30.11.22

ಮೊದಲನೇ ವಾಚನ: ರೋಮನ್ನರಿಗೆ  10: 9-18

"ಯೇಸುಸ್ವಾಮಿಯೇ ಪ್ರಭು" ಎಂದು ನೀನು ಬಾಯಿಂದ ನಿವೇದಿಸಿಅವರನ್ನು ದೇವರು ಸಾವಿನಿಂದ ಪುನರುತ್ದಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ. ಹೌದುಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂದವನ್ನು ಪಡೆಯುತ್ತಾನೆಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ. ಏಕೆಂದರೆ, "ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ." ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ. ಈ ವಿಷಯದಲ್ಲಿ ಯೆಹೂದ್ಯರುಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ. "ಪ್ರಭುವಿನ ನಾಮಸ್ಮರಣೆ ಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ," ಎಂದು ಲಿಖಿತವಾಗಿದೆ. ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆಭೋಧಿಸುವವರು ಇಲ್ಲದಿದ್ದರೆ ಅವರ ವಿಷಯಗಳನ್ನು ಕುರಿತು ಕೇಳುವುದಾದರೂ ಹೇಗೆಭೋಧಿಸುವವರನ್ನು ಕಳುಹಿಸದೆ ಹೋದರೆಅವರು ಶುಭಸಂದೇಶವನ್ನು ಭೋಧಿಸುವುದಾದರೂ ಹೇಗೆ? "ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ," ಎಂದು ಪವಿತ್ರ ಗ್ರಂಥದಲ್ಲೇ ಬರೆಯಲಾಗಿದೆ. ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಃಗೀಕರಿಸಲಿಲ್ಲ. ಆದ್ದರಿಂದಲೇ ಯೆಶಾಯನು, "ಪ್ರಭುವೇನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?"  ಎಂದು ಮೊರೆಯಿಟ್ಟಿದ್ದಾನೆ. ಇಂತಿರಲುಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ. ಶುಭಸಂದೇಶ ಕ್ರಿಸ್ತಯೇಸುವನ್ನು ಭೋಧಿಸುವುದರ ಮೂಲಕ ಪ್ರಕಟವಾಗುತ್ತದೆ. ಈಗ ನನ್ನದೊಂದು ಪ್ರಶ್ನೆ; "ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೇ?" ನಿಶ್ಚಯವಾಗಿ ಇತ್ತು. ಪವಿತ್ರ ಗ್ರಂಥದಲ್ಲಿ ಹೇಳಿರುವಂತೆ: "ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು,"

ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ.


ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು|
ತಾರಮಂಡಲ ತೋರುತಿದೆ ದೇವರ ಕೈಕೃತಿಗಳನು||
ದಿನವು ಮರುದಿನಕೆ ಈ ಪ್ರಕಟನೆಯನು|
ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು||

ಅವುಗಳಿಗೆ ಮಾತಿಲ್ಲ, ಅವುಗಳಿಗೆ ಶಬ್ದವಿಲ್ಲ|
ಅವುಗಳ ಸ್ವರವಂತೂ ಕೇಳಿ ಬರುವುದಿಲ್ಲ||
ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ|
ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ||

ಘೋಷಣೆ: ಮತ್ತಾಯ 4:19

ಅಲ್ಲೆಲೂಯ, ಅಲ್ಲೆಲೂಯ!
ನನ್ನನ್ನು ಹಿಂಬಾಲಿಸಿ ಬನ್ನಿ; ನಿಮ್ಮನ್ನು ಮನುಷ್ಯರನೇ ಹಿಡಿಯುವವರನ್ನಾಗಿ ಮಾಡುವೆನು.
ಅಲ್ಲೆಲೂಯ!


ಶುಭಸಂದೇಶ: ಮತ್ತಾಯ  4:18-22

ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದು ಹೋಗುತ್ತಿದ್ದರು ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ 'ಪೇತ್ರಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಆಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು. "ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು," ಎಂದು ಹೇಳಿ ಯೇಸು ಅವರನ್ನು ಕರೆದರು. ತಕ್ಷಣವೇಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು. ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು. ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

29.11.22 - “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು"

ಮೊದಲನೇ ವಾಚನ: ಯೆಶಾಯ 11: 1-10 


ಜೆಸ್ಸೆಯನ ಬುಡದಿಂದ ಒಡೆಯುವು ದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು. ನೆಲಸುವುದಾತನ ಮೇಲೆ ಜ್ಞಾನವಿವೇಕ ದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ. ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ. ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ. ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ. ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ. ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈ ಹಾಕುವುದು ಮೊಲೆಬಿಟ್ಟ ಮಗು ಹಾವಿನಬಿಲದ ಒಳಗೆ. ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ. ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿ ನಿಲಯವು.

ಕೀರ್ತನೆ: 72: 1-2, 7-8, 12-13, 17 
ಶ್ಲೋಕ: ಬೆಳೆಯಲಿ ಆತನ ಪಾಲನೆಯಲ್ಲಿ ನ್ಯಾಯನೀತಿ, ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ. 

ಶುಭಸಂದೇಶ: ಲೂಕ 10: 21-24 

ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವರೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು. ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು. ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

28.11.22 - "ತಾವು ಒಂದೇ ಒಂದು ಮಾತು ಹೇಳಿದರೆ ಸಾಕು"

ಮೊದಲನೇ ವಾಚನ: ಯೆಶಾಯ 4:2-6 


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆಯುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು. ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು. ಆಗ ಒಡೆಯರಾದ ಸ್ವಾಮಿ ನ್ಯಾಯ ನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿ ಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದು ಹಾಕುವರು. ಸಿಯೋನ್ ಪರ್ವತದ ಮೇಲೆಲ್ಲಾ, ಅಲ್ಲಿನ ಸಭಾ ಕೂಟಗಳ ಮೇಲೆಲ್ಲಾ ಹಗಲಲ್ಲಿ ಧೂಮ ಮೇಘವನ್ನು, ರಾತ್ರಿಯಲ್ಲಿ ಪ್ರಜ್ವಲಿಸುವ ಅಗ್ನಿ ಪ್ರಕಾಶವನ್ನು ಉಂಟು ಮಾಡುವರು. ದೇವರ ಮಹಿಮೆ ಛತ್ರಿಯಂತೆಯೂ ಚಪ್ಪರದಂತೆಯೂ ಎಲ್ಲರನ್ನು ಆವರಿಸುವುದು. ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆ ಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು. 

ಕೀರ್ತನೆ: 122:1-2, 3-4, 4-5, 6-7, 8-9 

ಶ್ಲೋಕ: ಪ್ರಭುವಿನಾಲಯಕ್ಕೆ ಹೋಗೋಣ ಬಾ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ 

ಶುಭಸಂದೇಶ: ಮತ್ತಾಯ 8:5-11 

ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು. "ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ," ಎಂದು ವಿನಂತಿಸಿದನು. ಯೇಸು, "ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ," ಎಂದರು. ಅದಕ್ಕೆ ಆ ಶತಾಧಿಪತಿ, "ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈ ಕೆಳಗಿರುವವನು, ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, "ಬಾ"  ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, "ಹೋಗು" ಎಂದರೆ ಹೋಗುತ್ತಾನೆ. ಸೇವಕನಿಗೆ, "ಇಂಥದ್ದನ್ನು ಮಾಡು" ಎಂದರೆ  ಮಾಡುತ್ತಾನೆ," ಎಂದನು. ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: "ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಪೂರ್ವ ಪಶ್ಚಿಮ ದಿಕ್ಕುಗಳಿಂದ ಆನೇಕ ಜನರು ಬಂದು ಅಬ್ರಾಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯ ಹಬ್ಬದೂಟದಲ್ಲಿ ಭಾಗಿಗಳಾಗುವರು.

27.11.22 - "ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು."

ಮೊದಲನೇ ವಾಚನ: ಯೆಶಾಯ 2:1-5 

ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ: ಸರ್ವೇಶ್ವರನ ಶ್ರೀ ನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು. ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದುಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದುಬರುವುವು. ದೇಶವಿದೇಶಗಳವರು ಬಂದು ಹೇಳುವರು ಹೀಗೆ: "ಬನ್ನಿ, ಹೋಗೊಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ಆತನ ಮಾರ್ಗಗಳನು. ನಾವು ಹಿಡಿದುನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ; ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ. ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು. ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ, ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ; ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ, ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ." 

ಕೀರ್ತನೆ: 122:1-2, 3-4, 4-5, 6-7, 8-9 

ಶ್ಲೋಕ: ಪ್ರಭುವಿನಾಲಾಯಕೆ ಬಾ ಹೋಗೋಣ ಎಂದಾಗ ಆಯಿತೆನಗೆ ಆನಂದ, ಜನರೆನ್ನ ಕರೆದಾಗ 


1. ಪ್ರಭುವಿನಾಲಾಯಕೆ ಬಾ ಹೋಗೋಣ ಎಂದಾಗ |
ಆಯಿತೆನಗೆ ಆನಂದ, ಜನರೆನ್ನ ಕರೆದಾಗ ||
ನಮ್ಮ ಕಾಲುಗಳು ಓ ಜೆರುಸಲೇಮೇ |
ತಲುಪಿವೆ ನಿನ್ನ ಪುರದ್ವಾರಗಳನೇ ||

2. ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ |
ಮಾಡುವರಿಲ್ಲಿಯೆ ಪ್ರಭುವಿನ ನಾಮಕೀರ್ತನೆ |
ಪಾಲಿಪರಿಂತು ಇಸ್ರಯೇಲರಿಗೆ ವಿಧಿಸಿದಾಜ್ಞೆ ||
ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು |
ದಾವೀದನ ಮನೆತನದವರ ಸಿಂಹಾಸನಗಳು ||

3. ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ |
"ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ ||
ಶುಭವಿರಲಿ ನಿನ್ನೀ - ಪೌಳಿಗೋಡೆಗಳೊಳಗೆ |
ಸಂರಕ್ಷಣೇ ಇರಲಿ ನಿನ್ನ ಅರಮನೆಯೊಳಗೆ" ||

4. ನನ್ನ ಬಂಧುಬಳಗದವರ ನಿಮಿತ್ತ |
"ನಿನಗೆ ಶುಭವಿರಲಿ" ಎಂಬುದು ನನ್ನ ಮತ ||
ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ |
ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ ||

ಎರಡನೇ ವಾಚನ: ರೋಮನರಿಗೆ 13:11-14 

ಸಹೋದರರೇ, ಇದೆಂತಹ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತ ಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ. ಇರುಳು ಬಹುಮಟ್ಟಿಗೆ ಕಳೆಯಿತು, ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕ್ರತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ. ದುಂದೌತಣ - ಕುಡಿತನಗಳಲ್ಲಾಗಲೀ, ಕಾಮವಿಲಾಸ - ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ - ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ. ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ. 

ಶುಭಸಂದೇಶ: ಮತ್ತಾಯ 24:37-44 

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನೋವನ ಕಾಲದಲ್ಲಿ ಆದಂತೆಯೇ ನರಪುತ್ರನು ಬರುವಾಗಲೂ ಆಗುವುದು. ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಡುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು. ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು. ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು. ಒಂದೆ ಕಲ್ಲಿನಲ್ಲಿ ಬೀಸುತ್ತ ಇರುವ ಇಬ್ಬರು ಮಹಿಳೆಯರಲ್ಲಿ ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು. ಆದ್ದರಿಂದ ಎಚ್ಚರವಾಗಿರಿ. ಕಳ್ಳನು ಬರುವ ಗಳಿಗೆ ಮನೆಯ ಯಾಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು ಅಲ್ಲವೆ? ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಎಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.

26.11.22 - “ಮಿತಿ ಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ"

ಮೊದಲನೇ ವಾಚನಪ್ರಕಟಣಾ ಗ್ರಂಥ 22:1-7


ಬಳಿಕ  ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನುಅದು ಸ್ಫಟಿಕದಂತೆ ಮಿನುಗುತ್ತಿತ್ತುಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತುಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದುಪ್ರತೀ ತಿಂಗಳೂ ಫಸಲನ್ನೀಯುವಂಥದ್ದು ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದುಶಾಪಗ್ರಸ್ತವಾದುದು ಯಾವುದೂ  ನಗರದಲ್ಲಿ ಇರದುದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದುಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು ಹೆಸರು  ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದುರಾತ್ರಿ ಎಂಬುದೇ ಅಲ್ಲಿ ಇರದುದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದುದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರುಯುಗಯುಗಾಂತರಕ್ಕೂ ಅವರು ರಾಜ್ಯವಾಳುವರುಅನಂತರ  ದೇವದೂತನು ನನಗೆ, “ ಮಾತುಗಳು ಸತ್ಯವಾದುವುನಂಬಲರ್ಹವಾದುವುಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆಯೇಸುಸ್ವಾಮಿ ನುಡಿಯುವುದನ್ನು ಕೇಳು ಇಗೋ ನಾನು ಬೇಗನೆ ಬರುತ್ತೇನೆ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.

ಕೀರ್ತನೆ95:1-2, 3-5, 6-7

ಶ್ಲೋಕ: ಪ್ರಭು ಯೇಸುವೇ, ಬನ್ನಿ  

ಶುಭಸಂದೇಶ: ಲೂಕ 21:34-36 

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ಮಿತಿ ಮೀರಿದ ಭೋಜನದಿಂದಾಗಲಿಕುಡಿತದಿಂದಾಗಲಿಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತುಜಾಗರೂಕರಾಗಿರಿ!  ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕುಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.

25.11.22 - "ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ"

ಮೊದಲನೇ ವಾಚನಪ್ರಕಟಣಾ ಗ್ರಂಥ 20:1-4, 11--21:2


ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು. ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು. ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು. ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು. ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು. ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು. 

ಕೀರ್ತನೆ84:3, 4, 5-6, 8

ಶ್ಲೋಕ: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ  

ಶುಭಸಂದೇಶ: ಲೂಕ 21:29-33


ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ. ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ. ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...