24.04.22 - "ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು"
23.04.22 - " ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯವನ್ನು ಕುರಿತು ಮೌನದಿಂದಿರಲಾಗದು."
ಮೊದಲನೆಯ ವಾಚನ
ಪ್ರೇಷಿತರ ಕಾರ್ಯಕಲಾಪಗಳಿಂದ ವಾಚನ 4:13-21
ಅವಿದ್ಯಾವಂತರು ಹಾಗೂ ಜನ ಸಾಮಾನ್ಯರು ಆಗಿದ್ದರೂ, ಪ್ರೇಷಿತರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು, ಯೇಸುವಿನ ಸಂಗಡಿಗರೆಂದು ಇವರ ಗುರುತುಹಚ್ಚಿದರು. ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು. ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೆ ಚರ್ಚಿಸಲಾರಂಭಿಸಿದರು: " ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಬುತ ಜೆರುಸಲೇಮಿನ ಸರ್ವರಿಗೂ ತಿಳಿದು ಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ. ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ, " ಎಂದುಕೊಂಡರು. ಅನಂತರ ಪ್ರೇಷಿತರನ್ನು ಒಳಕ್ಕೆ ಕರೆದು, " ಇನ್ನು ಮುಂದೆ ಯೇಸುವಿನ ಹೆಸರೆತ್ತಿ ಮಾತನಾಡಬಾರದು, ಬೋಧಿಸಕೂಡದು, "ಎಂದು ಕಟ್ಟಪ್ಪಣೆ ಮಾಡಿದರು. ಆಗ ಪೇತ್ರ ಮತ್ತು ಯೊವಾನ್ನರು, " ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಿಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ. ನಾವಂತೂ ಕಣ್ಣಾರೆ ಕಂಡು ಕಿವಿಯಾರೆ ಕೇಳಿದ ವಿಷಯವನ್ನು ಕುರಿತು ಮೌನದಿಂದಿರಲಾಗದು, " ಎಂದು ಬದಿಲು ನುಡಿದರು. ನಡೆದ ಅದ್ಬುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆ ಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.
ಕೀರ್ತನೆ 118:1, 14-21
ಶ್ಲೋಕ: ಸದುತ್ತರವನ್ನು
ಪಾಲಿಸಿದ ಪ್ರಭೂ, ನಿನಗೆ ವಂದನೆ.
1. ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ|
ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ||
ಪ್ರಭುವೇ ನನಗೆ ಬಲವು, ಧೈರ್ಯವು|
ಆತನಿಂದಲೇ ನನಗೆ ಉದ್ಧಾರವು||
ಜಯಘೋಷ, ಹರ್ಷಸುನಾದ
ಸಜ್ಜನರ ಬಿಡಾರದಿಂದ|
ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ||
ಶ್ಲೋಕ
2. ವಿಜಯ ಸಾಧನ ಪ್ರಭುವಿನಾ ಬಲಗೈಯಿಂದ|
ಪರಾಕ್ರಮ, ಪ್ರದರ್ಶನವೂ ಅದರಿಂದ||
ಸಾಯೆನು, ಜೀವದಿಂದಿರುವೆನು
ನಾನು|
ಪ್ರಭುವಿನ ಕಾರ್ಯಗಳನು ಸಾರುವೆನು||
ಗುರಿಪಡಿಸಿಹನು
ಎನ್ನನ್ನು ಪ್ರಭು ಕಠಿಣ ಶಿಕ್ಷೆಗೆ|
ಆದರೂ ಗುರಿಮಾಡಲಿಲ್ಲ ಎನ್ನನ್ನು ಮರಣಕೆ||
ಶ್ಲೋಕ
3. ತೆರೆಯಿರಿ ಎನಗೆ ನೀತಿದ್ವಾರಗಳನು|
ಒಳನುಗ್ಗಿ ಹೊಗಳುವೆನು ಪ್ರಭುವನು||
ಇದುವೇ ದ್ವಾರ ಪ್ರಭುವಿನ ಮಂದಿರಕೆ|
ಇದುವೇ ಪ್ರವೇಶಮಾರ್ಗ ಸಜ್ಜನರಿಗೆ||
ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ|
ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾ ವಂದನೆ||
ಶ್ಲೋಕ
ಘೋಷಣೆ
ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ
! ಪ್ರಭುವೇ ನಿಯೋಜಿಸಿದ ದಿನವಿದು | ಹರ್ಷಿಸಿ ಆನಂದಿಸೋಣ ಇಂದು || ಅಲ್ಲೆಲೂಯ !
ಸಂತ ಮಾರ್ಕನು ಬರೆದ ಪವಿತ್ರ ಶುಭಸಂದೇಶ - 16:9-15
ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸು, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ. ಈಕೆ ಹೋಗಿ ತಾನು ಕಂಡದ್ದನ್ನು ಯೇಸುವಿನ ಸಂಗಡಿಗರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಾ ಕುಳಿತಿದ್ದರು. ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ. ತರುವಾಯ, ಹಳ್ಳಿಯೊಂದಕ್ಕೆ ಪ್ರಯಾಣ ಮಾಡುತ್ತಿದ್ದ ತಮ್ಮ ಇಬ್ಬರು ಶಿಷ್ಯರಿಗೆ ಯೇಸು ಇನ್ನೊಂದು ರೀತಿಯಲ್ಲಿ ಕಾಣಿಸಿಕೊಂಡರು. ಇವರಿಬ್ಬರೂ ಹಿಂದುರುಗಿ ಬಂದು, ಮಿಕ್ಕ ಶಿಷ್ಯರಿಗೆ ಇದನ್ನು ತಿಳಿಸಿದರು. ಆದರೆ ಅದನ್ನು ಅವರು ನಂಬದೆ ಹೋದರು. ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟ ಮಾಡುತ್ತಿದ್ದಾಗ ಯೇಸು ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬಿದಿದ್ದ ಕಾರಣ ಅವರ ಅವಿಶ್ವಾವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು. ಬಳಿಕ ಅವರಿಗೆ, " ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ, " ಎಂದರು.
ಮನಸ್ಸಿಗೊಂದಿಷ್ಟು : ಯೇಸುವಿನ ಪುನರುತ್ಥಾನ ದೈವ ಯೋಜಿತವಾದುದೇ ಆದರೂ ಅಂದಿನ ಯೇಸುವಿನ ಆಪ್ತರೇ ಅದನ್ನು ಮೊದಮೊದಲು ನಂಬಲಿಲ್ಲ ಎನ್ನುವುದನ್ನು ಇಂದಿನ ಶುಭ ಸಂದೇಶ ಹೇಳುತ್ತದೆ. ಯೇಸುವನ್ನು ಕಣ್ಣಾರೆ ಕಂಡವರು ಹೇಳಿದರೂ ಅವರು ನಂಬದೆ ಹೋದದ್ದನ್ನು ಯೇಸುವೇ ಖಂಡಿಸುತ್ತಾರೆ. ನಮ್ಮ ಮೇಲೂ ಪ್ರಭುವಿನ ಪುನರುತ್ಥಾನ ಬೀರಿರುವ ಪ್ರಭಾವವೇನು ಎಂದು ನಾವು ಕೇಳಿಕೊಳ್ಳಬೇಕಾಗುತ್ತದೆ. ಅಂದು ಶಿಷ್ಯರಿಗೆ ಸಹಜವಾದ ಭಯವಿತ್ತು, ಗೊಂದಲಗಳಿದ್ದವು, ಅಜ್ಞಾನವಿತ್ತು, ನಂಬಲು ಅಡ್ಡ ಗೋಡೆಗಳಿದ್ದವು. ಆದರೆ ನಮಗೆ ಪುನರುತ್ಥಾನದ ಬಗ್ಗೆ ಪೂರ್ಣ ಜ್ಞಾನವನ್ನು ಶುಭಸಂದೇಶ ನೀಡಿದೆ. ನಮ್ಮ ಹೃದಯವು ಕ್ರಿಸ್ತನ ಪುನುರುತ್ಥಾನವನ್ನು ಒಪ್ಪಿಕೊಳ್ಳಲು ವಿಶ್ವಾಸವೊಂದೇ ಕೊರತೆ. ಶಿಷ್ಯರು, ಆಪ್ತರು ಮೊದಲು ನಂಬಲಿಲ್ಲ, ಆದರೆ ನಂಬಿದ ಮೇಲೆ ಒಂದು ಕ್ಷಣವೂ ಸುಮ್ಮನಿರಲಿಲ್ಲ. ಯೇಸುವನ್ನು , ಅವರ ಪುನರುತ್ಥಾನವನ್ನು ಇಡೀ ವಿಶ್ವಕ್ಕೆ ಸಾರಿದರು. ವಿಶ್ವದ ಎಲ್ಲೆಡೆಯಲ್ಲೂ ಶುಭಸಂದೇಶವನ್ನು ಪ್ರಬೋಧಿಸಿರಿ" ಯೇಸುವಿನ ಮಾತು ಮೊದಲು ನಮ್ಮ ಹೃದಯದಲ್ಲಿ ಸಾಕಾರಗೊಳ್ಳಬೇಕು.
22.04.22 - ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ
ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು. ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೋಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು. ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು. ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಿದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು. ಪ್ರಧಾನ ಯಾಜಕ ಅನ್ನಾ ಹಾಗೂ ಕಾಯಫ, ಯೊವಾನ್ನ, ಅಲೆಕ್ಸಾಂಡರ್ ಮತ್ತು ಪ್ರಧಾನ ಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು. ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, " ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ ? " ಎಂದು ಪ್ರಶ್ನಿಸಿದರು. ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು : "ಜನರ ಅಧಿಕಾರಿಗಳೇ, ಪ್ರಮುಖರೇ, ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ. ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ : ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ. ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಆವರನ್ನು ಪುನಲುಗೊಳಿಸಿದ್ದಾರೆ. 'ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು' ಎಂದು ಬರೆದಿರುವುದು ಇವರನ್ನು ಕುರಿತೇ. ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ."
21.04.22 - " ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ?"
20.04.22
19.04.22
18.04.22 - "ನಿಮಗೆ ಶುಭವಾಗಲಿ!"
ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: "ಯೆಹೂದ್ಯ ಸ್ವಜನರೇ, ಜೆರಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ. ಇಸ್ರಯೇಲ್ ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸು ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಬುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ. ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್ ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸೀದಿರಿ. ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ-ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು. ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ:
'ಪ್ರಭು ಇಹನು ಎನ್ನ
ಕಣ್ಮುಂದೆ ಸತತ,
ನಾ ಹೆದರದಂತೆ ಆತನಿಹನು
ಎನ್ನ ಹತ್ತಿರ.
ಇದಕಾರಣ ಹರ್ಷಿಸಿತು
ಎನ್ನ ಹೃದಯ,
ತುಳುಕಿತು ಸಂತಸ ಎನ್ನ
ನಾಲಗೆಯಿಂದ,
ನಂಬಿ ನಿರೀಕ್ಷೆಯಿಂದಿರು
ವುದು ಎನ್ನ ಮರ್ತ್ಯದೇಹ.
ಏಕೆನೆ, ದೂಡಲಾರೆ
ಪಾತಾಳಕೆ ನೀನೆನ್ನ
ಜೀವಾತ್ಮವನು.
ಕೊಳೆಯಬಿಡಲಾರೆ
ನೀನೊಲಿದಾತನನು.
ಅಮರ ಜೀವಮಾರ್ಗವನೆನಗೆ
ತೋರ್ಪಡಿಸಿದೆ,
ನಿನ್ನ ಶ್ರೀ ಸಾನ್ನಿಧ್ಯ
ಸಂತಸದಿಂದೆನ್ನ
ಭರಿತನಾಗಿಸುವೆ.'
"ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಥಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು, ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ. ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ. ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: 'ಆತನನ್ನು ಪಾತಾಳಕ್ಕೆ ದೂಡಲಿಲ್ಲ, ದೇಹ ಕೊಳೆತುಹೋಗಲು ಬಿಡಲಿಲ್ಲ. ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸೀದ್ದಾರೆ, ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ಯೇಸು ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು."
ಕೀರ್ತನೆ 16:1-2, 5, 7-11
ಶ್ಲೋಕ: ನೀಡು ದೇವಾ ರಕ್ಷಣೆಯನು, ನಾ ನಿನಗೆ ಶರಣಾಗತನು.
ನೀಡು ದೇವಾ ರಕ್ಷಣೆಯನು|
ನಾ ನಿನಗೆ ಶರಣಾಗತನು||
"ನೀನೇ ನನ್ನೊಡೆಯ" ಎಂದು ನಾ ನುಡಿದೆ|
ನಿನ್ನ ಹೊರತು ನನಗಿಲ್ಲ ಒಳಿತು ಎಂದೆ||
ನನ್ನ ಸ್ವತ್ತೂ ಸ್ವಾಸ್ಥ್ಯವೂ ನೀನೇ|
ನಿನ್ನ ಕೈಯಲ್ಲಿದೆ ಪ್ರಭೂ, ನನ್ನ ವಿಮೆ||
ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ|
ಅಂದಕಾರದೊಳೂ ನನ್ನ ಮನಸ್ಸಾಕ್ಷಿಯೇ ನನಗೆ ಬೋಧಕ||
ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ|
ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ?||
ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ|
ಆನಂದಗೊಂಡಿದೆ ಮನ ಸುರಕ್ಷಿತವಿದೆ ಕಾಯ||
ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ|
ಬಿಟ್ಟುಕೊಡುವುದಿಲ್ಲ ನಿನ್ನ ಈ ಭಕ್ತನನು ಪಾತಾಳಕೆ||
ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು|
ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು|
ನಿನ್ನ ಬಲಗೈ ನೀಡುವುದು ಭಾಗ್ಯವನು||
ಘೋಷಣೆ ಕೀರ್ತನೆ 118:24
ಅಲ್ಲೆಲೂಯ, ಅಲ್ಲೆಲೂಯ ! ಪ್ರಭುವೇ ನಿಯೋಜಿಸಿದ ದಿನವಿದು | ಷರ್ಷಿಸಿ ಆನಂದಿಸೋಣ ಇಂದು || ಅಲ್ಲೆಲೂಯ !
ಶುಭಸಂದೇಶ: ಮತ್ತಾಯ 28:8-15
28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು
ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...










