ಮೊದಲನೇ ವಾಚನ: 2 ಸಮುವೇಲ 15:13-14, 30; 16:15-13

ಕೀರ್ತನೆ: 3:2-3, 4-5, 6-7
ಶ್ಲೋಕ: ಎದ್ದೇಳು ದೇವಾ, ಕಾಪಾಡ ಬಾ ಪ್ರಭುವೇ
ಶುಭಸಂದೇಶ: ಮಾರ್ಕ 5:1-20
ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು. ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು. ಸಮಾಧಿಯ ಗುಹೆಗಳೇ ಅವನಿಗೆ ವಾಸ ಸ್ಥಳವಾಗಿದ್ದವು. ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡು ತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ. ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು. ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ, “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು. ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು. “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು. ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು. ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು. ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು. ಅವರು ಹಾಗೆಯೆ ಅಪ್ಪಣೆ ಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು.
ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿ ಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವರಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟು ಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರ ಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ, ಎಂದು ಅವರಿಗೆ ವಿವರಿಸು,” ಎಂದರು. ಅಂತೆಯೇ ಅವನು ಹೊರಟು ಹೋಗಿ, ಯೇಸು ತನಗೆ ಮಾಡಿದ ಮಹಾದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯ ಚಕಿತರಾದರು.

No comments:
Post a Comment