ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

01.05.24 - ಅವಿಶ್ವಾಸದ ಕಾರಣ ಯೇಸು ಅದ್ಬುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.

ಕಾರ್ಮಿಕರ ಪಾಲಕ ಸಂತ ಜೋಸೆಫರ ಹಬ್ಬ 



ಮೊದಲನೇ ವಾಚನ: ಆದಿಕಾಂಡ 1:26-2:3


ದೇವರು, "ನಮ್ಮಂತೆಯೇ ಇರುವ ಹಾಗೂ ನಮ್ಮನ್ನು ಹೋಲುವ ಮನುಷ್ಯರನ್ನು ಉಂಟುಮಾಡೋಣ. ಅವರು ಸಮೂದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕು ಪ್ರಾಣಿ ಹಾಗೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿ ಕೀಟಗಳ ಮೇಲೆಯೂ ದೊರೆತನ ಮಾಡಲಿ," ಎಂದರು. ಹೀಗೆ ದೇವರು: ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವದಿಸಿ, "ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮೂದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸ ಧಾನ್ಯಗಳನ್ನೂ ಹಣ್ಣು ಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ." ಎಂದು ಹೇಳಿದರು. ಹಾಗೆಯೇ ಆಯಿತು. ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು ಅವೆಲ್ಲವೂ ಬಹಳ ಚೆನ್ನಾಗಿತ್ತು. ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಆ ಏಳನೆಯ ದಿನವು ಪರಿಶುದ್ದವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ, ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.

ಕೀರ್ತನೆ: 90:2, 3-4, 12-13, 14, 16

ಶ್ಲೋಕ: ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ, ಓ ಪ್ರಭೂ

ಶುಭಸಂದೇಶ: ಮತ್ತಾಯ 13:54-58

ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆ ಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, "ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ? ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ? ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?" ಎಂದು ಮಾತನಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು. ಅವರಿಗೆ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು," ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಬುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.

ಮನಸಿಗೊಂದಿಷ್ಟು : ಅದೆಷ್ಟೋ ಬಾರಿ ಸಂದೇಶಗಳು ನಮ್ಮ ಮನಸಿನಾಳದಲ್ಲಿ ಹೊಕ್ಕದಿರಲು ನಮ್ಮದೇ ಆದ ತಡೆಗೋಡೆಗಳು ಅಡ್ಡ ಬರುತ್ತದೆ. ಲೋಕದ ರಕ್ಷಕನೇ ಎದುರಿಗೆ ನಿಂತರೂ ಸ್ವಂತ ಜನರು ಬಡಗಿಗಿಂತ ಮಿಗಿಲಾಗಿ ಯೇಸುವಲ್ಲಿ ಏನನ್ನೂ ಗುರುತಿಸಲಿಲ್ಲ. ದೇವರ ಕಾರ್ಯಗಳು ನಮ್ಮ ಜೀವನದಲ್ಲಿ ನಡೆಯದಿರಲೂ ಎಷ್ಟೋ ಬಾರಿ ನಮ್ಮ ಮನಸಿನಾಳದಲ್ಲಿನ ವಿಶ್ವಾಸದ ಕೊರತೆಯೇ ಕಾರಣವಾಗಬಲ್ಲದು. ಆ ಕೊರತೆ ನೀಗಿಸಿಕೊಳ್ಳೋಣ.

ಪ್ರಶ್ನೆ : ಯೇಸುವನ್ನು ಬರಮಾಡಿಕೊಳ್ಳದಿರಲು ನಮ್ಮೊಳಗಿನ ತಡೆಗೋಡೆಗಳಾವುವು?

No comments:

Post a Comment