ಮೊದಲನೇ ವಾಚನ: ಹೊಶೇಯ 2:16, 17-18, 21-22
ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ. ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಚರಿಸದಂತೆ ಮಾಡುವೆನು. ಆ ದಿನಗಳಲ್ಲಿ ನನ್ನ ಜನರಿಗೆ ಹಾನಿ ಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದ ಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು. ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು. ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.
ಕೀರ್ತನೆ: 145:2-3, 4-5, 6-7, 8-9
ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು
ಕೀರ್ತನೆ
145: 2-9, v. 8
ಶ್ಲೋಕ: ಪ್ರಭು ದಯಾನಿಧಿ, ಕೃಪಾಸಾಗರನು.
1. ಹೊಗಳುವೆನು ನಾ ದಿನದಿನವೂ ನಿನ್ನನು|
ಭಜಿಸುವೆನೆಂದೆಂದಿಗೂ ನಿನ್ನ ಹೆಸರನು||
ಪ್ರಭು ಮಹಾತ್ಮನು ಸ್ತತ್ಯರ್ಹನು|
ಆತನ ಮಹಿಮೆ ಅಗಮ್ಯವಾದದು||
ಶ್ಲೋಕ
2. ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು|
ತಿಳಿಸುವುದು ಪ್ರಭೂ, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು||
ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು|
ನಿನ್ನ ಮಹೋನ್ನತ ಮಹಿಮಾಪ್ರಭಾವವನು||
ಶ್ಲೋಕ
3. ಜನರು ಸಾರುವರು ನಿನ್ನ ಅದ್ಭುತಶಕ್ತಿಯನು|
ನಾ ಪ್ರಸಿದ್ದಪಡಿಸುವೆನು ನಿನ್ನ ಮಹಿಮೆಯನು||
ಪ್ರಕಟಿಸುವರವರು ನಿನ್ನ ಮಹೋಪಕಾರವನು|
ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು||
ಶ್ಲೋಕ
4. ಪ್ರಭು ದಯಾನಿಧಿ ಕೃಪಾಸಾಗರನು|
ಸಹನಶೀಲನು ಪ್ರೀತಿಪೂರ್ಣನು||
ಪ್ರಭುವಿನ ಕರುಣೆ ಎಲ್ಲರ ಮೇಲೆ|
ಆತನ ಕೃಪೆಯು ಸೃಷ್ಟಿಯ ಮೇಲೆ||
ಶ್ಲೋಕ
🌺✝️🌺
ಘೋಷಣೆ
(ಕೀರ್ತನೆ 25: 4,5)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನ ಮಾರ್ಗವನು ಪ್ರಭೂ, ನನಗೆ ತೋರಿಸು | ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ ||
ಅಲ್ಲೆಲೂಯ.
ಶುಭಸಂದೇಶ: ಮತ್ತಾಯ 9:18-26


No comments:
Post a Comment