ಮೊದಲನೇ ವಾಚನ: ಪ್ರಕಟಣಾ ಗ್ರಂಥ 15:1-4
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು. ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ :
ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ !
ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ !
ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ
ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.
ಹೇ ಪ್ರಭೂ, ನಿನಗಂಜದವರಾರು?
ನಿನ್ನ ನಾಮಸ್ತುತಿ ಮಾಡದವರಾರು?
ಪರಮಪವಿತ್ರ ನೀನಲ್ಲದಿನ್ಯಾರು
ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು
ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”
ಕೀರ್ತನೆ: 98:1, 2-3, 7-8, 9
ಶ್ಲೋಕ: ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ!
ಎಸಗಿಹನಾತನು ಪವಾಡ ಕಾರ್ಯಗಳನು| ಆತನ ಬಲಗೈ
ಗಳಿಸಿತಾತನಿಗೆ ಗೆಲುವನು.
ಶ್ಲೋಕ
2. ಪ್ರಕಟಿಸಿಹನು ಪ್ರಭು ತನ್ನ ಮುಕ್ತಿವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು|
ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ||
ನಮ್ಮ ದೇವ ಸಾಧಿಸಿದ ಜಯಗಳಿಕೆ|
ಸ್ಮರಿಸಿಕೊಂಡನು ಪ್ರಭು ತನ್ನ ಪ್ರೀತಿಯನು|
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||
ಶ್ಲೋಕ
ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು||
ಚಪ್ಪಾಳೆ ಹೊಡೆಯಲಿ ನದಿಗಳು|
ತಟ್ಟಾಡಲಿ ಬೆಟ್ಟಗುಡ್ಡಗಳು||
ಶ್ಲೋಕ
ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು||
ಶ್ಲೋಕ
(ಮತ್ತಾಯ, 24: 42, 44)
ಎಚ್ಚರವಾಗಿದ್ದು ಸಿದ್ಧರಾಗಿರಿ | ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು||
ಅಲ್ಲೆಲೂಯ.
ಶುಭಸಂದೇಶ: ಲೂಕ 21:12-19


No comments:
Post a Comment