ಮೊದಲನೇ ವಾಚನ: ತೀತನಿಗೆ: 1: 1-9
ಕ್ರಿಸ್ತ ವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸು ಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ. ತಂದೆಯಾದ ದೇವರೂ ನಮ್ಮ ಉದ್ದಾರಕರಾದ ಯೇಸು ಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ದಿಗೊಳಿಸಿ ಅಮರ ಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಭೋಧಿಸಿಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನ ಮಾಡಿದ್ದರು. ಸೂಕ್ತ ಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸುವ ಈ ಸಂದೇಶವನ್ನು ಜಗದ್ರಕ್ಷರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ. ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ. ನಾನು ಕೊಟ್ಟ ಸಲಹೆಗಳನ್ನು ಜ್ನಾ ಜ್ಞಾಪಿಸಿಕೋ; ಸಭಾ ಹಿರಿಯನು ನಿಂದಾರಹಿತನು ಏಕ ಪತ್ನಿ ವೃತಸ್ಥನು ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು. ಏಕೆಂದರೆ ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿ ಆಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು. ಅತಿಥಿ ಸತ್ಕಾರ ಮಾಡುವವನು ಒಳ್ಳೆಯದನ್ನು ಪ್ರೀತಿಸುವವನು ಆಗಿರಬೇಕು. ಇಂಥವನು ಸ್ವಸ್ಥ ಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು. ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತ ತತ್ವಗಳಿಗೆ ಅನುಗುಣವಾದ ಸಿದ್ದಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕು ಅದಕ್ಕೆ ವ್ಯತಿರಿಕ್ತವಾಗಿ ನೆಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕು ಆತನು ಸಮರ್ಥನಾಗುತ್ತಾನೆ.
ಕೀರ್ತನೆ: 24: 1ಬಿ-2, 3-4ಎಬಿ, 5-6
ಶ್ಲೋಕ: ಇಂಥವರೇ ದೇವರ ದರ್ಶಾನಾಭ್ಯರ್ಥಿಗಳು.
ಶುಭಸಂದೇಶ: ಲೂಕ: 17: 1-6
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, "ಪಾಪಪ್ರಚೋದನೆಗಳು ಬಂದೇಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ! ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುಚುದಕ್ಕಿಂತ, ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು. ನೀವಾದರೋ ಎಚ್ಚರಿಕೆಯಿಂದಿರಿ!" "ನಿನ್ನ ಸಹೋದರನು ತಪ್ಪು ಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು. ಅವನು ದಿನಕ್ಕೆ ಏಳು ಸಾರಿ ನಿನಗೆ ವಿರುದ್ದ ತಪ್ಪು ಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ’ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು," ಎಂದರು. "ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ" ಎಂದು ಪ್ರೇಷಿತರು ಕೇಳಿಕೊಂಡರು. ಆಗ ಯೇಸುಸ್ವಾಮಿ, "ಸಾಸಿವೆ ಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ’ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ.’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು," ಎಂದರು.
No comments:
Post a Comment