ಮೊದಲನೇ ವಾಚನ: ಫಿಲಿಪ್ಪಿಯರಿಗೆ 2:12-18
06.11.24 - "ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ."
05.11.24 - “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!”
ಮೊದಲನೇ ವಾಚನ: ಫಿಲಿಪ್ಪಿಯರಿಗೆ 2:5-11
04.11.24 - ಸತ್ಪುರುಷರು ಪುನರುತ್ದಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು
ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನತೆ, ದೀನದಯಾಳತೆ ಇರುವುದಾದರೆ ಐಕ್ಯಮತ್ಯದಿಂದ ಬಾಳಿರಿ. ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು. ಸ್ವಾರ್ಥ ಸಾಧನೆಗಾಗಲಿ, ಡಂಬಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ. ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.
03.11.24 - "ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು"
ಮೊದಲನೆಯ ವಾಚನ: ಧರ್ಮೋಪದೇಶಕಾಂಡ 6:2-6
ಮೋಶೆಯು ಜನರಿಗೆ ಇಂತೆಂದನು: ನೀವು ಹಾಗು ನಿಮ್ಮ ಪುತ್ರಪೌತ್ರೌದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು, ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು, ಆಗ ನೀವು ದಿರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ. ಆದುದರಿಂದ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂ ಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ ಅಭಿವೃದ್ಧಿಯಾಗುವಂತೆ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ. ಇಸ್ರಯೇಲ್ ಜನಾಂಗವೇ ಕೇಳು: ನಿನ್ನ ದೇವರಾದ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು. ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು. ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.
ಕೀರ್ತನೆ 138:1-3, 6, 8
ಶ್ಲೋಕ: ಪ್ರಭೂ, ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು.
ಹೃದಯಪೂರ್ವಕ ವಂದನೆ ಪ್ರಭೂ ನಿನಗೆ|
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ|
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ||
ನಿನ್ನ ಪ್ರೀತಿ ಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ|
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು|
ಅಧಿಕಮಾಡಿದೆ ನೀನು ನನಾತ್ಮಶಕ್ತಿಯನು||
ಉನ್ನತವಾದರೂ ಗಮನಿಸುವನು ಪ್ರಭು ದೀನರನು|
ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು||
ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು|
ಮರೆತುಬಿಡಬೇಡ ನಿನ್ನಯ ಕೈಕೃತಿಯನು||
ಎರಡನೆಯ ವಾಚನ: ಹಿಬ್ರಿಯರಿಗೆ 7:23-28
ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು. ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು ಶಾಶ್ವತವಾಗಿ ಉಳಿಯುವಂಥಾದ್ದು. ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು. ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ದರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು. ಇವರು ಮಿಕ್ಕ ಪ್ರಧಾನ ಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶ್ವಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು. ಧರ್ಮಶಾಸ್ತ್ರ ನೇಮಿಸಿರುವ ಪ್ರಧಾನ ಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನ ಯಾಜಕರನ್ನಾಗಿ ನೇಮಿಸುತ್ತದೆ.
ಶುಭಸಂದೇಶ: ಮಾರ್ಕ 12:28-34
ಆ ಕಾಲದಲ್ಲಿ ಪುನರುತ್ಥಾನದ ಬಗ್ಗೆ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿಯೊಬ್ಬನು, ಯೇಸು ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು," ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು? " ಎಂದು ಕೇಳಿದನು. ಯೇಸು ಅವನಿಗೆ, "ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ, ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದಿಲ್ಲ, " ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, " ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ, ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದವು, " ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, "ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ, " ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ
02.11.24 - "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು"
ಮೊದಲನೇ ವಾಚನ: ಜ್ಞಾನಗ್ರಂಥ 3:1-9
"ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಆರಸನು ತನ್ನ ಬಲಗಡೆಯಿರುವ ಜನರಿಗೆ, "ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ, ಲೋಕಾದಿಯಿಂದ ನಿಮಗಾಗಿ ಸಿದ್ಧ ಮಾಡಿದ ಸಾಮ್ರಾಜ್ಯವನ್ನು ಸ್ವಾಸ್ಥ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆ ಇಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ," ಎಂದು ಹೇಳುವನು. ಅದಕ್ಕೆ ಆ ಸಜ್ಜನರು "ಸ್ವಾಮಿಾ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?" ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, "ಈ ನನ್ನ ಸಹೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ," ಎನ್ನುವನು. "ಆನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, "ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ," ಎಂದು ಹೇಳುವನು. ಅದಕ್ಕೆ ಅವರು ಕೂಡ, "ಸ್ವಾಮಿಾ, ತಾವು ಯಾವಾಗ ಹಸಿದಿದ್ದೀರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಬಂಧಿಯಾಗಿದ್ದಿರಿ, ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, "ಇವರಲ್ಲ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆ ಹೋದಾಗ ಅದನ್ನು ನನಗೇ ಮಾಡಲಿಲ್ಲ," ಎನ್ನುವನು. "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು," ಎಂದು ಹೇಳಿದರು ಸ್ವಾಮಿ.
01.11.24
ಮೊದಲನೇ ವಾಚನ: ಪ್ರಕಟಣಾ ಗ್ರಂಥ 7:2-4, 9-14
ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ. ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.
ಜಗವು ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||
ಪಭುವಿನ ಶಿಖರವನು ಏರಬಲ್ಲವನಾರು|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು||
ಅಂಥವನಿರಬೇಕು ಶುದ್ದ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||
ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಪಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||
31.10.24
30.10.24
29.10.24 - “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ?"
ಮೊದಲನೇ ವಾಚನ: ಎಫೆಸಿಯರಿಗೆ 5:21-33
ಕೀರ್ತನೆ: 128:1-2, 3, 4-5
ಶ್ಲೋಕ: ಹೊಂದುವನು ಆಶೀರ್ವಾದವನು, ಪ್ರಭುವಿನಲಿ ಭಯಭಕ್ತಿಯುಳ್ಳವನು.
ಶುಭಸಂದೇಶ: ಲೂಕ 13:18-21
ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು. ಪುನಃ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ? ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.
28.10.24 - "ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು"
ಮೊದಲನೇ ವಾಚನ: ಎಫೆಸಿಯರಿಗೆ 2:19-22
ಸಹೋದರರೇ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ. ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು. ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.
ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ.
ಶುಭಸಂದೇಶ: ಲೂಕ 6:12-16
ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು. ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.
27.10.24 - "ದಾವೀದ ಕುಲಪುತ್ರರೇ, ನನಗೆ ದಯೆತೋರಿ"
26.10.24 - "ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದು ಹಾಕೋಣ"
ಮೊದಲನೇ ವಾಚನ: ಎಫೆಸಿಯರಿಗೆ 4:7-16
ಸಹೋದರರೇ, ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ. ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.” ‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ. ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ. ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು. ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು. ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ. ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ. ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ. ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.
ಕೀರ್ತನೆ: 122:1-2, 3-4, 4-5
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದು ಜಾನರೆನ್ನ ಕರೆದಾಗ ಆಯಿತೆನಗೆ ಆನಂದ.
ಶುಭಸಂದೇಶ: ಲೂಕ 13:1-9
ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು. ಅದಕ್ಕೆ ಯೇಸು, “ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ? ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ. ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ? ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು. ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ. ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ. ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ. ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದು ಹಾಕೋಣ,’ ಎಂದನು.”
25.10.22 - “ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?"
ಮೊದಲನೇ ವಾಚನ: ಎಫೆಸಿಯರಿಗೆ 4:1-6
ಕೀರ್ತನೆ: 24:1-2, 3-4, 5-6
ಶ್ಲೋಕ: ಇಂಥವರೇ ದೇವರ ದರ್ಶನಾಭ್ಯರ್ಥಿಗಳು
ಶುಭಸಂದೇಶ: ಲೂಕ 12:54-59
24.10.24 - “ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.
ಮೊದಲನೇ ವಾಚನ: ಎಫೆಸಿಯರಿಗೆ 3:14-21
ಸಹೋದರರೇ, ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ: ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ. ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ; ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ. ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ. ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ. ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್!
ಕೀರ್ತನೆ: 33:1-2, 4-5, 11-12, 18-19
ಶ್ಲೋಕ: ಪ್ರಭು ಅಚಲ ಪ್ರೀತಿಯಿಂದ ಜಗವನು ತುಂಬಿಹನು
ಶುಭಸಂದೇಶ: ಲೂಕ 12:49-53
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ. ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು. ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.
23.10.24 - "ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು"
ಮೊದಲನೇ ವಾಚನ: ಎಫೆಸಿಯರಿಗೆ 3:2-12
ಸಹೋದರರೇ, ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ. ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ. ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ. ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ. ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ. ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು. ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು. ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು. ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು. ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.
ಯೆಶಾಯ: 12:2-3, 4, 5-6
ಶ್ಲೋಕ: ಉದ್ಧರಿಸುವ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.
ಶುಭಸಂದೇಶ: ಲೂಕ 12:39-48
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ. ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು. ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು. ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. “ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು. “ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ. ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು."
22.10.24 - “ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ"
ಮೊದಲನೇ ವಾಚನ: ಎಫೆಸಿಯರಿಗೆ 2:12-22
ಕೀರ್ತನೆ: 85:9-10, 11-12, 13-14
ಶ್ಲೋಕ: ತೋರಿಸೇಮಗೆ ಪ್ರಭೂ, ಕರುಣೆಯನು.
ಶುಭಸಂದೇಶ: ಲೂಕ 12:35-38
21.10.24 - "ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?"
ಮೊದಲನೇ ವಾಚನ: ಎಫೆಸಿಯರಿಗೆ 2:1-10
ಕೀರ್ತನೆ: 100:2, 3, 4, 5
ಶ್ಲೋಕ: ಪ್ರಭುವಿನ ಜನ, ಆತನೇ ಮೇಯಿಸುವ ಕುರಿಗಳು ನಾವು.
ಶುಭಸಂದೇಶ: ಲೂಕ 12:13-21
20.10.24 - "ನರಪುತ್ರನು ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೋಡುವುದಕ್ಕೆ ಬಂದಿದ್ದಾನೆ."
19.10.24 - "ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,”
ಮೊದಲನೇ ವಾಚನ: ಎಫೆಸಿಯರಿಗೆ 1:15-23
ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ. ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.
ಕೀರ್ತನೆ: 8:2-3, 4-5, 6-7
ಶ್ಲೋಕ: ಒಡೆಯನಾಗಿಸಿದೆ ಪ್ರಭೂ ಮಾನವನನು ನಿನ್ನಯ ಕರಕೃತಿಗಳಿಗೆ
ಶುಭಸಂದೇಶ: ಲೂಕ 12:8-12
“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ. “ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು. “ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.
18.10.24
ಆ ಕಾಲದಲ್ಲಿ ಯೇಸು ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, " ಬೆಳೆಯೇನೋ ಹೇರಳವಾಗಿದೆ, ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ' ಮನೆಗೆ ಶಾಂತಿ, ' ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ' ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ, ' ಎಂದು ತಿಳಿಸಿರಿ.
17.10.24 - "ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ"
ಮೊದಲನೇ ವಾಚನ: ಎಫೆಸಿಯರಿಗೆ 1:3-10
ಕೀರ್ತನೆ: 98:1, 2-3, 3-4, 5-6
ಶ್ಲೋಕ: ಪ್ರಕಟಿಸಿಹನು ಪ್ರಭು ತನ್ನ ಮುಕ್ತಿ ವಿಧಾನವನು
ಶುಭಸಂದೇಶ: ಲೂಕ 11:47-54