ಮೊದಲನೇ ವಾಚನ : ಪ್ರೇಷಿತರ ಕಾರ್ಯಕಲಾಪಗಳು : 10:24-35
ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು. ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿನು ಅವನನ್ನು ಎದುರಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರ ಮಾಡಿದನು. ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, ಎದ್ದು ನಿಲ್ಲು, ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.
ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು. ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ. ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.
ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು. ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ. ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು. ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.
ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ. ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.
-ಪ್ರಭುವಿನ ವಾಕ್ಯ
ಕೀರ್ತನೆ
42: 2-5. v. 5
ಶ್ಲೋಕ: ಜೀವಂತ ದೇವರಿಗಾಗಿ ದಾಹದಿಂದಿದೆ ಎನ್ನ ಮನ.
1. ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ|
ದಣಿದೆನ್ನ ಮನ ದೇವಾ ಹಂಬಲಿಸುತಿದೆ ನಿನಗಾಗಿ||
ಶ್ಲೋಕ
2. ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ|
ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ||
ಶ್ಲೋಕ
3. ಜನಸಮೂಹದೊಡನೆ ನಾ ಜಯಜಯಕಾರ ಮಾಡುತ|
ಸ್ತುತಿಗೀತೆಗಳ ಹಾಡುತ ತೀರ್ಥಯಾತ್ರೆ. ಗೈಯುತ|
ದೇಗುಲಕೆ ತೆರಳಿದಾ ಸವಿನೆನಪು ಮನಗರಗಿಸುವುದು ನಿರುತ||
ಶ್ಲೋಕ
4. ಎನ್ನ ಮನವೇ, ಚಿಂತಿಸುವೆಯೇಕೆ?|
ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ||
ಮತ್ತೆ ಸ್ತುತಿಸುವೆ ನಾನಾತನನು|
ಮುಕ್ತಿದಾತ ಪರಮಾತ್ಮ ಆತನೆನಗೆ||
ಶ್ಲೋಕ
ಎರಡನೇ ವಾಚನ : ಹಿಬ್ರಿಯರಿಗೆ 1:2-3
-ಪ್ರಭುವಿನ ವಾಕ್ಯ




