ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

08.12.2018

ಮೊದಲನೇ ವಾಚನ: ಆದಿಕಾಂಡ 3:9--15, 20

ಸರ್ವೇಶ್ವರನಾದ ದೇವರು, "ಎಲ್ಲಿರುತ್ತೀಯ ಎಂದು ಆದಾಮನನ್ನು ಕೂಗಿ ಕೇಳಿದರು. ಅದಕ್ಕೆ ಅವನು, "ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತುಬೆತ್ತಲೆಯಾಗಿದ್ದೇನಲ್ಲಾ ಎಂದ ಹೆದರಿ ಅವಿತುಕೊಂಡೆ," ಎಂದನು. "ನೀನು ಬೆತ್ತಲೆಯಾಗಿರುವಿಯೆಂದು ನಿನಗೆ ತಿಳಿಸಿದವರು ಯಾರು?" ಎಂದು ಕೇಳಿದರು. ಅದಕ್ಕೆ ಆದಾಮನು, "ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆಆ ಮರದ ಹಣ್ಣನ್ನು ನನಗೆ ಕೊಟ್ಟಳುನಾನು ತಿಂದೆ," ಎಂದನು. ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, "ಇದೇನು ನೀನು ಮಾಡಿದ್ದು?" ಎಃದು ಕೇಳಲು ಆಕೆಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆಮಾಡಿತು," ಎಂದು ಉತ್ತರ ಕೊಟ್ಟಳು. ಆಗ ಸರ್ವೇಶ್ವರನಾದ ದೇವರುಇಂತೆದಂರು ಸರ್ಪಕ್ಕೆ: ಈ ಪರಿ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶುಪ್ರಾಣಿಗಳಿಗಿಂತಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೇ ಜೀವಮಾನ ಪರಿಯಂತ. ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನುಕಚ್ಚುವೆ ನಿನಾ ಸಂತಾನದ ಹಿಮ್ಮಡಿಯನ್ನು." ಆದಾಮನು ತನ್ನ ಹೆಂಡತಿಗೆ  "ಹವ್ವ"  ಎಂದು ಹೆಸರಿಟ್ಟನು. ಎಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ.

 ಕೀರ್ತನೆ: 98:1, 2-3, 3-4
 ಶ್ಲೋಕ: ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನ ಎಸಗಿಹನಾತನು ಪವಾಡಕಾರ್ಯಗಳನು.

ಎರಡನೇ ವಾಚನ: ಎಫೆಸಿಯರಿಗೆ  1:3-6, 11-12

ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ. ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು. ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು. ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರ ಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ. ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲೂ ನಿರಿಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.

 ಶುಭಸಂದೇಶ: ಲೂಕ 1:26-38

ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಿನಲ್ಲಿದೇವರು ಗಬ್ರಿಯೇಲ್ ದೂತರನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು. ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ. ದೇವದೂತನು ಆಕೆಯ ಬಳಿಗೆ ಬಂದು  "ದೈವಾನುಗ್ರಹಭರಿತಳೇ",  ನಿನಗೆ ಶುಭವಾಗಲಿಸರ್ವೇಶ್ವರ ನಿಮ್ಮೊಡನೆ ಇದ್ದಾರೆ!" ಎಂದನು. ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು.  'ಇದೆಂಥ ಶುಭಾಶಯ'  ಎಂದು ಅವಳು ಯೋಚಿಸತೊಡಗಿದಳು. ದೂತನು ಆಕೆಗೆ, "ಮರಿಯಾನೀನು ಅಂಜಬೇಕಾಗಿಲ್ಲದೇವರ ಅನುಗ್ರಹ ನಿನಗೆ ಲಭಿಸಿದೆಇಗೋನೀನು ಗರ್ಭವತಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ  'ಯೇಸು'  ಎಂಬ ಹೆಸರಿಡಬೇಕುಆತನು ಮಹಾಪುರುಷನಾಗುವನುಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು. ಯಕೋಬನ ವಂಶವನ್ನು ಆತನು ಚಿರಕಾಲ ಆಳುವನುಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು," ಎಂದನು. ಅದಕ್ಕೆ ಮರಿಯಳು, "ಇದು ಆಗುವುದಾದರೂ ಹೇಗೆನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?" ಎಂದು ವಿಚಾರಿಸಿದಳು. ದೂತನು ಪ್ರತ್ಯುತ್ತರವಾಗಿ, "ಪವಿತ್ರಾತ್ಮ ನಿನ್ನ ಮೇಲೆ ಬರುವರುಪರಾತ್ಪರ ದೇವರ ಶಕ್ತಿಯು ನಿನ್ನನ್ನು ಆವರಿಸುವುದುಈ ಕಾರಣದಿಂದನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು  'ದೇವರ ಪುತ್ರ'  ಎನಿಸಿಕೊಳ್ಳುವನು. ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು: ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ. ದೇವರಿಗೆ ಅಸಾದ್ಯವಾದುದು ಯಾವುದೂ ಇಲ್ಲ," ಎಂದನು. ಆಗ ಮರಿಯಳು,  "ಇಗೋನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,"  ಎಂದಳು.  ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.

07.12.2018

ಸಾಧಾರಣ ಕಾಲದ ೩೫ನೇ ಶುಕ್ರವಾರ

ಮೊದಲನೇ ವಾಚನ: ಯೆಶಾಯ 29:17-24

ಸ್ವಾಮಿ ಸರ್ವೇಶ್ವರ ಹೀಗೆನ್ನುತ್ತಾರೆ: ಕೊಂಚಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು. ಆ ದಿನದಂದು ಕಿವುಡರು ಗ್ರಂಥ ವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು. ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು. ಏಕೆಂದರೆ ಭಯೋತ್ಪಾದಕರು ನಿಶ್ಯೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು. ಸುಳ್ಳುಸಾಕ್ಷಿ ಹೇಳಿ ತಪ್ಪು ಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತರಿಗೆ ನ್ಯಾಯತಪ್ಪಿಸುವವರು. ಹೀಗೆ ಅಧರ್ಮದಲ್ಲಿ ನಿರತವಾಗಿರುವ ಇವರೆಲ್ಲರು ನಿರ್ಮೂಲರಾಗುವರು. ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ: "ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ. ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು, ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು, ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನ ಮಗ್ನರಾಗುವರು.

ಕೀರ್ತನೆ: 27:1, 4, 13-14

ಶ್ಲೋಕ: ನನಗೆ ಬೆಳಕು, ನನಗೆ ರಕ್ಷೆ ಪ್ರಭುವೇ.

ಶುಭಸಂದೇಶ: ಮತ್ತಾಯ  9:27-31

ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, "ಸ್ವಾಮೀ, ದಾವೀದ ಕುಲಪುತ್ರರೇ," ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆ ಹೋದರು. ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. "ನಾನು ನಿಮ್ಮನ್ನು ಗುಣಪಡಿಸಬಲ್ಲನೆಂದು ನೀವು ವಿಶ್ವಾಸವಿಡುವತ್ತೀರೋ?" ಎಂದು ಯೇಸು ಪ್ರಶ್ನಿಸಿದರು. "ಹೌದು ಸ್ವಾಮೀ,  ಹೌದು," ಎಂದು ಉತ್ತರವಿತ್ತರು. ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, "ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ," ಎಂದರು. ಅವರಿಗೆ ದೃಷ್ಟಿ ಬಂದಿತು. "ಈ ವಿಷಯ ಯಾರಿಗೂ ತಿಳಿಸಬಾರದು, ಎಚ್ಚರಿಕೆ!" ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.

06.12.2018

ಮೊದಲನೇ ವಾಚನ: ಯೆಶಾಯ 26:1-6 

ಕಾಲ ಬರುವುದುಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನ್ನು: ನಮಗಿದೆ ಸುಭದ್ರ
ನಗರದೇವರೇ ಅದರ ದುರ್ಗಪ್ರಾಕಾರ ತೆರೆಯಿರಿ ನಗರ ದ್ವಾರಗಳನ್ನುಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು. ನಿನ್ನ ನೆಚ್ಚಿದವರಿಗೆಸ್ಥಿರಚಿತ್ತವುಳ್ಳವರಿಗೆಚಿರಶಾಂತಿಯ ನೀ ನೀಡುವೆ. ಶಾಶ್ವತ ಆಶ್ರಯಗಿರಿಸ್ವಾಮಿ ಸರ್ವೇಶ್ವರನೇಸತತ ಭರವಸೆಯಿಡಿರಿ ಆತನಲ್ಲೇ. ತಗ್ಗಿಸುವನಾತ ಎತ್ತರದಲಿ ವಾಸಿಸುವವರನ್ನುಕೆಡವಿ ನೆಲಸಮಮಾಡಿಧೂಳಾಗಿಸುವನು ಅವರು ವಾಸಮಾಡುವ ಉನ್ನತ ನಗರವನ್ನುಈಡು ಮಾಡುವುದು ಕಾಲ ತುಳಿತಕ್ಕೆದೀನದಲಿತರ ಪಾದ ತುಳಿತಕ್ಕೆ.

 ಕೀರ್ತನೆ: 118:1, 8-9, 19-21, 25-27a

 ಶ್ಲೋಕ: ಪ್ರಭುವಿನ ನಾಮದಲ್ಲಿ ಬರುವವನಿಗೆ ಜಯಮಂಗಳ.

 ಶುಭಸಂದೇಶ: ಮತ್ತಾಯ  7:21, 24-27


"ನನ್ನನ್ನು 'ಸ್ವಾಮೀಸ್ವಾಮೀ,' ಎನ್ನುವ ಪ್ರತಿಯೊಬ್ಬನೂ ಸ್ವರ್ಗ ಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ನನ್ನ ಈ ಮಾತುಗಳನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು ನೆರೆ ಬಂತು ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಮಳೆ ಬಂತುನೆರೆ ಬಂತುಗಾಳಿ ಬೀಸಿ ಆ ಮನೇಗೆ ಅಪ್ಪಳಿಸಿತುಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!" ಎಂದರು ಯೇಸುಸ್ವಾಮಿ.

05.12.2018

ಮೊದಲನೇ ವಾಚನ: ಯೆಶಾಯ  25:6-10

ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನು ಶ್ರೇಷ್ಟವಾದ ದ್ರಾಕ್ಷಾರಸವನ್ನು ಭೋಜನಕ್ಕಾಗಿ ಅಣಿಗೊಳಿಸುವರು. ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು. ಸರ್ವೇಶ್ವರಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರಸ್ವಾಮಿಯೇ ಇಂತೆಂದು ನುಡಿದಿದ್ದಾರೆ. ಇದು ನೆರವೇರಿದಾಗ ಜನರು: "ಇವರೇ ನಮ್ಮ ದೇವರುನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು. ಇವರೇ ಸರ್ವೇಶ್ವರಇವರನ್ನೇ ನೆಚ್ಚಿಕೊಂಡಿದ್ದೆವು ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ!" ಎಂದು ಹೇಳಿಕೊಳ್ಳುವರು. ಸರ್ವೇಶ್ವರಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.

ಕೀರ್ತನೆ: 23:1-3a, 3b-6 
ಶ್ಲೋಕ: ದೇವಮಂದಿರದಲ್ಲಿ ನಾ ವಾಸಿಸುವೆ ಚಿರಕಾಲವೆಲ್ಲ

ಶುಭಸಂದೇಶ: ಮತ್ತಾಯ  15:29-37

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟುಗಲಿಲೇಯ ಸರೋವರದ ತೀರದಲ್ಲೇ ನಡೆದುಒಂದು ಗಡ್ಡವನ್ನು ಹತ್ತಿ ಅಲ್ಲಿ ಕುಳಿತುಕೊಂಡರು. ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರುಕುರುಡರುಮೂಕರುಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗಣಪಡಿಸಿದರು. ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು. ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, "ಈ ಜನಸ್ತೋಮಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲದಾರಿಯಲ್ಲಿ ಬಳಲಿ ಬಿದ್ದಾರು," ಎಂದರು. ಅದಕ್ಕೆ ಶಿಷ್ಯರು, "ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?" ಎಂದು ಕೇಳಿದರು. "ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?" ಎಂದು ಯೇಸು ಕೇಳಿದರು. "ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ," ಎಂದು ಶಿಷ್ಯರು ಉತ್ತರ ಕೊಟ್ಟರು. ಆಗ ಜನ ಸಮೂಹಕ್ಕೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಯೇಸು ಆಜ್ಞಾಪಿಸಿದರು. ಆನಂತರ ಆ ಏಳು ರೊಟ್ಟಿಗಳನ್ನು ಮೀನುಗಳನ್ನು ತೆಗೆದುಕೊಂಡುದೇವರಿಗೆ ಸ್ತೋತ್ರ ಸಲ್ಲಿಸಿಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರುಶಿಷ್ಯರು ಜನರಿಗೆ ಬಡಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ತುಂಡುಗಳನ್ನು ಶಿಷ್ಯರು ಏಳು ಕುಕ್ಕೆಗಳ ತುಂಬ ತುಂಬಿಸಿಕೊಂಡರು.

04.12.2018

ಆಗಮನ ಕಾಲದ ಮೊದಲನೆಯ ಮಂಗಳವಾರ

ಮೊದಲನೇ ವಾಚನ: ಯೆಶಾಯ  11: 1-10

ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರುಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮಶಕ್ತಿ ಸಮಾಲೋಚನೆಯನ್ನಿಯುವ ಆತ್ಮಸರ್ವೇಶ್ವರನ ಅರಿವನುಭಯವನು ಹುಟ್ಟಿಸುವ ಆತ್ಮ ಅಹುದುನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಆತನಿಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದನಾಡದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದದಂಡಿಸುವನು ಲೋಕವನು ನುಡಿಯೆಂಬ ದಂಡದಿಂದಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ. ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆನಡೆಸುವುದವುಗಳನು ಚಿಕ್ಕ ಮಗು ಮೇಯಿಸುವುದಕೆ. ಮೇಯುವುವು ಕರಡಿಆಕಳುಗಳು ಒಟ್ಟಿಗೆಮಲಗುವುವು ಅವುಗಳ  ಮರಿಗಳ ಜೊತೆಗೆ. ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆಕೈ ಹಾಕುವುದು ಮೊಲೆಬಿಟ್ಟ ಮಗುಹಾವಿನ ಬಿಲದ ಒಳಗೆ. ಹಾನಿಯನುಕೇಡನು ಮಾಡರಾರೂ ನನ್ನ ಪರ್ವತದ ಮೇಲೆಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞನ ಧರೆಯಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ  ನಿಲ್ಲುವುದು. ಆತನನು ರಾಷ್ಪ್ರಗಳು ಆಶ್ರಯಿಸುವುವುವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.

ಕೀರ್ತನೆ:  72:1-2, 7-8, 12-13, 17
ಶ್ಲೋಕ:  ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ

 ಶುಭಸಂದೇಶ:  ಲೂಕ  10:21-24

ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, "ಪಿತನೇಭೂಸ್ವರ್ಗಗಳ ಒಡೆಯನೇಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆ ಮಾಡಿಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇಇದೇ ನಿಮ್ಮ ಸುಪ್ರೀತ ಸಂಕಲ್ಪನನ್ನ ಪಿತ ಸಮಸ್ತವನ್ನು ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಚಿಸುತ್ತಾನೋ ಅವರೇ ಹೊರತು ಮತ್ತಾರೂ ಅರಿಯರು." ಎಂದು ಹೇಳಿದರು. ಆನಂತರಯೇಸು ಶಿಷ್ಯರ ಕಡೆ ತಿರುಗಿಅವರಿಗೆ ಪ್ರತ್ಯೇಕವಾಗಿ, "ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಏಕೆಂದರೆ,  "ಎಷ್ಟೋ ಪ್ರವಾದಿಗಳು ಹಾಗೂ ಅರಸರುನೀವು ನೋಡುವುದನ್ನು ನೋಡುವುದಕ್ಕೂನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ," ಎಂದರು.

03.12.2018

ಸಾಧಾರಣ ಕಾಲದ ೩೫ನೇ ಸೋಮವಾರ

ಮೊದಲನೇ ವಾಚನ: ಯೆಶಾಯ  2:1-5

ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ: ಸರ್ವೇಶ್ವರನ ಶ್ರೀ ನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು. ದೇಶವಿದೇಶಗಳವರು ಬಂದು ಹೇಳುವರು ಹೀಗೆ: "ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನ್ನು ನಾವು ಹಿಡಿದು ನಡೆವಂತೆ ಆತನ ಪಥವನ್ನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ. ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನ್ನು ತೀರಿಸುವನು ರಾಷ್ಪ್ರ ರಾಷ್ಪ್ರಗಳ ನ್ಯಾಯವನ್ನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನ್ನು ಮಾರ್ಪಡಿಸುವರು ಕತ್ತಿಗಳನ್ನು ನೇಗಿಲ ಗುಳಿಗಳನ್ನಾಗಿ ಭರ್ಜಿಗಳನ್ನು ಕುಡುಗೋಲುಗಳನ್ನಾಗಿ. ಕತ್ತಿಯನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧ ವಿದ್ಯಯ ಕಲಿಕೆ ಅಗತ್ಯವಿರದು ಅವರಿಗೆ. ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.

ಕೀರ್ತನೆ: 122:1-2, 3-4b, 4cd-5, 6-7, 8-9
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ‌.

ಶುಭಸಂದೇಶ: ಮತ್ತಾಯ 8:5-11

ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು. "ಪ್ರಭೂ ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ ಬಹಳವಾಗಿ ನರಳುತ್ತಿದ್ದಾನೆ," ಎಂದು ವಿನಂತಿಸಿದನು. ಯೇಸು, "ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ," ಎಂದರು. ಅದಕ್ಕೆ ಆ ಶತಾಧಿಪತಿ, "ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೊಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲು ಸೈನಿಕರಿದ್ಧರೆ. ಅವರಲ್ಲಿ ಒಬ್ಬನಿಗೆ ನಾನು 'ಬಾ' ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ  'ಹೋಗು' ಎಂದರೆ ಹೋಗುತ್ತಾನೆ. ಸೇವಕನಿಗೆ, 'ಇಂಥದ್ದನ್ನು ಮಾಡು' ಎಂದರೆ ಮಾಡುತ್ತಾನೆ." ಎಂದನು. ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: "ಇಂಥ ಗಾಡ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಪೂರ್ವ ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಾಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು,"

02.12.2018

ಮೊದಲನೇ ವಾಚನ: ಯೆರೆಮೀಯ  33:14-16

ಸರ್ವೇಶ್ವರ ಹೀಗೆನ್ನುತ್ತಾರೆ: "ಗಮನಿಸಿರಿ! ದಿನಗಳು ಬರಲಿವೆಇಸ್ರಯೇಲ್ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.   ಆ ಕಾಲದಲ್ಲಿಆದಿನಗಳಲ್ಲಿ,  ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು. ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. "ಯೆಹೋವಚಿದ್ಕೇನು" (ಅಂದರೆ ಸರ್ವೇಶ್ವರನೇ ನನ್ನ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.

ಕೀರ್ತನೆ: 25:4-5, 8-9, 10-14
ಶ್ಲೋಕ: ಎತ್ತಿರುವೆ ಪ್ರಭೂ ಹೃನ್ಮನಗಳನು ನಿನ್ನತ್ತ

ಎರಡನೇ ವಾಚನ: 1 ಥೆಸಲೋನಿಯರಿಗೆ  3:12-4:2

ಸಹೋದರರೇನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ದರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ. ಕಡೆಯದಾಗಿ ಸಹೋದರರೇನೀವು ಹೇಗೆ ಬಾಳಬೇಕುದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕುಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹಾಗೂ ಪ್ರಭೋಧಿಸುತ್ತೇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.

ಶುಭಸಂದೇಶ: ಲೂಕ 21:25-28, 34-36

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಸೂರ್ಯಚಂದ್ರನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವುಮೊರೆಯುವ ತರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕು ತೋಚದೆ ತತ್ತರಿಸಿಹೋಗುವುವು. ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು. ಆಗ ನರಪುತ್ರನು ಮಹಾಶಕ್ತಿಯಿಂಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಡನಾಗಿ ಬರುವುದನ್ನು ಜನರು ಕಾಣುವರು. ಇವೆಲ್ಲವೂ  ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿಎಕೆಂದರೆನಿಮ್ಮ ಉದ್ಧಾರವು ಸಮೀಪಿಸಿತು. ಮಿತಿಮೀರಿದ ಭೋಜನದಿಂದಾಗಲಿಕುಡಿತದಿಂದಾಗಲಿಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತುಜಾಗರೂಕರಾಗಿರಿ! ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು. ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲ್ಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರಿಕೆಯಿಂದಿರಿ," ಎಂದರು.