ಮೊದಲನೇ ವಾಚನ: 2 ಪೇತ್ರನು1:2-7
01.06.2026 - ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು
31.05.2026 - ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು
ಮೊದಲನೇ ವಾಚನ ವಿಮೋಚನಕಾಂಡ 34:4-6, 8-9
30.05.2026 - "ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,
ಮೊದಲನೇ ವಾಚನ: ಯೂದ 1:20-25
ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿವ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ. ನಿತ್ಯ ಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸು ಕ್ರಿಸ್ತರನ್ನು ಎದುರು ನೋಡುತ್ತಾ ದೇವರ ಪ್ರೀತಿಯಲ್ಲಿ ನೆಲಗೊಂಡಿರಿ. ಸಂಶಯಪಡುವವರಿಗೆ ಸಹೃದಯದಿಂದ ನೆರವಾಗಿರಿ. ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ. ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ, ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ, ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸು ಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆಧಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.
29.05.2026 - ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ
ಮೊದಲನೇ ವಾಚನ:1ಪೇತ್ರ 4:7-13
ಪ್ರಿಯರೇ, ಪರಿಶೋಧನೆಗೆ೦ದು ನಿಮಗೆ ಬ೦ದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸ೦ಭವಿಸಿಬಿಟ್ಟಿತೆ೦ದು ವಿಸ್ಮಯಪಡಬೇಡಿ. ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.
28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.
ಮೊದಲನೆಯ ವಾಚನ: 1 ಪೇತ್ರ 2:2-5,9-12
27.05.2026 - ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ; ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ
26.05.2026 - ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು
ಮೊದಲನೆಯ ವಾಚನ: 1 ಪೇತ್ರ 1:10-16
ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು. ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು. ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷರಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ. ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ. ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ. ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.
ಎಸಗಿಹನಾತನು ಪವಾಡಕಾರ್ಯಗಳನು|
ಗಳಿಸಿತಾತನ ಕೈ ಪೂತಭುಜ ಗೆಲುವನು||
ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ದಾರಕ ಶಕ್ತಿಯನು||
ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು|
ಇಸ್ರಾಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||
ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ|
ನಮ್ಮ ದೇವಾ ಸಾಧಿಸಿದ ಜಯಗಳಿಕೆ||
ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ|
ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ||
ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ|
ಭಜಿಸಿರಿ ಆತನನು ವಾದ್ಯಮೇಳಗಳೊಂದಿಗೆ||
ಊದಿರಿ ಕೊಂಬನು, ತುತೂರಿಯನು|
ಉದ್ಘೋಷಿಸಿರಿ ಪ್ರಭು ರಾಜನನು||
ಘೋಷಣೆ ಕೀರ್ತನೆ 27:11
ಅಲ್ಲೆಲೂಯ, ಅಲ್ಲೆಲೂಯ!
ಬೋಧಿಸೆನಗೆ ಪ್ರಭೂ, ನಿನ್ನ ಮಾರ್ಗವನು | ಶತ್ರುರಹಿತ ಹಾದಿಯಲಿ ನಡೆಸು ಎನ್ನನು ||
ಅಲ್ಲೆಲೂಯ!
25.05.2026 - ಅಮ್ಮಾ, ಇಗೋ, ನಿನ್ನ ಮಗ
ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 1: 12-14
24.05.2026 - “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು.
ಪಂಚಾಶತ್ತಮ ಮಹೋತ್ಸವ


23.05.2026 - ಪ್ರಭುವೇ, ನಿಮ್ಮನ್ನು ಹಿಡಿದು ಕೊಡುವಂಥ ಸ್ವಾಮಿ ದ್ರೋಹಿ ಯಾರು?
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 28:16-20, 30-31
22.05.2026 - ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21
![]() |
21.05.2026 - ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 22:30; 23:6-11
ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು. ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು. ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ. ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು. ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು. ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.
ಶುಭಸಂದೇಶ: ಯೊವಾನ್ನ 17:20-26
16.06.2026 - ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ
ಮೊದಲನೇ ವಾಚನ: 1 ಅರಸುಗಳು 21:17-29 ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು. “ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...






















