ಮೊದಲನೇ ವಾಚನ: ಜ್ಞಾನೋಕ್ತಿಗಳು 30:5-9
ಕೀರ್ತನೆ: 119:29, 72, 89, 101, 104, 163
ಶ್ಲೋಕ: ನಿನ್ನ ವಾಕ್ಯ ನನ್ನ ಕಾಲಿನ ನಡೆಗೆ ಕೈದೀಪ
1. ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ|ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ||
ಸಾವಿರಾರು ಚಿನ್ನ ಬೆಳ್ಳಿ ನಾಣ್ಯಗಳಿಗಿಂತ|
ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ||
ಶ್ಲೋಕ
2. ಹೇ ಪ್ರಭೂ, ನಿನ್ನ ವಾಕ್ಯ ಶಾಶ್ವತ|
ಸ್ವರ್ಗಲೋಕದಲಿ ಅದು ಚಿರ ಶಾಶ್ವತ||
ನಿನ್ನ ವಾಕ್ಯವನು ಅನುಸರಿಸುವ ಧೈರ್ಯದಿಂದ|
ನನ್ನ ಹೆಜ್ಜೆಗಳನು ತಡೆದೆನು ದುರ್ಮಾಗದಿಂದ||
ಶ್ಲೋಕ
3. ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ|
ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾಮಾರ್ಗ||
ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ|
ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ||
ಶ್ಲೋಕ
ಶುಭಸಂದೇಶ: ಲೂಕ 9:1-6
ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು. ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು. ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ. ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ. ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆ ಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು. ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.

No comments:
Post a Comment