ಮೊದಲನೇ ವಾಚನ: 1 ಯೊವಾನ್ನ 2:18-21
31.12.24 - "ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು"
30.12.24 - "ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು"
ಮೊದಲನೇ ವಾಚನ: 1 ಯೊವಾನ್ನ 2:12-17
ಅಶೇರನ ವಂಶಕ್ಕೆ ಸೇರಿದ ಘನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿ ಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು. ಅವಳಿಗೆ ಸುಮಾರು ಎಂಭತ್ತನಾಲ್ಕು ವರ್ಷ ವಯಸ್ಸು. ಮಹಾ ದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು. ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರುನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು. ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನಸಂಪೂರ್ಣರೂ ಆದರು. ಇದಲ್ಲದೆ ದೈವಾನುಗ್ರಹ ಅವರ ಮೇಲಿತ್ತು.
29.12.24 - "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ"
ಶ್ಲೋಕ: ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು ಧನ್ಯನು,
ಆತನ ಮಾರ್ಗಗಳಲೇ ನಡೆಯುವವನು
ಧನ್ಯನು, ಪ್ರಭುವಿನಲ್ಲಿ ಭಯಭಕ್ತಿಯುಳ್ಳವನು
ಧನ್ಯನು, ಆತನ ಮಾರ್ಗದಲ್ಲೇ ನಡೆಯುವವನು
ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು
ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು
ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ
ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲ್ಲಿ ಓಲಿವ್ ಸಸಿಗಳಂತೆ
ಹೊಂದುವನು ಅಂತಹ ಆಶೀರ್ವಾದವನ್ನು
ಪ್ರಭುವಿನಲ್ಲಿ ಭಯ ಭಕ್ತಿಯುಳ್ಳವನು
ಸಿಯೋನಿನಲ್ಲಿರುವ ಪ್ರಭು ನಿನ್ನನ್ನು ಆಶೀರ್ವದಿಸಲಿ
ಜೆರುಸಲೇಮಿನ ಏಳ್ಗೆಯನ್ನು ಕಾಣು ಇಡೀ ಜೀವಮಾನದಲ್ಲಿ
ಜ್ಯೋತಿಷಿಗಳು ಹೊರಟು ಹೋದ ಮೇಲೆ ದೇವ ದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪನಃ ಹೇಳುವ ತನಕ ಅಲ್ಲೇ ಇರು." ಎಂದನು. ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು. ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಹೆರೋದನು ಸತ್ತುಹೋದನಂತರ ಈಜಿಪ್ಟಿನಲ್ಲಿದ್ದ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು," ಎಂದು ತಿಳಿಸಿದನು. ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು. ಆದರೆ ಹೆರೋದನ ಮಗ ಆರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು. ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, "ಆತನನ್ನು ನಜರೇತಿನವನೆಂದು ಕರೆಯುವರು" ಎಂಬ ಪ್ರವಚನ ನೆರವೇರಿತು.
28.12.24 - "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ"
ಮೊದಲನೇ ವಾಚನ: ಯೊವಾನ್ನ 1:5 - 2:2
ಶ್ಲೋಕ: ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು ಹರಿದುಹೋಯಿತಿದೋ ಬಲೆಯು, ಹಾರಿಹೋದೆವು ನಾವು
ಜ್ಯೋತಿಷಿಗಳು ಹೊರಟು ಹೋದಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು," ಎಂದನು. ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು. ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, "ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದನು" ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು. ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದು ಹಾಕಿಸಿದನು. "ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು," ಪ್ರವಾದಿ ಯೆರೆಮಿಾಯನ ಈ ಪ್ರವಚನ ಅಂದು ಸತ್ಯವಾಯಿತು.
27.12.24 - "ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ"
ನಿಮಗೆ ನಾನು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ. ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ, ಆ ಬಗ್ಗೆ ಸಾಕ್ಷಿ ಹೇಳುತ್ತೇವೆ ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯ ಜೀವವನ್ನು ನಿಮಗೆ ಸಾರುತ್ತೇವೆ. ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ನೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.
ಶ್ಲೋಕ: ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ.
ಇದೆ ಪ್ರಭುವಿನಲಿ ಕೈಯಲಿ ರಾಜ್ಯಾಧಿಕಾರ|
ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ|
ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ||
ಇವೆ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು|
ನ್ಯಾಯ ನೀತಿ ಆತನ ಗದ್ದುಗೆಯಸ್ತಿವಾರಗಳು||
ಸಾರ್ವಭೌಮನಾದ ಪ್ರಭುವಿನ ಮುಂದೆ|
ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ||
ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು|
ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು||
ಉದಯವಾಗುವುದು ಜ್ಯೋತಿ ಸಜ್ಜನರಿಗೆ|
ಆನಂದವಿದೆ ಯಥಾರ್ಥ ಹೃದಯಿಗಳಿಗೆ||
ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ|
ಆತನ ಶ್ರೀನಾಮವನು ಕೊಂಡಾಡಿರಿ||
ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ!
ಓ ದೇವಾ ನಿಮ್ಮನ್ನು ಸ್ತುತಿಸುತ್ತೇವೆ. ನೀವೇ ನಮ್ಮ ಪ್ರಭುವೆಂದು ನಿಮ್ಮನ್ನು ಅಂಗೀಕರಿಸುತ್ತೇವೆ. ಪ್ರೇಷಿತ ಮಹಿಮಾ ವೃಂದವು ನಿಮ್ಮನ್ನು ಸ್ತುತಿಸುತ್ತದೆ, ಓ ಪ್ರಭೂ.
ಅಲ್ಲೆಲೂಯ!
26.12.24 - "ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು."
ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಬುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು. ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು "ಬಿಡುಗಡೆ ಹೊಂದಿದವರು" ಎಂಬುದರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯದ ಯೆಹೂದ್ಯರೂ ಸೇರಿ ಸ್ತೇಪನನೊಂದಿಗೆ ತರ್ಕ ಮಾಡತೊಡಗಿದರು. ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ. ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು. ಆದರೆ ಸ್ತೇಪನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು, "ಇಗೋ ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ," ಎಂದನು. ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು. ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು. ಅವರು ತನ್ನ ಮೇಲೆ ಕಲ್ಲು ಬೀರುತ್ತಿದ್ದಾಗ ಸ್ತೇಫನನು, "ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕಸಿ," ಎಂದು ಪ್ರಾರ್ಥಿಸಿದನು.
ಶ್ಲೋಕ: ನನಗಾಧಾರ ನೀನಲ್ಲವೇ? ನನ್ನಾತ್ಮವನು ನಿನಗೊಪ್ಪಿಸಿರುವೆ.
ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯ ಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. ಆಗ ಮಾತನಾಡುವವರು ನೀವಲ್ಲ. ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿ ಬಿದ್ದು ಅವರನ್ನು ಕೊಲ್ಲಿಸುವರು. ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.
25.12.24 - "ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು"
ಮೊದಲನೇ ವಾಚನ: ಯೆಶಾಯ 52:7-10
ಶ್ಲೋಕ: ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ ನಮ್ಮ ದೇವ ಸಾಧಿಸಿದ ಜಯಗಳಿಕೆ
1. ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು
ಎಸಗಿಹನಾತನು ಪವಾಡ ಕಾರ್ಯಗಳನು
ಗಳಿಸಿತಾತನ ಕೈ ಪೂತಭುಜ ಗೆಲುವನು
2. ಪ್ರಕ್ಟಿಸಿಹನಾ ಪ್ರಭು ತನ್ನ ಮುಕ್ತಿ ವಿಧಾನವನು
ರಾಷ್ಟ್ರಗಳಿಗೆ ತೋರಿಸಿಗನು ಜೀವೋದ್ದಾರಕಾ ಶಕ್ತಿಯನು
ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ
ನಮ್ಮ ದೇವ ಸಾಧಿಸಿದ ಜಯಗಳಿಕೆ
3. ಸ್ಮರಿಸಿಕೋಂಡನಾ ಪ್ರಭು ತನ್ನ ಪ್ರೀತಿಯನು
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು
ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ
4. ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ
ಭಜಿಸಿರಿ ಆತನನು ವಾದ್ಯಮೇಳದೊಂದಿಗೆ
ಊದಿರಿ ಕೊಂಬನು, ತುತೂರಿಯನು
ಉದ್ಘೋಷಿಸಿರಿ ಪ್ರಭು ರಾಜನನು
ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು. ಆದರೆ ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನು ಉಂಟುಮಾಡಿದ್ದು ಇವರ ಮುಖಾಂತರವೇ, ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ, ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ. ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರು ವಾಸಿಯಾದಾತ. ಎಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - "ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ," ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, "ನಾನಾತನಿಗೆ ಪಿತನು, ಆತನೆನಗೆ ಪುತ್ರನು, " ಎಂದಾಗಲಿ ಹೇಳಿದ್ದುಂಟೇ? ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ; "ದೇವದೂತರೆಲ್ಲರೂ ಆತನನ್ನು ಆರಾಧಿಸಲಿ," ಎಂದಿದ್ದಾರೆ.
ಜಗತ್ತು ಉಂಟಾಗುವ ಮೊದಲೇ "ದಿವ್ಯವಾಣಿ" ಎಂಬುವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು. ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು, ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ, ಮಾನವಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು, ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು. ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮಿಾಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, "ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು" ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು. ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸುಕ್ತಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.
24.12.24 - "ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,"
ಮೊದಲನೇ ವಾಚನ: 2 ಸಮುವೇಲ 7:1-5, 8-12, 14, 16
ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು
ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು: ಸ್ತುತಿ ಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ. ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ. ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ನಮಗೊಬ್ಬ ಶಕ್ತಿಯುತ ಮುಕ್ತಿದಾತನನು. ಪುರಾತನ ಕಾಲದಿಂದಲೆ. ಪೂಜ್ಯ ಪ್ರವಾದಿಗಳ ಬಾಯಿಂದಲೆ ಅರುಹಿಸಿರುವನು ಇಂತೆಂದು ನಮಗೆ; "ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ" ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನ್ನು, ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು. ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ ನಮಗಿತ್ತಿರುವರು. ಶತ್ರುಗಳಿಂದ ರಕ್ಷಿಸುವನೆಂಬ ಅಭಯ. ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ, ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನಿತರಾಗಿ, ಸದ್ಬಕ್ತರಾಗಿ. ಸುಕುಮಾರಾ, ನೀನೆನಿಸಿಕೊಳ್ಳುವೆ "ಪರಾತ್ಪರನ ಪ್ರವಾದಿ", ಸರ್ವೇಶ್ವರನ ಮಾರ್ಗವನ್ನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ ಪಾಪಕ್ಷಮೆಯನ್ನು ಸಾರುವೆ ಆತನ ಪ್ರಜೆಗೆ. ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ. ಕೃಪಾಸಾಗರ, ದಯಾಮಯ, ನಮ್ಮ ದೇವನು, ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು, ನಮ್ಮ ಕಾಲುಗಳನ್ನೂರಿಸಿ ನಡೆಸಲು ಶಾಂತಿಪಥದೊಳು.
23.12.24 - ಈ ಮಗು ಮುಂದೆ ಎಂಥವನಾಗುವನೋ!
ಶ್ಲೋಕ: ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ | ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು ||
ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು||
ಸನ್ಮಾರ್ಗದಲ್ಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ|
ಕಲಿಸೆನಗೆ ನಿನಗಾಗಿ ಕಾದಿರುವೆ ಸತತ||
ಶ್ಲೋಕ
ದಾರಿತಪ್ಪಿದವರಿಗೆ ಬೋಧಕನು ಪ್ರಭು||
ದೀನರನು ನಡೆಸುವನು ತನ್ನ ವಿಧಿಗನುಸಾರ|
ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ||
ಶ್ಲೋಕ
ಆತನ ವಿಧಿನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ||
ಪ್ರಭುವಿನ ಮೈತ್ರಿ, ಭಯಭಕ್ತಿಯುಳ್ಳವರಿಗೆ|
ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ||
ಶ್ಲೋಕ
ಅಲ್ಲೆಲೂಯ, ಅಲ್ಲೆಲೂಯ!
ಓ ಜನಾಂಗಗಳ ಅರಸರೇ, ಮತ್ತು ಧರ್ಮಸಭೆಯ ಮೂಲೆಗಲ್ಲೇ, ಬನ್ನಿ | ಮಣ್ಣಿನಿಂದ ಉಂಟುಮಾಡಿದ ಈ ಮನುಷ್ಯರನ್ನು ರಕ್ಷಿಸಲು ಬನ್ನಿ ||
ಅಲ್ಲೆಲೂಯ!
ಪ್ರಭುಕ್ರಿಸ್ತರ ಶುಭಸಂದೇಶ
20.12.24 - “ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ,”
ಮೊದಲನೆಯ ವಾಚನ : ಪ್ರವಾದಿ ಯೆಶಾಯನ ಗ್ರಂಥದಿಂದ ಇಂದಿನ ವಾಚನ 7:10-14
ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ: "ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ, ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು "ಎಂದರು. ಅದಕ್ಕೆ ಆಹಾಜನು "ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ. ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ "ಎಂದನು. ಆಗ ಯೆಶಾಯನು:
"ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ? ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. 'ಇಮ್ಮಾನುವೇಲ್' ಎಂದು ಆತನಿಗೆ ಹೆಸರಿಡುವಳು, "ಎಂದರು.
- ಪ್ರಭುವಿನ ವಾಕ್ಯ
ಕೀರ್ತನೆ: 24: 1-4,5-6
ಶ್ಲೋಕ: ಆಗಮಿಸುತಿಹನಿದೋ ಮಹಿಮಾವಂತ ರಾಜಾದಿರಾಜನು ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು,,
1. ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿನಡುವೆ ಅದನು ಸ್ಥಿರಗೊಳಿಸಿದವನಾತನೇ||
ಶ್ಲೋಕ
2. ಪ್ರಭುವಿನ ಶಿಖರವನ್ನು ಏರಬಲ್ಲವನಾರು?|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು||
ಅಂಥವನಿರಬೇಕು ಶುದ್ದ ಹಸ್ತನು, ಸುಮನಸ್ಕನು|
ಅನಾಚಾರಕೆ ಅಪ್ರಾಮಾಣಿಕತೆಗೆ, ಒಲಿಯನವನು||
ಶ್ಲೋಕ
ನೀತಿಯ ಸತ್ಫಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||
ಶ್ಲೋಕ
ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!
ನಮ್ಮ ಅರಸರೂ, ನಮಗೆ ನ್ಯಾಯಾಧಿಪತಿಯೂ ಆದ ಓ ಇಮ್ಮಾನುವೇಲ್ | ನಮ್ಮ ಕರ್ತರಾದ ದೇವರೇ, ನಮ್ಮನ್ನು ರಕ್ಷಿಸಲು ಬನ್ನಿ ||
ಅಲ್ಲೆಲೂಯ!
ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1: 26-38
ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ; ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು; ಆತನು ಮಹಾ ಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು. ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು: ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ. ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು. ಆಗ ಮರಿಯಳು, “ಇಗೋ, ನಾನು ದೇವರ ದಾಸಿ, ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.
- ಪ್ರಭುಕ್ರಿಸ್ತರ ಶುಭಸಂದೇಶ
19.12.24
18.12.24 - 'ಇಮ್ಮಾನುವೇಲ್' ಎಂದರೆ 'ದೇವರು ನಿಮ್ಮೊಡನೆ ಇದ್ದಾರೆ'
17.12.24 - ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸು ಕ್ರಿಸ್ತರ ವಂಶಾವಳಿ
16.12.24 - ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,
ಮೊದಲನೇ ವಾಚನ: ಸಂಖ್ಯಾಕಾಂಡ 24:2-7, 15-17
ಬಿಳಾಮನು ಕಣ್ಣೆತ್ತಿ ನೋಡಿದಾಗ ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವಾತ್ಮ ಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: "ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ; ಪುರುಷನ ವಾಣಿ. ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ, ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವೆಕ್ತಿಯ ವಾಣಿ. ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ! ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ; ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರು ಮರಗಳಂತೆ; ನೀರ ಬದಿಯ ದೇವದಾರು ವೃಕ್ಷಗಳಂತೆ. ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ, ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಆಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ; ಅಭಾವೃದ್ಧಿಯಾಗುತ್ತಿದೆ ಅವರ ರಾಜ್ಯ." ನಂತರ ಬಿಳಾಮನು ಪುನಃ ಪದ್ಯರೂಪದಲ್ಲಿ ಹೀಗೆಂದನು: "ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ; ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ; ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಷನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ; ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮಿಾಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ; ರಾಜದಂಡ ಹಿಡಿದವನ ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.
ಶ್ಲೋಕ: ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು
15.12.24
ಮೊದಲನೇ ವಾಚನ: ಜೆಫನ್ಯನು 3:14-18
ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸ ಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ. ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ. ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾ ಭಾವ ಇರಲಿ. ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.
ಆಗ ಜನಸಮೂಹವು, "ಹಾಗಾದರೆ ನಾವೇನು ಮಾಡಬೇಕು?" ಎಂದು ಕೇಳಲು, "ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ," ಎಂದು ಉತ್ತರಕೊಟ್ಟನು. ಆನಂತರ ಸುಂಕದವರು ಸಹ ಸ್ನಾನದೀಕ್ಷೆ ಪಡೆಯಲು ಬಂದು, "ಭೋಧಕರೇ, ನಾವೇನು ಮಾಡಬೇಕು?" ಎಂದು ಕೇಳಿದಾಗ, "ಗೊತ್ತು ಮಾಡಿರುವುದಕ್ಕಿಂತ ಹೆಚ್ಚಾಗಿ ಕಿತ್ತುಕೊಳ್ಳಬೇಡಿ," ಎಂದನು. "ನಾವುಮಾಡಬೇಕಾದುದೇನು?" ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, "ಬಲಾತ್ಕಾರದಿಂದಾಗಲೀ, ಸುಳ್ಳು ಬೆದರಿಕೆಯಿಂದಾಗಲೀ, ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ," ಎಂದು ಆತ ಉತ್ತರವಿತ್ತನು. "ಈ ಯೊವಾನ್ನನೇ ಎಲ್ಲರು ಎದುರು ನೋಡುತ್ತಾ ಇರುವ ಅಭಿಷಿಕ್ತನಾದ ಲೋಕೋದ್ಧಾರಕ ಆಗಿರಬಹುದೇ" ಎಂದು ಜನರು ತಮ್ಮ ಮನಸ್ಸಿನಲ್ಲೇ ಆಲೋಚಿಸುತ್ತಿದ್ದರು. ಅದಕ್ಕೆ ಉತ್ತರವಾಗಿ ಯೊವಾನ್ನನು, "ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು. ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟು ಹಾಕುವರು," ಎಂದು ನುಡಿದನು. ಹೀಗೆ ಯೊವಾನ್ನನು ನಾನಾ ವಿಧಗಳಲ್ಲಿ ಪ್ರಭೋಧಿಸುತ್ತಾ ಜನರಿಗೆ ಶುಭಸಂದೇಶವನ್ನು ಸಾರುತ್ತಾ ಇದ್ದನು.
14.12.24 - "ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,"
13.12.24 - "ದೈವಜ್ಞಾನವೇ ನಿಜವಾದ ಜ್ಞಾನ"
ಮೊದಲನೇ ವಾಚನ ಯೆಶಾಯ 48:17-19
ಶ್ಲೋಕ: ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ, ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ
12.12.24 - ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
ಮೊದಲನೇ ವಾಚನ: ಯೆಶಾಯ 41: 13-20
ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ. ಸರ್ವೇಶ್ವರ ಇಂತೆನ್ನುತ್ತಾರೆ: “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ. ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ. ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ. ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ? ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು. ನೆಡುವೆನು ಅಡವಿಯಲಿ ದೇವದಾರು, ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು. ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’
11.12.24 - "ನನ್ನ ನೊಗ ಹಗುರ, ನನ್ನ ಹೊರೆ ಸುಗಮ,"
ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನಸ್ವಾಮಿ. ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆಗ! ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯ ಬೀಳದಿದೆ’ ಎನ್ನುತ್ತಿರುವಿರಿ ಏಕೆ? ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮಥ್ರ್ಯ ಅಗಮ್ಯ ಪರಿಶೋಧನೆಗೆ. ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ. ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು. ಸರ್ವೇಶ್ವರನನ್ನು ಎದುರು ನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿದರು, ನಡೆದರೂ ಬಳಲರು.
ಕೀರ್ತನೆ: 103: 1-2, 3-4, 8, 10
ಶ್ಲೋಕ: "ನನ್ನ ಅಂತರಂಗವೇ, ಭಜಿಸು ಪ್ರಭುವನು."
ಶುಭಸಂದೇಶ: ಮತ್ತಾಯ 11: 28-30