01.03.25
28.02.25
27.02.25
26.02.25
25.02.25 - "ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ"
ಶ್ಲೋಕ: ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು
ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯದ ಮಾರ್ಗವಾಗಿ ಮುಂದಕ್ಕೆ ಪ್ರಯಾಣ ಮಾಡಿದರು. ಇದು ಯಾರಿಗೂ ತಿಳಿಯಬಾರದು ಎಂಬುದು ಯೇಸುವಿನ ಇಚ್ಛೆಯಾಗಿತ್ತು. ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. "ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ದಾನ ಹೊಂದುವನು." ಎಂದು ಯೇಸು ಅವರಿಗೆ ತಿಳಿಸಿದರು. ಆದರೆ ಯೇಸು ಹೇಳಿದ ಆ ಮಾತುಗಳನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅಂಜಿದರು. ಅನಂತರ ಅವರೆಲ್ಲರೂ ಕಫೆರ್ನವುಮಿಗೆ ಬಂದರು. ಮನೆ ಸೇರಿದಾಗ ಯೇಸುಸ್ವಾಮಿ, "ದಾರಿಯಲ್ಲಿ ಬರುತ್ತಾ ನೀವು ನಿಮ್ಮಲ್ಲೇ ಏನು ಚರ್ಚೆಮಾಡುತ್ತಿದ್ದಿರಿ?" ಎಂದು ಶಿಷ್ಯರನ್ನು ಕೇಳಿದರು. ಅವರು ಮೌನತಾಳಿದರು. ಏಕಂದರೆ, ತಮ್ಮಲ್ಲಿ ಯಾವನು ಅತಿ ಶ್ರೇಷ್ಟನು ಎಂದು ತಮ್ಮ ತಮ್ಮಲ್ಲೇ ವಾದಿಸುತ್ತಾ ಬಂದಿದ್ದರು. ಯೇಸು ಕುಳಿತುಕೊಂಡು, ಹನ್ನೆರಡು ಮಂದಿಯನ್ನು ಕರೆದು, ಅವರಿಗೆ, "ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ; ಎಲ್ಲರ ಸೇವೆ ಮಾಡುವವನಾಗಿ ಇರಲಿ," ಎಂದರು. ಅನಂತರ ಯೇಸು, ಒಂದು ಚಿಕ್ಕ ಮಗುವನ್ನು ಕರೆದು ಅವರ ಮಧ್ಯೆ ನಿಲ್ಲಿಸಿ, ಅದನ್ನು ತಬ್ಬಿಕೊಂಡು ತಮ್ಮ ಶಿಷ್ಯರಿಗೆ, "ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ," ಎಂದರು.
ಮನಸಿಗೊಂದಿಷ್ಟು : ಒಂದು ಮಗು ಯಾವುದೇ ರೀತಿಯಲ್ಲಿ, ಕೋನದಲ್ಲಿ ನೋಡಿದರೂ ಅಸಹಾಯಕ. ಅದಕ್ಕೆ ಬೇಕಾಗಿರುವುದು ನಮ್ಮ ಆರೈಕೆ, ಮುದ್ದು. ಬದಲಿಗೆ ಅದು ನೀಡಬಹುದಾದದ್ದು ಕೇವಲ ಪ್ರೀತಿ ಹಾಗೂ ಆತ್ಮ ತೃಪ್ತಿ. ಒಂದು ಮಗುವಿನಷ್ಟೇ ಅಸಹಾಯಕ ಜನರು, ವರ್ಗ ನಮ್ಮೊಡನೆ ಇದ್ದಾರೆ. ಅವರಿಗೆ ಬೇಕಾಗಿರುವುದು ನಮ್ಮ ಗಮನ, ಪ್ರೀತಿಯಷ್ಟೇ
ಪ್ರಶ್ನೆ : ನಮ್ಮ ಬಾಳಿನಲ್ಲಿ ಕಡೆಯವನಾಗಿರಲು ಬಯಸಿ ಸರಿದು ನಿಂತ ಇತ್ತೀಚಿನ ಉದಾಹರಣೆ ಯಾವುದು?
24.02.25 - ’ಸುಜ್ಞಾನ' ಎಂಬುದೆಲ್ಲವೂ ಬರುವುದು ಸರ್ವೇಶ್ವರನಿಂದಲೆ’
ಮೊದಲನೇ ವಾಚನ: ಸಿರಾಖನು 1:1-10
ಸುಜ್ಞಾನ' ಎಂಬುದೆಲ್ಲವೂ ಬರುವುದು ಸರ್ವೇಶ್ವರನಿಂದಲೆ ನಿತ್ಯಕ್ಕೂ
ಅದಿರುವುದು ಆತನ ಬಳಿಯಲ್ಲೇ.
ಎಣಿಸಬಲ್ಲವನಾರು ಕಡಲ ಮರಳಿನ ಕಣಗಳನು
ಮಳೆಯ ಹನಿಗಳನು, ಅನಂತಕಾಲದ ದಿನಗಳನು?
ಅಳೆಯಬಲ್ಲವನಾರು ಆಕಾಶದ ಎತ್ತರವನ್ನು, ಭೂಮಿಯ ಉದ್ದಗಲವನು,
ಪಾತಾಳದ ಆಳವನು? ಅಂತೆಯೇ ಸುಜ್ಞಾನದ ನೆಲೆಯನು?
ಸೃಷ್ಟಿಯಾಯಿತು ಸುಜ್ಞಾನ ಸಂಕುಲಕ್ಕೂ ಮೊದಲೇ
ವಿವೇಚನಾಗ್ರಹಿಕೆ ಕಾಲಕ್ಕೆ ಮಂಚೆಯೇ.
ಉನ್ನತ ಸ್ವರ್ಗದ ದೇವರ ವಾಣಿಯೇ ಸುಜ್ಞಾನದ ಮೂಲ
ಆತನ ಶಾಶ್ವತವಾದ ಆಜ್ಞೆಗಳೇ ಅದರ ಮಾರ್ಗ
ಬಯಲಾಯಿತೆ ಸುಜ್ಞಾನದ ಮೂಲ ಯಾರಿಗಾದರೂ?
ಅರಿತಿರುವರೆ ಅದರ ಭವ್ಯ ಕಲ್ಪನೆಗಳನು ಯಾರಾದರೂ?
ಪ್ರಕಟವಾಯಿತೆ ಸುಜ್ಞಾನದ ಅರಿವು ಯಾರಿಗಾದರೂ?
ಗ್ರಹಿಸಿರುವರೆ ಅದರ ಮಾರ್ಗಗಳನು ಯಾರಾದರೂ?
ಸುಜ್ಞಾನಿ ಒಬ್ಬನಿಹನು; ಆತನು ಅತ್ಯಂತ ಭಯಂಕರನು
ಆತನೇ ಸಿಂಹಾಸನರೂಢನಾಗಿರುವ ಸರ್ವೇಶ್ವರನು.
ಸುಜ್ಞಾನವನ್ನು ನಿರ್ಮಿಸಿದಾಗ ಸರ್ವೇಶ್ವರನೇ
ಅದನ್ನು ವೀಕ್ಷಿಸಿ ತೂಕಮಾಡಿದಾತ ಆತನೇ
ಅದನ್ನು ಸುರಿಸಿದನು ಸಮಸ್ತ ಸೃಷ್ಟಿ ಕಾರ್ಯಗಳ ಮೇಲೆ.
ಸಕಲ ಜೀವಿಗಳಲ್ಲಿ ನೆಲಸಿರುವುದು ಆತನ ಇಚ್ಛೆಯಂತೆ ದಯಪಾಲಿಸಿರುವನದನ್ನು
ಹೇರಳವಾಗಿ ಆತನನ್ನು ಪ್ರೀತಿಸುವವರಿಗೆ.
ಅವರೆಲ್ಲರೂ ಹಿಂದಿರುಗಿ ಬಂದಾಗ ಉಳಿದ ಶಿಷ್ಯರ ಸುತ್ತಲೂ ಜನರು ದೊಡ್ಡ ಗುಂಪಾಗಿ ನೆರೆದಿರುವುದನ್ನು, ಧರ್ಮಶಾಸ್ತ್ರಿಗಳು ಇವರೊಡನೆ ವಾದಿಸುತ್ತಿರುವುದನ್ನು ಕಂಡರು. ನೆರದಿದ್ದ ಜನರು ಯೇಸುವನ್ನು ಕಂಡೊಡನೆ ಆಶ್ಚರ್ಯಪಟ್ಟು ಓಡಿಬಂದು, ಅವರಿಗೆ ನಮಸ್ಕರಿಸಿದರು. ಯೇಸುಸ್ವಾಮಿ, "ನಿಮ್ಮ ವಾಗ್ವಾದ ಏನು?" ಎಂದು ಕೇಳಿದರು. ಆ ಗುಂಪಿನಲ್ಲಿದ್ದ ಒಬ್ಬನು, "ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆಂದು ಕರೆತಂದೆ. ಅವನಿಗೆ ಒಂದು ಮೂಕ ದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ," ಎಂದನು. ಇದನ್ನು ಕೇಳಿ ಯೇಸು, "ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊದಿಂಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ ಎಂದರು. ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆ ಕಾರಿದನು. ಯೇಸು, "ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?" ಎಂದು ಹುಡುಗನ ತಂದೆಯನ್ನು ವಿಚಾರಿಸಿದರು ಅದಕ್ಕೆ ಅವನು "ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇ ಪದೇ ಬೆಂಕಿಗೂ ನೀರಿಗೂ ದೂಡಿದೆ; ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯ ಮಾಡಿ ," ಎಂದು ಯೇಸುವನ್ನು ಬೇಡಿಕೊಂಡನು. ಅದಕ್ಕೆ ಯೇಸು "ಸಾಧ್ಯವಾದರೆ" ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!" ಎಂದರು. ಆಗ ಆ ಬಾಲಕನ ತಂದೆ, "ನಾನು ವಿಶ್ವಾಸಿಸುತ್ತೇನೆ, ನನ್ನ ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರವು ನೀಡಿ," ಎಂದು ಯೇಸುವಿಗೆ ಮೊರೆ ಇಟ್ಟನು. ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, "ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸ ಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ," ಎಂದರು. ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು 'ಹುಡುಗ ಸತ್ತುಹೋದ,' ಎಂದುಕೊಂಡರು. ಆದರೆ ಯೇಸು ಅವನ ಕೈಹಿಡಿದು ಎತ್ತಲು ಅವನು ಎದ್ದು ನಿಂತನು. ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯಕವಾಗಿ ಅವರ ಬಳಿಗೆ ಬಂದು, "ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?" ಎಂದು ಕೇಳಿದರು. ಅದಕ್ಕೆ ಯೇಸು, ಈ ಬಗೆಯ ದೆವ್ವವನ್ನು ಹೊರಗಟ್ಟಲು ಪ್ರಾರ್ಥನೆಯೇ ಹೊರತು ಬೇರೆ ಮಾರ್ಗವಿಲ್ಲ," ಎಂದರು.
ಮನಸಿಗೊಂದಿಷ್ಟು : ’ಸಾಧ್ಯವಾದರೇ’ ಎಂಬ ಬಾಲಕನ ತಂದೆಯ ಮೇಲೆಯೇ ಅವನ ಮಗನ ಗುಣಮುಖವು ಅವಲಂಬಿತವಾಗುವಂತ ವಾತಾವರಣವನ್ನು ಯೇಸು ಸೃಷ್ಟಿಸುತ್ತಾರೆ. ’ವಿಶ್ವಾಸಿಸುತ್ತೇನೆ, ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರವು ನೀಡಿ’ ಎಂಬ ಮಾತೇ ಕೊನೆಗೆ ಆತನ ಮಗನನ್ನು ದೆವ್ವದಿಂದ ಬಿಡುಗಡೆಗೆ ದಾರಿ ಮಾಡಿಕೊಡುತ್ತದೆ.
ಪ್ರಶ್ನೆ : ನಮ್ಮ ವಿಶ್ವಾಸದ ಕೊರತೆಯಲ್ಲಿ ಯೇಸುವಿನ ನೆರವಿಗಾಗಿ ಬೇಡಿಕೊಂಡಿದ್ದೇವೆಯೇ?
23.02.25 - "ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ"
ಮನಸಿಗೊಂದಿಷ್ಟು : ’ಮಾಡಬೇಡ’ ಎನ್ನುವ ಆದರ್ಶಗಳ ನಡುವೆ ’ಮಾಡು’ ಎನ್ನುವ ಮೌಲ್ಯಗಳನ್ನು ಯೇಸು ನಮಗೆ ನೀಡುತ್ತಿದ್ದಾರೆ. ’ಶತ್ರುಗಳನ್ನು ದ್ವೇಷಿಸಬೇಡಿ’ ಎನ್ನುವುದು ಲೋಕ ರೂಢಿಯಲ್ಲಿ ಮಾನ್ಯವಾದ ಮೌಲ್ಯವಾದರೆ ’ಅವರನ್ನು ಪ್ರೀತಿಸಿರಿ’ ಎನ್ನುವುದು ಇನ್ನೂ ಎತ್ತರದ ಕ್ರಿಸ್ತನ ಮೌಲ್ಯ. ನಾವು ನಮ್ಮನ್ನು ಹೋಲಿಸಿಕೊಳ್ಳಬೇಕಾದುದು ನಮ್ಮ ನೆರೆಯವನ ಗುಣ ಆದರ್ಶಗಳೊಂದಿಗೆ ಅಲ್ಲ, ದೇವರ ಗುಣ ಮೌಲ್ಯಗಳೊಂದಿಗೆ. ಆಗಾದಾಗ ಮಾನವತೆಯನ್ನು ಪೊರೈಸಿ ದೈವತ್ವದತ್ತ ನಮ್ಮ ಹೆಜ್ಜೆ ಸಾಗುತ್ತದೆ.....
ಪ್ರಶ್ನೆ : ಸಾಮಾನ್ಯತೆಗಿಂತ ಇನ್ನೆಷ್ಟು ಎತ್ತರಕ್ಕೆ ಏರಬಲ್ಲವು?
22.02.25 - "ಯೋನ್ನನ ಮಗ ಸಿಮೋನನೇ, ನೀನು ಧನ್ಯ!"
21.02.25
20.02.25 - "ಈ ಪ್ರತಿಜ್ಞೆಗೆ ಮೇಘಗಳಲ್ಲಿ ನಾನಿಟ್ಟಿರುವ ಮಳೆ ಬಿಲ್ಲೇ ಗುರುತು."
ಮೊದಲನೇ ವಾಚನ: ಆದಿಕಾಂಡ 9:1-13

ಮನಸಿಗೊಂದಿಷ್ಟು : ’ಅಭಿಷಿಕ್ತರಾದ ಲೋಕೋದ್ಧಾರಕ ತಾವೇ’ ಎಂದ ಪೇತ್ರ, ಯೇಸು ಕಠಿಣ ಯಾತನೆಯನ್ನು ಅನುಭವಿಸಬೇಕು ಎಂಬುದನ್ನು ಜೀರ್ಣಿಸಿಕೊಳ್ಳದಾದ. ಯೇಸುವಿನ ಮೇಲಿನ ಆತನ ಪ್ರೀತಿಯಿಂದ ಅದು ಸಹಜವೇ ಆಗಿತ್ತು. ಆದರೆ ದೇವರ ಆಲೋಚನೆ ಅದೆಷ್ಟೇ ಕಠಿಣ ಎನಿಸಿದರೂ ಅದು ಕೊನೆಗೆ ಒಳಿತಿಗಾಗಿಯೇ ಎಂಬ ಸಂದೇಶವನ್ನು ಯೇಸು ಕಟುವಾಗಿಯೇ ನೀಡುತ್ತಾರೆ. ನಮ್ಮ ಬದುಕಿನಲ್ಲಿ ಎಂತಹ ಪ್ರಳಯ ಬಂದರೂ ಒಂದು ದಿನ ಭರವಸೆಯ ಮಳೆ ಬಿಲ್ಲು ನಮಗಾಗಿ ಕಾದಿದೆ
ಪ್ರಶ್ನೆ: ನೀವು ಯೇಸುವನ್ನು ಯಾರೆನುತ್ತೀರಿ?
19.02.25
18.02.25 - "ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,”
ಮೊದಲ ವಾಚನ - ಆದಿಕಾಂಡ 6: 5-8: 7: 1-5, 10
ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು. ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು, “ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು. ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು. ಸರ್ವೇಶ್ವರ ಸ್ವಾಮಿ ನೋಹನಿಗೆ, "ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ. ಎಲ್ಲ ಶುದ್ಧ ಪ್ರಾಣಿಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪ್ರಾಣಿಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ಕರೆದುಕೊ.ಪಕ್ಷಿಗಳಲ್ಲಿಯೂ ಏಳೇಳು ಗಂಡುಹೆಣ್ಣುಗಳನ್ನು ತೆಗೆದುಕೊ. ಹೀಗೆ ಆಯಾ ಜಾತಿಯನ್ನು ಭೂಮಿಯಲ್ಲಿ ಉಳಿಸಿ ಕಾಪಾಡಬೇಕು. ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು. ಏಳು ದಿನಗಳಾದ ಬಳಿಕ ಜಲಪ್ರಳಯವಾಗತೊಡಗಿತು.
17.02.25 - “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ?"
ಮೊದಲನೆಯ ವಾಚನ - ಆದಿಕಾಂಡ 4: 1-15, 25. V.14
ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು. ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು. ಕ್ರಮೇಣ ಕಾಯಿನನು ತಾನು ಬೆಳೆಸಿದ ಫಸಲಲ್ಲಿ ಕೆಲವನ್ನು ತಂದು ಸರ್ವೇಶ್ವರ ಸ್ವಾಮಿಗೆ ಕಾಣಿಕೆಯಾಗಿ ಸಮರ್ಪಿಸಿದನು. ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು. 5ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು. ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ? ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು. ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. “ನಿನ್ನ ತಮ್ಮನೆಲ್ಲಿ?" ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು. ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು. ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು. ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು. ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ. ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು. ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು.
ಆ ಕಾಲದಲ್ಲಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು. ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು. ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.
16.02.25 - "ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ!"

15.02.25 - "ಊಟ ಮಾಡಿದವರ ಸಂಖ್ಯೆ ನಾಲ್ಕು ಸಾವಿರ"
ಮೊದಲನೆಯ ವಾಚನ - ಆದಿಕಾಂಡ 3: 9-24
ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು. ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು. “ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು. ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು. ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು. ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.” ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ." ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ. ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು. ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು." ಆದಾಮನು ತನ್ನ ಹೆಂಡತಿಗೆ “ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ . ಸರ್ವೇಶ್ವರನಾದ ದೇವರು ಆದಾಮನಿಗೂ ಆತನ ಹೆಂಡತಿಗೂ ಚರ್ಮದ ಅಂಗಿಗಳನ್ನು ತೊಡಿಸಿದರು. ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು. ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು. ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.
ಆ ಕಾಲದಲ್ಲಿ ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು. ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು. ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು. ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು. ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿ ಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು. ಊಟ ಮಾಡಿದವರ ಸಂಖ್ಯೆ ನಾಲ್ಕು ಸಾವಿರ. ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
14.02.25
13.02.25 - "ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?”
ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು. ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು. ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. 23ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು. ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು. ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.
ಆ ಕಾಲದಲ್ಲಿ ಯೇಸು ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ. ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು ಆಕೆಯ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು. ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು. ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು. ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು. ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.
12.02.25 - "ಮನುಷ್ಯನ ಅಂತರಂಗದಿಂದ ಹೊರ ಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)”
11.02.25 - "ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!"
ಆ ಕಾಲದಲ್ಲಿ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟ ಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನ ಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’ “ನೀವು ದೇವರ ಆಜ್ಞೆಯನ್ನು ತೊರೆದು ಮಾನವ ನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ. ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! ‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ. ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿ ಬಿಟ್ಟರೆ ಸಾಕು, ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. “ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.
10.02.25
ಮೊದಲನೆಯ ವಾಚನ - ಅದಿಕಾಂಡ 1: 1-19