ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

25.08.24 - "ಪಿತನು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು"

ಪ್ರವಾದಿ ಯೆಹೋಶುವನ ಗ್ರಂಥದಿಂದ ವಾಚನ 24: 1-2, 15-18

ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರುನಾಯಕರು,      ನ್ಯಾಯಾಧಿಪತಿಗಳುಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು. ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ“ನಿಮ್ಮ ದೇವರಾದ ಸರ್ವೇಶ್ವರನಿಗೆ ಸೇವೆ ಸಲ್ಲಿಸಿರಿನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆ ಗಳಿಗೋಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ,” ಎಂದನು. ಅದಕ್ಕೆ ಜನರು“ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ. ನಾವು ದಾಸತ್ವದಲ್ಲಿದ್ದ ಈಜಿಪ್ತಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತ ಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿ ಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ. ಈ ನಾಡಿನ ನಿವಾಸಿಗಳಾಗಿದ್ದ ಅಮೋರಿ ಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆ ಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.

ಎರಡನೆಯ ವಾಚನ
ಸಂತ ಪೌಲ ಎಫೆಸಿಯರಿಗೆ ಬರೆದ ಪತ್ರದಿಂದ ವಾಚನ     5: 21-32

ಕ್ರಿಸ್ತ ಯೇಸುವಿನಲ್ಲಿ ಭಯಭಕ್ತಿ ಯುಳ್ಳವರಾಗಿದ್ದು ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ. ಮಹಿಳೆಯರೇ,  ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಕ್ರಿಸ್ತ ಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತ ಯೇಸುವೇ ಧರ್ಮಸಭೆಯ ಉದ್ಧಾರಕ. ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯು ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು. ಪುರುಷರೇಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತ ಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು. ಧರ್ಮಸಭೆ ಕಳಂಕ ಕಲ್ಮಷವಾಗಲಿಸುಕ್ಕು ಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿ ಕೊಳ್ಳುವಂತೆ ಹೀಗೆ ಮಾಡಿದರು. ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ. ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತ ಯೇಸು ಹೀಗೆಯೇ ಕಾಪಾಡುತ್ತಾರೆ. ನಾವು ಆ ಸಭೆಯ ಅಂಗಗಳು. ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದುಗೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗುವರು,” ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆಎಂಬುದೇ ನನ್ನ ಅಭಿಪ್ರಾಯ.
ಪ್ರಭುವಿನ ವಾಕ್ಯ

ಘೋಷಣೆ
ಅಲ್ಲೆಲೂಯಅಲ್ಲೆಲೂಯ! ನಮ್ಮ ಪ್ರಭು ಯೇಸುಕ್ರಿಸ್ತರ ದೇವರು ನಿಮ್ಮ ಮನೋ ನೇತ್ರಗಳನ್ನು ತೆರೆಯಲಿಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದೆಂದು ನೀವು ಅರಿತುಕೊಳ್ಳಬೇಕುಅಲ್ಲೆಲೂಯ!

ಶುಭಸಂದೇಶ:
ಸಂತ ಯೊವಾನ್ನರು ಬರೆದ ಶುಭಸಂದೇಶದಿಂದ ವಾಚನ       6: 60-69

ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು“ಇವು ಕಟುವಾದ ಮಾತುಗಳುಇವನ್ನು ಯಾರು ತಾನೆ ಕೇಳಿಯಾರು?” ಎಂದು ಮಾತನಾಡಿ ಕೊಂಡರು. ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು“ಇಷ್ಟು ಮಾತ್ರಕ್ಕೆ ನೀವು ಕಂಗೆಡಬೇಕೇಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನೆನ್ನುವಿರಿಸಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ. ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರುತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರುಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.) “ಪಿತನು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು. ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ. ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ“ನೀವು ಕೂಡ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದರು. ಅದಕ್ಕೆ ಸಿಮೋನ ಪೇತ್ರನು“ಪ್ರಭುವೇನಾವು ಹೋಗುವುದಾದರೂ ಯಾರ ಬಳಿಗೆನಿತ್ಯ ಜೀವವನ್ನೀಯುವ ನುಡಿಯಿರುವುದು ತಮ್ಮಲ್ಲೇ. ತಾವೇ ದೇವರಿಂದ ಬಂದ ಪರಮ ಪೂಜ್ಯರು. ಹೌದುಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.
ಪ್ರಭುಕ್ರಿಸ್ತರ ಶುಭಸಂದೇಶ

No comments:

Post a Comment