ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 5:1-10
ಪ್ರಭುವಿನ ವಾಕ್ಯ
ಕೀರ್ತನೆ: 110:1, 2, 3, 4 ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ
“ಆಸೀನನಾಗಿರು ನೀನು ನನ್ನ ಬಲಗಡೆಗೆ I
ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II
ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I
ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II
ಸೇನೆಯನು ನೀ ಅಣಿಗೊಳಿಸುವ ದಿನದೊಳು I
ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I
ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I
ಉದಯಕಾಲದಿಬ್ಬನಿಯಂತೆ ಇಳಿದು ಬರುವರು II
“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I
ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II
ಮಾರ್ಕನು ಬರೆದ ಶುಭಸ೦ದೇಶ 2:18-22
ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತಗಳನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು. ಮದುವಣಿಗನು ಅವರಿಂದ ಅಗಲಬೇಕಾದ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು. “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.
ಪ್ರಭು ಕ್ರಿಸ್ತರ ಶುಭಸ೦ದೇಶ
No comments:
Post a Comment