ಕ್ಷಮೆಯ ಕುರಿತು ಬೈಬಲ್ ವಾಕ್ಯಗಳು



ಕೋಪವು ನಿಮ್ಮ ಹೃದಯವನ್ನು ನಿಯಂತ್ರಿಸುತ್ತಿರುವಾಗ - ಮತ್ತಾಯ 5:44 

ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; 
ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ

************************


ದೇವರ ಕ್ಷಮೆ ಅಗತ್ಯವಿರುವಾಗ - 1 ಯೊವಾನ್ನ 1:9 

ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ 
ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು 
ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು

************************


 ಮನಸ್ಸಿನಲ್ಲಿ ಶಾಂತಿಯನ್ನು ಬಯಸಿದಾಗ - ರೋಮನರಿಗೆ 12:18 

ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ. 

************************


 ಪದೇ ಪದೇ ಕ್ಷಮಿಸುವುದು ಕಷ್ಟವಾಗುತ್ತಿರುವಾಗ - ಮತ್ತಾಯ 18:21–22

ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು ಯೇಸು ಅವನಿಗೆ - ಏಳು ಸಾರಿ ಎಂದಲ್ಲ, ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ

************************

No comments:

Post a Comment

15.09.2026 - IIಮಂಗಳವಾರII ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು

  ಮೊದಲನೇ ವಾಚನ: 1 ಕೊರಿಂಥಿಯರಿಗೆ  12:12-14, 27-31 ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು. ಯ...