ಮೊದಲನೇ ವಾಚನ: 1 ಕೊರಿಂಥಿಯರಿಗೆ 8:1-7, 11-13
ಕೀರ್ತನೆ: 139:1-3, 13-14, 23-24
ಶ್ಲೋಕ: ನಡೆಸೆನ್ನನು ಪ್ರಭೂ, ಆ ಸನಾತನ ಪಥದಲಿ
ನಾ ಕೂರುವುದು ಏಳುವುದೂ ನಿನಗೆ ಗೊತ್ತಿದೆ|
ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ||
ಶ್ಲೋಕ
2. ನನ್ನ ಅಂತರಂಗವನು ಉಂಟುಮಾಡಿದಾತ ನೀನು|
ತಾಯ ಗರ್ಭದಲೇ ನನ್ನ ರೂಪಿಸಿದಾತ ನೀನು|
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ|
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ||
ಶ್ಲೋಕ
ಪರೀಕ್ಷಿಸಿ ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ||
ಕೇಡಿದೆಯೇ ನೋಡು ನನ್ನ ಮಾರ್ಗದಲಿ|
ನಡೆಸೆನ್ನನು ಆ ಸನಾತನ ಪಥದಲಿ||
ಶ್ಲೋಕ
(ಕೀರ್ತನೆ 119: 88)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು |
ಅಲ್ಲೆಲೂಯ.
ಶುಭಸಂದೇಶ: ಲೂಕ 6:27-38
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ? ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರಲ್ಲವೆ? ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು ಸಹ ಸಾಲ ಕೊಡುತ್ತಾರಲ್ಲವೆ?’ “ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು. ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. “ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು," ಎಂದರು.
ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ


No comments:
Post a Comment