ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

09.04.24 - "ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು,"

 ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:32-37



ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು. ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹು ಸಾಮಥ್ರ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು. ಅವರಲ್ಲಿ ಕೊರೆತೆಯಿದ್ದವರು ಒಬ್ಬರೂ ಇರಲಿಲ್ಲ. ಕಾರಣ - ಹೊಲಗದ್ದೆ, ಮನೆಮಾರು ಇದ್ದವರೆಲ್ಲರೂ ಅವುಗಳನ್ನು ವಿಕ್ರಯಿಸಿ, ಬಂದ ಹಣವನ್ನು ತಂದು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸುತ್ತಿದ್ದರು. ಇವರು ಅದನ್ನು ಪ್ರತಿ ಒಬ್ಬರಿಗೂ ಅವರವರ ಅವಶ್ಯಕತೆಗೆ ತಕ್ಕಂತೆ ಹಂಚುತ್ತಿದ್ದರು. ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು. ಇವನು ತನ್ನ ಜಮೀನನ್ನು ಮಾರಿ ಬಂದ ಹಣವನ್ನು ಪ್ರೇಷಿತರಿಗೆ ಪಾದ ಕಾಣಿಕೆಯಾಗಿ ಒಪ್ಪಿಸಿದನು.

ಕೀರ್ತನೆ: 93:1-2, 5
ಶ್ಲೋಕ: ವಹಿಸಿಹನು ಪ್ರಭು ರಾಜ್ಯಾಧಿಕಾರವನು ಧರಿಸಿಹನು ಘನತೆಯ ವಸ್ತ್ರಲಾಂಛನವನು

ವಹಿಸಿಹನು ಪ್ರಭುರಾಜ್ಯಾಧಿಕಾರವನು I
ಧರಿಸಿಹನು ಘನತೆಯ ವಸ್ತ್ರ ಲಾಂಛನವನು I
ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I
ಸ್ಥಿರಪಡಿಸಿಹನು ಕದಲದಂತೆ ಜಗವನು II
ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I
ನೀನಿರುವೆ ಪ್ರಭು ಅನಾದಿಯಿಂದ II

ನಿನ್ನ ಆಜ್ಞೆಗಳು ಪ್ರಭುಸುಸ್ಥಿರ I
ನಿನ್ನ ಆಲಯಕೆ ಪವಿತ್ರತೆ ಅರ್ಹ I
ಯುಗಯುಗಾಂತರಕೂ ಅದು ಅರ್ಹ II

ಶುಭಸಂದೇಶ: ಯೊವಾನ್ನ 3:7-15

ಯೇಸುಸ್ವಾಮಿ ನಿಕೊದೇಮನಿಗೆ, "ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ. ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು. ಅದಕ್ಕೆ ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು. ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೆ? ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ; ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಸ್ವಾಸಿಸುವುದು ಉಂಟೆ? ಸ್ವರ್ಗಲೋಕದಿಂದಲೇ ಇಳಿದು ಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. “ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು," ಎಂದರು.

No comments:

Post a Comment