಾಹ I
ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ I
ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ II
ತುತ್ತಾಗಿಸಲಿಲ್ಲ ನಮ್ಮನ್ನು ಶತ್ರುಗಳ ಬಾಯಿಗೆ I
ಕೃತಜ್ಞತಾಪೂರ್ವಕ ಸ್ತೋತ್ರ ಇಗೋ ಪ್ರಭುವಿಗೆ II
ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I
ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II
ನಮಗುದ್ಧಾರ ಪ್ರಭುವಿನ ನಾಮದಲಿ I
ಭೂಮ್ಯಾಕಾಶವನು ಸೃಜಿಸಿದಾತನಲಿ II
16.07.23 - “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ"
15.07.23 - "ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು"
ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸವಿೂಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು. ಆ ಗವಿ ಕಾನಾನ್ ನಾಡಿನ ಮಮ್ರೆಗೆದುರಾಗಿರುವ ಮಕ್ಬೇಲ ಎಂಬ ಬಯಲಿನಲ್ಲಿದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡು ಕೊಂಡನು. ಅಲ್ಲೇ ಅಬ್ರಹಾಮನಿಗೂ ಅವನ ಪತ್ನಿ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಮಡದಿ ರೆಬೆಕ್ಕಳಿಗೂ ಸಮಾಧಿ ಆಯಿತು. ಲೇಯಳನ್ನೂ ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಹೊಲದ ಸಮೇತ ಹಿತ್ತಿಯರಿಂದ ಕ್ರಯಕ್ಕೆ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ,” ಎಂದನು. ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು. ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಆದುದರಿಂದ ಜೋಸೆಫನಿಗೆ ಹೀಗೆಂದು ಹೇಳಿಕಳಿಸಿದರು: “ನಿನ್ನ ತಂದೆ ಸಾಯುವುದಕ್ಕೆ ಮುಂಚೆ ನಮಗೆ ಅಪ್ಪಣೆಮಾಡಿದ್ದೇನೆಂದರೆ - ‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು.’ ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು. ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ ನಾವು ನಿನಗೆ ಗುಲಾಮರು,” ಎಂದು ಹೇಳಿದರು. ಆದರೆ ಜೋಸೆಫನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ; ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದಿರಿ. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ. ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದೆ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು. ಜೋಸೆಫನೂ ಅವನ ತಂದೆಯ ಕುಟುಂಬದವರೂ ಈಜಿಪ್ಟಿನಲ್ಲಿ ವಾಸಮಾಡುತ್ತಾ ಬಂದರು. ಜೋಸೆಫನು ನೂರಹತ್ತು ವರ್ಷ ಬದುಕಿದ್ದನು; ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು. ಜೋಸೆಫನು ತನ್ನ ಅಣ್ಣ ತಮ್ಮಂದಿರಿಗೆ, “ನನ್ನ ಮರಣಕಾಲವು ಸವಿೂಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು. ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.
ಸಲ್ಲಿಸಿ ಪ್ರಭುವಿಗೆ ಕೃತಜ್ಞತಾ ಸ್ತೋತ್ರವನು
ಮಾಡಿರಿ ಆತನ ನಾಮಸ್ಮರಣೆಯನು
ಸಾರಿರಿ ಜಗಕೆ ಆತನ ಸತ್ಕಾರ್ಯಗಳನು
ಹಾಡಿ ಪಾಡಿ ಹೊಗಳಿರಿ ಪ್ರಭುವನು
ಧ್ಯಾನಿಸಿ ನೀವು ಆತನ ಪವಾಡಗಳನು
ಹೆಮ್ಮೆಪಡಿ ನೆನೆದಾತನ ಶ್ರೀನಾಮಹಿಗ್ಗಲಿ
ಹೃದಯ,ಕೋರಿ ಆತನ ದರ್ಶನ
ಆರಸಿರಿ ಪ್ರಭುವನೂ ಆತನ ಶಕ್ತಿಯನೂ
ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು
ನೆನೆಯಿರಿ ಆತನಾದ್ಭುತಗಳನು, ಮಹಾತ್ಕಾರ್ಯಗಳನು
ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು
ಪ್ರಭು ನಮ್ಮ ದೇವನೆ0ಬುದು ಶ್ರುತ
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ
ಶುಭಸಂದೇಶ: ಮತ್ತಾಯ 10:24-33
ಆ ಕಾಲದಲ್ಲಿ ಯೇಸು ಶಿಷ್ಯರಿಗೆ ಕೊಟ್ಟ ಆದೇಶ ಇದು: "ಗುರುವಿಗಿಂತ ಶಿಷ್ಯನು ಶ್ರೇಷ್ಟನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?" "ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರ ಪಡಿಸಿರಿ. ಕಿವಿಮಾತಾಗಿ ಕೇಳಿದ್ದನ್ನು ಮನೆ ಮಾಳಿಗೆಯ ಮೇಲೆ ನಿಂತು ಸಾರಿರಿ. ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. "ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.
14.07.23 - "ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿ ಕೊಡಲಾಗುವುದು"
ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು. ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, “ಇಗೋ, ಸಿದ್ಧನಿದ್ದೇನೆ,” ಎಂದನು. ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು; ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು. ಬಳಿಕ ಯಕೋಬನು ಬೇರ್ಷೆಬದಿಂದ ಪ್ರಯಾಣ ಮಾಡಿದನು. ಯಕೋಬನ ಮಕ್ಕಳು ತಮ್ಮ ತಂದೆಯಾದ ಯಕೋಬನನ್ನು ಮತ್ತು ತಮ್ಮ ಮಡದಿಮಕ್ಕಳನ್ನು ಫರೋಹನು ಕಳಿಸಿದ್ದ ಬಂಡಿಗಳಲ್ಲಿ ಕೂರಿಸಿಕೊಂಡು ಹೊರಟರು. ಕಾನಾನ್ ನಾಡಿನಲ್ಲಿ ತಾವು ಸಂಪಾದಿಸಿದ್ದ ಆಸ್ತಿಪಾಸ್ತಿಯನ್ನೂ ದನಕುರಿಗಳನ್ನೂ ತೆಗೆದುಕೊಂಡು ಈಜಿಪ್ಟ್ ದೇಶವನ್ನು ತಲುಪಿದರು. ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು. ಗೋಷೆನ್ ಪ್ರಾಂತ್ಯದಲ್ಲಿ ಜೋಸೆಫ್ ತನ್ನನ್ನು ಭೇಟಿಯಾಗಬೇಕೆಂದು ತಿಳಿಸಲು ಯಕೋಬನು ಯೆಹೂದನನ್ನು ಮುಂದಾಗಿ ಜೋಸೆಫನ ಬಳಿಗೆ ಕಳಿಸಿದನು. ಅವರೆಲ್ಲರು ಗೋಷೆನ್ ಪ್ರಾಂತ್ಯವನ್ನು ಬಂದು ಸೇರಿದರು. ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು. ಯಕೋಬನು ಜೋಸೆಫನಿಗೆ, “ಇನ್ನು ನಾನು ಸಂತೃಪ್ತಿಯಾಗಿ ಸಾಯುವೆನು ನೀನು ಇನ್ನೂ ಬದುಕಿರುವೆಯೆಂದು ಕೇಳಿದ್ದಾಯಿತು; ನಿನ್ನ ಮುಖವನ್ನು ಕಣ್ಣಾರೆ ನೋಡಿದ್ದಾಯಿತು,” ಎಂದನು.
ಯೇಸು ಶಿಷ್ಯರ ನಿಯೋಗವನ್ನು ಕಳುಹಿಸುವಾಗ ಅವರಿಗೆ ಕೊಟ್ಟ ಆದೇಶ ಇದು: "ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮ ಬುದ್ದಿಯುಳ್ಳವರೂ ಪಾರಿವಾಳಗಳಂತೆ ಸರಳ ಜೀವಿಗಳೂ ಆಗಿರಿ. ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಮದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿ ಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು. ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆ ಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.
13.07.23 - "ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ"
ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ: ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು. ಒಡೆಯರಾದ ತಾವು ಸೇವಕರಾದ ನಮ್ಮನ್ನು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾರೋ?’ ಎಂದು ಕೇಳಿದಿರಿ. ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು. ಅದಕ್ಕೆ ತಾವು ಸೇವಕರಾದ ನಮಗೆ, ‘ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ. ಅದಕ್ಕೆ ತಾವು, ‘ನಿಮ್ಮ ತಮ್ಮನು ಬಾರದಿದ್ದರೆ ನೀವು ಮತ್ತೊಮ್ಮೆ ನನ್ನ ಮುಖವನ್ನು ನೋಡಕೂಡದು,’ ಎಂದು ಆಜ್ಞೆಕೊಟ್ಟಿರಿ. “ತಮ್ಮ ಸೇವಕರಾದ ನಾವು ನಮ್ಮ ತಂದೆಯ ಬಳಿಗೆ ಹೋದಾಗ ಒಡೆಯರ ಮಾತನ್ನು ತಿಳಿಸಿದೆವು. ನಮ್ಮ ತಂದೆ, ‘ನೀವು ಇನ್ನೊಮ್ಮೆ ಹೋಗಿ ಧಾನ್ಯ ಕೊಂಡುಕೊಂಡು ಬನ್ನಿ’ ಎಂದಾಗ, ನಾವು, ‘ಹೋಗಲಾಗದು, ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು. ತಮ್ಮನು ನಮ್ಮ ಸಂಗಡ ಬಂದರೆ ಮತ್ತೆ ಹೋಗುತ್ತೇವೆ’ ಎಂದು ಹೇಳಿದೆವು. ಅದಕ್ಕೆ ತಮ್ಮ ಸೇವಕರಾದ ನಮ್ಮ ತಂದೆ, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರೇ ಗಂಡು ಮಕ್ಕಳು ಹುಟ್ಟಿದರೆಂಬುದು ನಿಮಗೆ ತಿಳಿದ ವಿಷಯ. ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟು ಹೋದ: ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ. ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು. ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನು ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ. ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು. ಜೋಸೆಫನು ತನ್ನ ಅಣ್ಣ ತಮ್ಮಂದಿರಿಗೆ, “ನಾನೇ ಜೋಸೆಫ್! ನನ್ನ ತಂದೆ ಇನ್ನೂ ಇದ್ದಾರೋ?” ಎಂದು ಕೇಳಿದ. ಅವರು ತತ್ತರಗೊಂಡು ಉತ್ತರಿಸಲಾರದೆ ಹೋದರು. ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ” ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ. ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ವ್ಯಸನಪಡಬೇಡಿ, ನಿಮ್ಮನ್ನೇ ನಿಂದಿಸಿಕೊಳ್ಳಬೇಡಿ. ಏಕೆಂದರೆ ಜೀವ ರಕ್ಷಣೆಗಾಗಿಯೇ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಇಲ್ಲಿಗೆ ಕಳುಹಿಸಿದರು.
12.07.23 - " 'ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ ' ಎಂದು ಬೋಧನೆ ಮಾಡಿರಿ"
ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಪರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, " ಹೋಗಿ, ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ, " ಎಂದು ಉತ್ತರ ಕೊಟ್ಟನು. ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು. ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು, ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು. ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು. ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು. ಜೋಸೆಫನು ಅವರನ್ನು ನೋದಿದ ಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುನುಡಿಯಿಂದ, " ನೀವು ಎಲ್ಲಿಯವರು? " ಎಂದು ಕೇಳಿದನು. ಅವರು, " ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು, " ಎಂದು ಹೇಳಿದರು. ಅವರೆಲ್ಲರನ್ನು ಮೂರು ದಿನಗಳವರೆಗೆ ಕಾವಲಲ್ಲಿ ಇರಿಸಿದನು. ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, " ನಾನು ದೇವರಲ್ಲಿ ಭಯಭಕ್ತಿಯುಳ್ಳವನು, ನಿಮಗೆ ಜೀವದ ಜೀವದ ಮೇಲೆ ಆಶೆಯಿದ್ದರೆ ನಾನು ಹೇಳಿದಂತೆ ಮಾಡಿ: ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ. ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ. ಆಗ ನೀವು ಸಾಯದೆ ಉಳಿಯುವಿರಿ, " ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು. ಆಗ ಅವರು ತಮ್ಮತಮ್ಮೊಳಗೆ, " ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿಯಿಂದ ಬೇಡಿಕೊಂಡ. ಅವನ ಪ್ರಾಣ ಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ, " ಎಂದು ಮಾತಾಡಿಕೊಂಡರು. ಅಂತೆಯೇ ರೂಬೇನನು, " ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ ' ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆ ಹೋದಿರಿ. ಅವನ ರಕ್ತ ಈಗ ನಿಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ, " ಎಂದ. ಜೋಸೆಫನು ಒಬ್ಬ ಅನುವಾದಕನ ಮುಖಾಂತರ ಅವರ ಸಂಗಡ ಮಾತನಾಡುತ್ತಿದ್ದುದರಿಂದ ಅವನಿಗೆ ತಮ್ಮ ಮಾತು ಗೊತ್ತಾಗುತ್ತಿದೆ ಎಂದು ಅವರು ನೆನಸಲಿಲ್ಲ. ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.
ಆ ಕಾಲದಲ್ಲಿ ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿ ಪ್ರೇಷಿತರ ಹೆಸರುಗಳು ಇವು: ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೇಯ ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ ಫಿಲಿಪ್ಪ ಮತ್ತು ಬಾರ್ತೊಲೊಮಾಯ ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ ಅಲ್ಪಾಯನ ಮಗ ಯಕೋಬ ಮತ್ತು ತದ್ದಾಯ ದೇಶಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ. ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸು ಅವರಿಗೆ ಕೊಟ್ಟ ಆದೇಶ ಇದು: " ಪರಕೀಯರತ್ತ ಹೋಗಲೇ ಬೇಡೀ, ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ, ಹೋಗುತ್ತಾ, ' ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ ' ಎಂದು ಬೋಧನೆಮಾಡಿರಿ."
10.07.23 - "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣ ಹೊಂದುವೆನು"
ಮೊದಲನೇ ವಾಚನ: ಆದಿಕಾಂಡ 28: 10-22
ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, "ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು," ಎಂದು ಬೇಡಿಕೊಂಡನು. ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿ ಹೋದರು. ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು" ಎಂದುಕೊಂಡಿದ್ದಳು ಆಕೆ. ಯೇಸು ಹಿಂದಿರುಗಿ ಆಕೆಯನ್ನು ನೋಡಿ, "ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ," ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು. ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲ ಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು, "ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ" ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯ ಮಾಡಿದರು. ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು. ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿ ಹರಡಿತು.
































