ಮೊದಲನೇ ವಾಚನ: ಯೆರೆಮಿಯ 20:10-13

ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವರ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹು ಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿ ನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯ ಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ. ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.
ಕೀರ್ತನೆ: 18:2-3, 3-4, 5-6, 7
ಶ್ಲೋಕ: ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ
ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ
ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ |
ಆತನೇ ನನ್ನ ದೇವ, ನನ್ನಾಶ್ರಯ ದುರ್ಗ |
ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ ||
ಪ್ರಭು ಸ್ತುತ್ಯಾರ್ಹನು |
ಶತ್ರುಗಳಿಂದ ಕಾಪಾಡುವನು,
ನಾನವಗೆ ಮೊರೆಯಿಡಲು ||
ಪ್ರಭು ಸ್ತುತ್ಯಾರ್ಹನು |
ಶತ್ರುಗಳಿಂದ ಕಾಪಾಡುವನು,
ನಾನವಗೆ ಮೊರೆಯಿಡಲು ||
ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು |
ನಡುಕ ಹುಟ್ಟಿಸಿದ್ದವು
ವಿನಾಶಪ್ರವಾಹಗಳು ||
ಆವರಿಸಿಕೊಂಡವು ಪಾತಾಳ ಪಾಶಗಳು|
ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು||
ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ |
ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ |
ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ ||
ಆಗ ಕಂಪಿಸಿತು ಭೂಮಿ ಗಡಗಡನೆ |
ಕದಲಿದವು ಬೆಟ್ಟದ ಬುಡಗಳು
ಮಿಲಮಿಲನೆ |
ಏಕೆನೆ, ಸಿಟ್ಟೇರಿತ್ತು ಆತನಿಗೆ ||
ಶುಭಸಂದೇಶ: ಯೊವಾನ್ನ 10:31-42

ಮನಸ್ಸಿಗೊಂದಿಷ್ಟು : ಇಂದಿನ ಶುಭಸಂದೇಶದದಲ್ಲಿನ ಯೆಹೂದ್ಯರ ತಿರಸ್ಕಾರ ನಿಜಕ್ಕೂ ದೌರ್ಭಾಗ್ಯಕರ . ' ತಾವು ದೇವರ ಪುತ್ರ' ಎಂದು ಯೇಸು ಸಾರಿ ಸಾರಿ ಹೇಳುತ್ತಿದ್ದರೂ ನಂಬದಂಥ ಕಲ್ಲು ಹೃದಯ ಅವರದಾಗಿತ್ತು. ನಮ್ಮ ಹೃದಯಗಳು ಪ್ರಭು ಕ್ರಿಸ್ತರನ್ನು ತಿರಸ್ಕರಿಸದಂತೆ ಎಚ್ಚರವಹಿಸೋಣ
ಪ್ರಶ್ನೆ : ನಮ್ಮ ಹೃದಯ ಯೇಸುವಿಗಾಗಿ ತೆರೆದಿದೆಯೇ?
No comments:
Post a Comment