28.10.24 - "ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು"

 ಮೊದಲನೇ ವಾಚನ: ಎಫೆಸಿಯರಿಗೆ 2:19-22 


ಸಹೋದರರೇ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.  ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.  ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.  ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ. 

ಕೀರ್ತನೆ: 19:2-3, 4-5 

ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ. 

ಶುಭಸಂದೇಶ: ಲೂಕ 6:12-16 


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.  ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.  ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,  ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,  ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. 

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...