ಮೊದಲನೇ ವಾಚನ: ಗಲಾತ್ಯರಿಗೆ 3:1-5
1. ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು|
ನಮಗೊಬ್ಬ ಶಕ್ತಿಯುತ ಮುಕ್ತಿದಾತನನು||
ಪುರಾತನ ಕಾಲದಿಂದಲೇ, ಪೂಜ್ಯ ಪ್ರವಾದಿಗಳ ಬಾಯಿಂದಲೇ|
ಅರುಹಿಸಿರುವನು ಇಂತೆಂದು ನಮಗೆ||
ಶ್ಲೋಕ
ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ|
ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು|
ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು||
ಶ್ಲೋಕ
ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ||
ಘೋಷಣೆ
(ಕೀರ್ತನೆ 119:36,29)
ನಿನ್ನ ಕಟ್ಟಳೆಯ ಕಡೆ ಎನ್ನ ಮನವ ತಿರುಗಿಸಯ್ಯಾ | ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ ||
ಅಲ್ಲೆಲೂಯ!
ಶುಭಸಂದೇಶ: ಲೂಕ 11:5-13
ಯೇಸುಸ್ವಾಮಿ ಶಿಷ್ಯರಿಗೆ ಹೀಗೆಂದರು: “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, ‘ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಈಗತಾನೆ ಬಂದಿದ್ದಾನೆ. ಅವನಿಗೆ ಊಟಕ್ಕಿಡಲು ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು, ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ? ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ. ಆದುದರಿಂದ: ‘ಕೇಳಿರಿ, ನಿಮಗೆ ದೊರಕುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು. ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’ “ನಿಮ್ಮಲ್ಲಿ ಯಾವ ತಂದೆ ತಾನೇ ತನ್ನ ಮಗ ಮೀನನ್ನು ಕೇಳಿದರೆ ಹಾವನ್ನು ಕೊಡುತ್ತಾನೆ? ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ? ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”

