ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 20:28-38
ಪೌಲನು ಎಫೆಸದ ಸಭೆಯ ಹಿರಿಯರನ್ನು ಉದ್ದೇಶಿಸಿ ಮಾತನಾಡುತ್ತಾ ಹೀಗೆಂದನು: "ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆ ಉತ್ತಮ ಕುರಿಗಾಹಿಗಳಾಗಿರಿ. ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿ ಮಾಡದೆ ಬಿಡವು. ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆಗೆ ಸೆಲೆದುಕೊಳ್ಳಲು ಅಸತ್ಯವಾದುವುಗಳನ್ನು ಹೇಳುವರು. ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ. ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು. ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ. ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ. ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ' ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು ' ಎಂಬ ಯೇಸುವಿನ ಮಾತುಗಳನ್ನು ನೆನಪಿನಲ್ಲಿಡಿ." ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು. ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಸುರಿಯುತ್ತಿತ್ತು. ' ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ, ' ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.
ಕೀರ್ತನೆ
ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು.
ಶುಭಸಂದೇಶ: ಯೊವಾನ್ನ 17:11-19
Please send gospel readdings
ReplyDelete