ಮೊದಲನೇ ವಾಚನ: ಪ್ರಕಟಣಾ ಗ್ರಂಥ 10:8-11
ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು. ನಾನು ಆ ದೇವದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆ. ಅವನು “ತೆಗೆದುಕೋ, ಇದನ್ನು ತಿನ್ನು. ಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನು. ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು. ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.
ಕೀರ್ತನೆ: 119:14, 24, 72, 103, 111, 131
ಶ್ಲೋಕ: ನಿನ್ನ ನುಡಿ ಎನಿತೋ ರುಚಿ ನನ್ನ ನಾಲಿಗೆಗೆ
ಶುಭಸಂದೇಶ: ಲೂಕ 19:45-48
No comments:
Post a Comment