ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

03.06.2025 - ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನೂ ಇವರನ್ನು ಲೋಕಕ್ಕೆ ಕಳಿಸಿದ್ದೇನೆ

ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 20:17-27


ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು. ಬಂದಮೇಲೆ ಅವರಿಗೆ ಹೀಗೆಂದನು: “ನಾನು ಏಷ್ಯ ಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ. ಯೆಹೂದ್ಯರ ಕುತಂತ್ರಗಳಿAದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ, ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು. ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ. ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ. ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು. ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ. ೪ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷö್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ. ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ. ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ. ಏಕೆಂದರೆ, ದೈವ ಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.

ಕೀರ್ತನೆ 
ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು.

ಶುಭಸಂದೇಶ: ಯೊವಾನ್ನ 17:11-19


ಆ ಕಾಲದಲ್ಲಿ ಯೇಸು ಆಕಾಶದತ್ತ ಕಣ್ಣೆತ್ತಿ ಹೀಗೆಂದು ಪ್ರಾರ್ಥಿಸಿದರು: ಪವಿತ್ರ ಪಿತನೇ, ನಾವು ಒಂದಾಗಿರುವಂತೆ, ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ. ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ. ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ. ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ. ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ. ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರೂ ಲೋಕಕ್ಕೆ ಸೇರಿದವರಲ್ಲ. ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ. ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನೂ ಇವರನ್ನು ಲೋಕಕ್ಕೆ ಕಳಿಸಿದ್ದೇನೆ. ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನು ನಾನೇ ಮೀಸಲಾಗಿಸಿಕೊಂಡಿದ್ದೇನೆ.

No comments:

Post a Comment