ಮೊದಲನೆಯ ವಾಚನ : ಯೊವಾನ್ನನ ಮೊದಲನೆಯ ಪತ್ರದಿಂದ ಇಂದಿನ ವಾಚನ 2:18-21
- ಪ್ರಭುವಿನ ವಾಕ್ಯ
ಕೀರ್ತನೆ 96: 1-2, 11-13, v. 11
ಶ್ಲೋಕ: ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು.
1. ಹೊಸ ಗೀತೆಯನು ಹಾಡಿರಿ ಪ್ರಭುವಿಗೆ|
ವಿಶ್ವವೆಲ್ಲವು ಹಾಡಲಿ ಆತನಿಗೆ||
ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ|
ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ||
ಶ್ಲೋಕ
2. ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು|
ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು||
ಉಲ್ಲಾಸಿಸಲಿ ಹೊಲಗದ್ದೆಗಳು, ಪೈರು ಪಚ್ಚೆಗಳು|
ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು||
ಶ್ಲೋಕ
3. ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ|
ಜಗಕು ಜನತೆಗು ತೀರ್ಪಿಡುವನು ನೀತಿ ನಿಯಮಾನುಸಾರವಾಗಿ||
ಶ್ಲೋಕ
ಘೋಷಣೆ : ಅಲ್ಲೆಲೂಯ, ಅಲ್ಲೆಲೂಯ!
ಪವಿತ್ರ ದಿನವೊಂದು ಉದಯಿಸಿದೆ, ರಾಷ್ಟ್ರಗಳೆ, ಬಂದು ಸರ್ವೇಶ್ವರಸ್ವಾಮಿಯನ್ನು ಸ್ತುತಿಸಿರಿ | ಏಕೆಂದರೆ, ಇಂದು ಪೃಥ್ವಿಯ ಮೇಲೆ ಅತಿಶಯವಾದ ಬೆಳಕೊಂದು ಪ್ರಕಾಶಿಸಿದೆ ||
ಅಲ್ಲೆಲೂಯ!
ಶುಭಸಂದೇಶ : ಯೊವಾನ್ನನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:1-18
ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು. ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ. ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವ ಜನಾಂಗದ ಜ್ಯೋತಿಯಾಗಿತ್ತು. ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ. ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು, ಆತನ ಹೆಸರು ಯೊವಾನ್ನ. ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು. ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು. ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಯೋತಿ ಅವರೇ. ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆ ಹೋಯಿತು. ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆ ಹೋದರು. ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ, ಅವರಲ್ಲಿ ವಿಶ್ವಾಸವಿಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು. ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಿಕ ಇಚ್ಛೆಯಿಂದ ಅಲ್ಲ, ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು. ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಆ ಮಹಿಮೆಯೇ ಎಂದೇ ಅವರು ಕೃಪಾವರದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು. ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ," 'ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು' ಎಂದು ನಾನು ಹೇಳಿದ್ದು ಅವರನ್ನು ಕುರಿತೇ," ಎಂದು ಘೋಷಿಸಿದನು. ಅವರ ಪರಿಪೂರ್ಣತೆಯಿಂದ ನಾವೆಲ್ಲರು ಕೃಪಾವರದ ಮೇಲೆ ಕೃಪಾವರವನ್ನು ಪಡೆದಿದ್ದೇವೆ. ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ಕೃಪಾವರ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು. ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.
- ಪ್ರಭುಕ್ರಿಸ್ತರ ಶುಭಸಂದೇಶ
No comments:
Post a Comment