ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

22.10.24 - “ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ"

 ಮೊದಲನೇ ವಾಚನ: ಎಫೆಸಿಯರಿಗೆ 2:12-22 


ಸಹೋದರರೇ, ಹಿಂದೊಮ್ಮೆ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ. ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.  ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.  ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ. ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ. ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು. ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು. ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ. ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು. ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ. 

 ಕೀರ್ತನೆ: 85:9-10, 11-12, 13-14 

ಶ್ಲೋಕ: ತೋರಿಸೇಮಗೆ ಪ್ರಭೂ, ಕರುಣೆಯನು.  

ಶುಭಸಂದೇಶ: ಲೂಕ 12:35-38 


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.  ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.  ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. “ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು. 

 

No comments:

Post a Comment