ಪ್ರವಾದಿ ಯೆರೆಮೀಯನ ಗ್ರಂಥ 26:11-16, 24
ಕೀರ್ತನೆ: 69:15-16, 30-31, 33-34
ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ
ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ.
1. ಕಳ್ಳುಸುಬೀನಲಿ ನಾನಿಳಿದು ಹೋಗದಂತೆ ಸೆಳೆದುಕೊ|
ಪೊಳ್ಳು ದುರುಳರ ನಡುವಿನಲಿ ನಾ ಮುಳುಗದಂತೆ ಎಳೆದುಕೊ||
ಹುಚ್ಚು ಹೊಳೆಯ ಎನ್ನ ಕೊಚ್ಚದಿರಲಯ್ಯಾ|
ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ|
ಪಾತಾಳವೆನ್ನನು ನುಂಗದಿರಲಯ್ಯಾ||
ಶ್ಲೋಕ
2. ದೇವಾ, ನಾ ನೊಂದು ಬೆಂದಿಹೆನಯ್ಯಾ|
ಉದ್ಧರಿಸಿ ನನ್ನನು ಕಾಪಾಡಯ್ಯಾ||
ಸಂಕೀರ್ತಿಸುವೆನು ದೇವರ ಶ್ರೀ ನಾಮವನು|
ಕೃತಜ್ಞತೆಯಿಂದಾತನನು ಕೊಂಡಾಡುವೆನು||
ಶ್ಲೋಕ
3. ಇದನರಿತು ದೀನದಲಿತರು ಆನಂದಗೊಳ್ಳಲಿ|
ದೇವನನು ಅರಸುವವರು ಪುನಶ್ಚೇತನಗೊಳ್ಳಲಿ|| ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು|
ಸೆರೆಯಲ್ಲಿರುವ ತನ್ನವರನು ತಿರಸ್ಕರಿಸನು||
ಶ್ಲೋಕ
ಘೋಷಣೆ
(ಕೀರ್ತನೆ 27: 11)
ಅಲ್ಲೆಲೂಯ, ಅಲ್ಲೆಲೂಯ.
ಬೋಧಿಸೆನಗೆ ಪ್ರಭು ನಿನ್ನ ಮಾರ್ಗವನು,| ಶತ್ರುರಹಿತ ಹಾದಿಯಲಿ ನಡೆಸು ಎನ್ನನು||
ಅಲ್ಲೆಲೂಯ.
ಶುಭಸಂದೇಶ: ಮತ್ತಾಯ 14:1-12
ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು. ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು. ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು. ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು. ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು. ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದನು. ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು. ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು. ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು; ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. ಯೊವಾನ್ನನ ಶಿಷ್ಯರು ಶವವನ್ನು ತೆಗೆದು ಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.


No comments:
Post a Comment