01.02.24
31.01.24 - "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,"
ಆ ಕಾಲದಲ್ಲಿ ಯೇಸು ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು. ಸಬ್ಬತ್ ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. "ಇದೆಲ್ಲ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ? " ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು. ಆಗ ಯೇಸು, " ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು, " ಎಂದರು. ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ. ಆ ಜನರ ಅವಿಶ್ವಾವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.
30.01.24
29.01.24 - “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,”

ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿ ಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವರಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟು ಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರ ಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ, ಎಂದು ಅವರಿಗೆ ವಿವರಿಸು,” ಎಂದರು. ಅಂತೆಯೇ ಅವನು ಹೊರಟು ಹೋಗಿ, ಯೇಸು ತನಗೆ ಮಾಡಿದ ಮಹಾದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯ ಚಕಿತರಾದರು.
28.01.24 - "ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮ ಪೂಜ್ಯರು ನೀವು,”
ಧರ್ಮೊಪದೇಶಕಾ೦ಡದಿ೦ದ ವಾಚನ 18:15-20
ಸಹೋದರರೇ, ನೀವು ಚಿಂತೆಯಿಲ್ಲದೆ ಇರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ಪ್ರಭುವಿನ ಸೇವೆಯಲ್ಲಿ ತತ್ಪರನಾಗಿರುತ್ತಾನೆ; ಪ್ರಭುವನ್ನು ಮೆಚ್ಚಿಸಲು ಶ್ರಮಿಸುತ್ತಾನೆ. ಮದುವೆ ಆದವನು ಲೋಕವ್ಯವಹಾರಗಳಲ್ಲಿ ಮಗ್ನನಾಗುತ್ತಾನೆ. ತನ್ನ ಸತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾನೆ. ಅಂಥವನು ಉಭಯ ಸಂಕಟಕ್ಕೆ ಸಿಕ್ಕಿಕೊಳ್ಳುತ್ತಾನೆ. ಮದುವೆಯಾಗದ ಮಹಿಳೆ ಅಥವಾ ಕನ್ನಿಕೆ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ದೇಹಾತ್ಮಗಳೆರಡನ್ನೂ ಪ್ರಭುವಿಗೆ ಮೀಸಲಾಗಿಡುತ್ತಾಳೆ. ಆದರೆ ವಿವಾಹಿತ ಸ್ತ್ರೀ ಲೋಕವ್ಯವಹಾರಗಳಲ್ಲಿ ಮಗ್ನಳಾಗಿರುತ್ತಾಳೆ. ತನ್ನ ಪತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾಳೆ. ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ. ಪ್ರಭುವಿನ ವಾಕ್ಯ
ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್ ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು. ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು. ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮ ಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು. ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟುಹೋಯಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು. ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.
27.01.24 - "ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?”
26.01.24 - “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ"
ಮೊದಲನೇ ವಾಚನ: 2 ತಿಮೊಥೇಯನಿಗೆ 1:1-8
ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದ ಪಡಬೇಕೆಂದು ಹಂಬಲಿಸುತ್ತಿದ್ದೇನೆ. ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ. ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಫಿಸುತ್ತೇನೆ. ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ. ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.
ಆ ಕಾಲದಲ್ಲಿ ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.
25.01.24 - "ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ"
ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೆ |
ಆತನನು ಹೊಗಲಿ ಹಾಡಿ ಸರ್ವಜನಾಂಗಗಳೇ||
ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ|
ಆತನ ಸತ್ಯಪರತೆ ಇರುವುದು ಅನಂತ ಕಾಲ||
ಅಲ್ಲೆಲೂಯ, ಅಲ್ಲೆಲೂಯ!
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ | ನೀವು ಲೋಕಕ್ಕೆ ಹೋಗಬೇಕು ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ ||
ಅಲ್ಲೆಲೂಯ!
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: ‘ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ. ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು. ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು; ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷ ಪದಾರ್ಥಗಳನ್ನೇನಾದರೂ ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣ ಹೊಂದುವರು.”
24.01.24 - “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,”
ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು. ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು: “ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ. ಬಿತ್ತನೆ ಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು; ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿ ಹೋದವು. ಇನ್ನು ಕೆಲವು ಬೀಜಗಳು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳು ಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲ ಕೊಡಲಿಲ್ಲ. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು. ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ. ‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರರು; ಪಾಪಕ್ಷಮೆ ಹೊಂದಿಯಾರರು,” ಎಂದರು. ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ? ಈ ಸಾಮತಿಯಲ್ಲಿ, ಬಿತ್ತುವವನು ‘ದೇವರ ಸಂದೇಶ’ ಎಂಬ ಬೀಜವನ್ನು ಬಿತ್ತುತ್ತಾನೆ. ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದು ಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ. ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚ ಕಾಲ ಮಾತ್ರ ಉಳಿಯುತ್ತದೆ. ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು. ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲ ಬಿಡದಂತೆ ಮಾಡುತ್ತವೆ. ಇವರೇ ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು. ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನು ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.
23.01.24 - "ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೆ ಅವರೇ ನನಗೆ ಸಹೋದರ, ಸಹೋದರಿ, ತಾಯಿ"
ಮೊದಲನೇಯ ವಾಚನ : 2 ಸಮುವೇಲ 6:12-15, 17-19
22.01.24 - "ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು"
21.01.24 - “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,”
ಮೊದಲನೇ ವಾಚನ: ಯೋನ 3:1-5, 10
ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು. ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣ ಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು. ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ – ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು. ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನ ಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.
22.01.24
20.01.24
19.01.24 - "ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು."
ಮೊದಲನೇ ವಾಚನ: 1 ಸಮುವೇಲ 24:2-21
18.01.24
ಮೊದಲನೇ ವಾಚನ: 1 ಸಮುವೇಲ 18:6-9; 19:1-7
17.01.24 - "ಸಬ್ಬತ್ ದಿನದಲ್ಲಿ, ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ"
ಮೊದಲನೇ ವಾಚನ: 1 ಸಮುವೇಲ 17:32-33, 37, 40-51
16.01.24 - “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ"
ಮೊದಲನೇ ವಾಚನ: 1 ಸಮುವೇಲ 16:1-13
ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ|
ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ|
ಪ್ರಜೆಗಳಲೋರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕ್ಕೆ||
ನನ್ನ ದಾಸ ದಾವೀದನನು ಗುರುತಿಸಿರುವೆ|
ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ||
ನನ್ನ ಕೈಯ ಆಸರೆ ಅವನಿಗಿದೆ ಸತತ|
ನನ್ನ ಭುಜಬಲವು ಅವನಿಗೆ ಶಕ್ತಿಯುತ||
ನನಗೆ ಪಿತ, ದೈವ, ದುರ್ಗ, ಉದ್ದಾರಕ ನೀನು|
ಇಂತೆಂದೇ ನನ್ನನು ಸಂಬೋಧಿಸುವನವನು||
ಮಾಡುವೆನವನನು ಜೇಷ್ಠ ಪುತ್ರನನ್ನಾಗಿ|
ಭೂರಾಜರುಗಳೊಳು ಅತ್ಯುನ್ನತನನ್ನಾಗಿ||
ಅಲ್ಲೆಲೂಯ, ಅಲ್ಲೆಲೂಯ!
ಹೊಗಲಿರಿ ಆತನ ಮಹತ್ತಾದ ಏಕೈಕ ನಾಮವನು | ಕೋಡು ಮೂಡುಸಿಹನು ಪ್ರಭು ತನ್ನ ಪ್ರಜೆಗೆ ||
ಅಲ್ಲೆಲೂಯ!
ಅದೊಂದು ಸಬ್ಬತ್ ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದು ಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು. ಇದನ್ನು ಕಂಡ ಫರಿಸಾಯರು, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ? ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?” ಎಂದು ಅವರನ್ನು ಕೇಳಿದರು. ಬಳಿಕ ಯೇಸು ಅವರಿಗೆ, “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ. ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.
15.01.24
ಮೊದಲನೇ ವಾಚನ: 1 ಸಮುವೇಲ 15:16-23