ಮೊದಲನೆಯ ವಾಚನ: ಕೊಲೊಸ್ಸೆಯರಿಗೆ ಬರೆದ ಪತ್ರದಿಂದ 1:15-20
ಆ ಕಾಲದಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, " ಯೊವಾನ್ನನ ಶಿಷ್ಯರು ಪದೇ ಪದೇ ಉಪವಾಸವಿದ್ದು
ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ, " ಎಂದು ಅವರನ್ನು ಮೂದಲಿಸಿದರು.
ಅದಕ್ಕೆ ಯೇಸು, " ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ
ಅವರು ಉಪವಾಸ ಮಾಡುವರು, " ಎಂದು ಉತ್ತರ ಕೊಟ್ಟರು.
ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು
ಹೇಳಿದರು:
"ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದು ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ. ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ, ಮದ್ಯ ಚೆಲ್ಲಿ ಹೋಗುತ್ತದೆ, ಬುದ್ದಲಿಗಳೂ ಹಾಳಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.ಹಳೇ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ, " ಎಂದರು.


No comments:
Post a Comment